ಎಸ್‌ಎಸ್ಎಲ್‌ಸಿ ಫಲಿತಾಂಶ : ಉಡುಪಿ ಜಿಲ್ಲೆ ಸಾಧನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ

ಉಡುಪಿ : ಉಡುಪಿ‌ ಜಿಲ್ಲೆ 2024-25ನೇ ಸಾಲಿನ ಎಸ್‌ಎಸ್ಎಲ್‌ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆಯುವ ಮೂಲಕ ಎಂದಿನಂತೆ ಉತ್ತಮ ಸಾಧನೆ ಮಾಡಿದ್ದು,‌ ಜಿಲ್ಲೆಯ ಮಕ್ಕಳ ಸಾಧನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಶ್ಲಾಘನೆಗೆ ವ್ಯಕ್ತಪಡಿಸಿದ್ದಾರೆ.

ಶೇಕಡ 89.96 ಫಲಿತಾಂಶ ಜಿಲ್ಲೆಗೆ ಲಭಿಸಿದ್ದು, ಈ ಸಾಧನೆಗೆ ಕಾರಣರಾದ ಜಿಲ್ಲಾಡಳಿತ, ಜಿಲ್ಲಾ ಮಟ್ಟದ ಶಿಕ್ಷಣ ಇಲಾಖೆಯ ಅಧಿಕಾರಿ ವರ್ಗದವರನ್ನು ಅಭಿನಂದಿಸುತ್ತೇನೆ. ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದ ಉಡುಪಿ ಜಿಲ್ಲೆ ಇದೀಗ ಎಸ್‌ಎಸ್ಎಲ್‌ಸಿ ಫಲಿತಾಂಶದಲ್ಲೂ ಉತ್ತಮ ಸಾಧನೆ ಮಾಡಿದೆ ಎಂದು ಹೇಳಿದ್ದಾರೆ.

ಈ ಪರೀಕ್ಷೆಯಲ್ಲಿ ಪಾಸಾದ ಎಲ್ಲಾ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸುತ್ತೇನೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ