ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ : ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ. 7ರಂದು ಬುಧವಾರ ರಾತ್ರಿ ಬೆಂಜನಪದವುನಲ್ಲಿ ನಡೆದಿದೆ.

ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ (15) ಆತ್ಮಹತ್ಯೆಗೆ ಶರಣಾದ ಬಾಲಕ.

ಬಡಕಬೈಲಿನ ಖಾಸಗಿ ಶಾಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಯಾಗಿದ್ದ ಈತ ಕಲಿಕೆ ವಿಚಾರದಲ್ಲಿ ಆತ್ಮಹತ್ಯೆ ‌ಮಾಡಿಕೊಂಡಿರಬಹುದು ಎಂಬುದನ್ನು ಮನೆಯವರು ಶಂಕಿಸಿದ್ದಾರೆ.

ಅಗಸ್ಟ್ 7ರಂದು ಬುಧವಾರ ರಾತ್ರಿ ಸುಮಾರು 7.30 ಗಂಟೆಗೆ ಸ್ನಾನ ಮಾಡಲೆಂದು ಬಚ್ಚಲು ಕೋಣೆಗೆ ತೆರಳಿದ ಮಗ 8 ಗಂಟೆಯಾದರೂ ವಾಪಸ್ ಬಾರದೇ ಇರುವುದನ್ನು ಕಂಡ ತಾಯಿ ಬಾಗಿಲು ಬಡಿದರೂ ಬಾಗಿಲು ತೆಗೆಯದ ಹಿನ್ನೆಲೆಯಲ್ಲಿ ಬಾಗಿಲು ಮುರಿದು ಒಳಗೆ ನುಗ್ಗಿದಾಗ ಈತ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡಿರುವುದು ಗೊತ್ತಾಗಿದೆ.

ಕೂಡಲೇ ಬಾಲಕನನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಪರೀಕ್ಷೆ ನಡೆಸಿದಾಗ ಆತ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.

ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ