ಅಭಿವ್ಯಕ್ತಿ ಸ್ವಾತಂತ್ರ್ಯ ದಮನ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ : ದಿನಕರ ಬಾಬು

ಉಡುಪಿ : ಮತೀಯವಾದಿಗಳ ಒತ್ತಡಕ್ಕೆ ಮಣಿದು ನೀಡಿದ ಪ್ರಶಸ್ತಿ‌ಗೆ ತಡೆ ನೀಡಿದ ಸರ್ಕಾರದ, ನಿಲುವನ್ನು ವಿರೋಧಿಸಿ ಪ್ರತಿಭಟಿಸಿದ ಉಡುಪಿ ಬಿಜೆಪಿ ಶಾಸಕರಾದ ಯಶ್‌ಪಾಲ್ ಸುವರ್ಣ ಹಾಗೂ ಇತರ ಬಿಜೆಪಿ ಮುಖಂಡರ ವಿರುದ್ಧ ಕೇಸ್ ದಾಖಲು ಮಾಡುವ ಮೂಲಕ ಬೆದರಿಸಿ ಧ್ವನಿ ಅಡಗಿಸುವ ಪ್ರಯತ್ನ ಮಾಡುತ್ತಿರುವುದು ನಿಜಕ್ಕೂ ತನ್ನ ಪ್ರಜಾಪ್ರಭುತ್ವ ವಿರೋಧಿ ನಿಲುವನ್ನು ಸ್ಪಷ್ಟ ಪಡಿಸುತ್ತಿದೆ.

ಆಡಳಿತ ವೈಖರಿಯನ್ನು ಪ್ರಶ್ನಿಸುವ ಹಕ್ಕನ್ನು ಪ್ರಶ್ನಿಸಿದ ಶಾಸಕರ ವಿರುದ್ಧ ಪ್ರಕರಣ ದಾಖಲು ಮಾಡಿದರೆ ಇನ್ನು ಜನಸಾಮಾನ್ಯರ ಪರಿಸ್ಥಿತಿ ಏನಾಗಬೇಡ? ಸದಾ ಸಂವಿಧಾನ ಉಳಿಸಿ ಎಂದು ಕಿರುಚಾಡುವ ಕೇಂದ್ರ ಕಾಂಗ್ರೆಸ್ ನಾಯಕರಿಗೆ ತನ್ನ ಕೈ ಕೆಳಗಿನ ಕಾಂಗ್ರೆಸ್ಸ್ ನಾಯಕರ ನಡೆ ಗಮನಕ್ಕೆ ಬಾರದೆ ಇರುವುದು ರಾಜ್ಯದ ಜನರ ವಿಪರ್ಯಾಸ ಅಲ್ಲದೆ ಇನ್ನೇನು?
ತಕ್ಷಣವೇ ಬಿಜೆಪಿ ಮುಖಂಡರ ವಿರುದ್ಧ ದಾಖಲಾದ ಪ್ರಕರಣ ಹಿಂಪಡೆಯಬೇಕು ಎಂದು ಈ ಮೂಲಕ ಎಸ್‌ಸಿ-ಎಸ್ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾದ ದಿನಕರ ಬಾಬು ಅವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ