ಎಸ್‌ಎಸ್‌ಎಲ್‌ಸಿ ಫಲಿತಾಂಶ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಅಗ್ರಸ್ಥಾನ : ಯಶ್‌ಪಾಲ್ ಸುವರ್ಣ ಅಭಿನಂದನೆ

ಉಡುಪಿ : ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಶೇ. 91.12, ಉಡುಪಿ ಜಿಲ್ಲೆ ಶೇ. 89.96 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ರಾಜ್ಯಕ್ಕೆ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆಯುವ ಮೂಲಕ ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಇಲಾಖೆಗೆ ಉಡುಪಿ ಶಾಸಕ ಶ್ರೀ ಯಶ್‌ಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಜಿಲ್ಲೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆಯುವ ಮೂಲಕ ಕರಾವಳಿ ಜಿಲ್ಲೆಯ ಶಿಕ್ಷಣದ ಗುಣಮಟ್ಟವನ್ನು ಮತ್ತೊಮ್ಮೆ ರಾಜ್ಯ ಮಟ್ಟದಲ್ಲಿ ಸಾಬೀತು ಮಾಡಿದೆ.

ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ, ಶಿಕ್ಷಕ ವೃಂದ, ಶಾಲಾಡಳಿತ ಮಂಡಳಿ, ಪೋಷಕರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಉಡುಪಿ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

Related posts

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ

ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ : ಡಾ. ತಲ್ಲೂರು

National Fame Award of India Books of Award – Sushanth Brahmavar