ರಕ್ತದಾನಿ ಮುಖ್ಯ ಶಿಕ್ಷಕ ದೇವದಾಸ್ ಪಾಟ್ಕರ್‌ಗೆ ರಾಜ್ಯ ಪುರಸ್ಕಾರ

ಶಿರ್ವ : ಕರ್ನಾಟಕ ರಾಜ್ಯ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ನೇತೃತ್ವದಲ್ಲಿ ವಿಶ್ವ ರೆಡ್‌ಕ್ರಾಸ್‌ ದಿನಾಚರಣೆ ಪ್ರಯುಕ್ತ ಬೆಂಗಳೂರು ರೆಡ್‌ಕ್ರಾಸ್ ಭವನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮುಡಾರು ಸರಕಾರಿ ಶಾಲಾ ಮುಖ್ಯಶಿಕ್ಷಕ ದೇವದಾಸ್ ಪಾಟ್ಕರ್ ಮುದರಂಗಡಿ ಅವರಿಗೆ ರಾಜ್ಯ ಪುರಸ್ಕಾರ ನೀಡಿ ಗೌರವಿಸಲಾಯಿತು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ರಾಜ್ಯಾಧ್ಯಕ್ಷ ವಿಜಯಕುಮಾ‌ರ್ ಪಾಟೀಲ ಶಾವಂತಗೇರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವದಾಸ್ ಪಾಟ್ಕರ್ ಅವರಿಗೆ ಕರ್ನಾಟಕ ರಾಜ್ಯ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ರಾಜ್ಯ ಪುರಸ್ಕಾರ ನೀಡಿ ಸನ್ಮಾನಿಸಿದರು.

ಪಾಟ್ಕರ್‌ರವರು 78 ಬಾರಿ ರಕ್ತದಾನ ಮಾಡಿದ್ದಲ್ಲದೆ ಪ್ರತೀ ವರ್ಷವೂ ರಕ್ತದಾನ ಶಿಬಿರಗಳನ್ನು ಆಯೋಜಿಸುತ್ತಿದ್ದು, ಈವರೆಗೆ 25ಕ್ಕೂ ಅಧಿಕ ರಕ್ತದಾನ ಶಿಬಿರಗಳನ್ನು ಸಂಘಟಿಸಿದ್ದಾರೆ. ತುರ್ತು ರಕ್ತ ವ್ಯವಸ್ಥೆ ಬಗ್ಗೆ ಬರುವ ಕರೆಗಳಿಗೆ ಸ್ಪಂದಿಸಿ ಉಡುಪಿ, ಮಂಗಳೂರು ಪ್ರದೇಶಗಳ ರೋಗಿಗಳಿಗೂ ರಕ್ತವನ್ನು ಒದಗಿಸಿದ್ದಾರೆ. ಈ ಬಾರಿ ರಾಜ್ಯಮಟ್ಟದ ಗೌರವಕ್ಕೆ ಕರ್ನಾಟಕದಿಂದ ಏಳು ಮಹಾ ರಕ್ತದಾನಿಗಳು ಆಯ್ಕೆಯಾಗಿದ್ದು, ಉಡುಪಿ ಜಿಲ್ಲೆಯಿಂದ ದೇವದಾಸ್ ಪಾಟ್ಕರ್‌ರವರಿಗೆ ಈ ಗೌರವ ಸಂದಿದೆ.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು