ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ FIR ದಾಖಲಿಸಲು ಸೂಚನೆ ನೀಡಿದ ರಾಜ್ಯ ಸರ್ಕಾರದ ನಡೆ ಅತ್ಯಂತ ಖಂಡನೀಯ – ವಿ ಸುನಿಲ್‌ ಕುಮಾರ್

ಉಡುಪಿ : ಬಿ.ಜಿ.ರಾಮಕೃಷ್ಣ ಎಂಬ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಕೊಟ್ಟಿದ್ದನ್ನು ಮತೀಯವಾದಿಗಳ ಒತ್ತಡಕ್ಕೆ ಮಣಿದು ವಾಪಾಸ್ ತೆಗೆದುಕೊಂಡ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಉಡುಪಿ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಿದ ಹನ್ನೊಂದು ಜನರ ಮೇಲೆ ಎಫ್‌ಐಆರ್ ದಾಖಲಿಸಲು ಸರ್ಕಾರ ಸೂಚನೆ ನೀಡಿರುವುದು ಅತ್ಯಂತ ಖಂಡನೀಯ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಕತ್ತು ಹಿಸುಕುವ ಕೃತ್ಯ. ಪ್ರಜಾಪ್ರಭುತ್ವದ ಮೌಲ್ಯ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದುವರೆಗೆ ಆಡಿದ ಮಾತುಗಳೆಲ್ಲವೂ ಕೇವಲ ತೋರಿಕೆ. ಈ ಎಲ್ಲ ಮಾತುಗಳು ಪ್ರತಿಪಕ್ಷದಲ್ಲಿ ಇದ್ದಾಗ ಮಾತ್ರ ಅವರಿಗೆ ಸುಲಭವಾಗಿ ಲಭಿಸುವ ಭಾಷಣದ ಸರಕೆಂಬುದು ಈಗ ದೃಢಪಟ್ಟಿದೆ. ಅಧಿಕಾರದಲ್ಲಿ ಇದ್ದಾಗ ಸಿದ್ದರಾಮಯ್ಯನವರಿಗೆ ಒಂದು ಪ್ರತಿಭಟನೆಯನ್ನೂ ಸಹಿಸಲಾಗದಂಥ ನಿರಂಕುಶ ಮನಃಸ್ಥಿತಿ ಆವರಿಸುತ್ತದೆ ಎಂಬುದಕ್ಕೆ ಈ ಘಟನೆಯೊಂದು ಉದಾಹರಣೆಯಾಗಿದೆ.

ಬಿ.ಜಿ.ರಾಮಕೃಷ್ಣ ಎಂಬ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಕೊಟ್ಟಿದ್ದನ್ನು ಮತೀಯವಾದಿಗಳ ಒತ್ತಡಕ್ಕೆ ಮಣಿದು ಸರ್ಕಾರ ವಾಪಾಸ್ ತೆಗೆದುಕೊಂಡಿತ್ತು. ಇದರ ವಿರುದ್ಧ ಉಡುಪಿ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಇದರಲ್ಲಿ ಭಾಗಿಯಾದ ಹನ್ನೊಂದು ಜನರ ಮೇಲೆ ಎಫ್ ಐಆರ್ ದಾಖಲಿಸಲು ಸರ್ಕಾರ ಸೂಚಿಸಿದೆ. ನಿಮ್ಮ ಸರ್ಕಾರ ಪ್ರತಿಭಟನೆ ನಡೆಸುವುದನ್ನೂ ಸಹಿಸದಷ್ಟು ಪ್ರಜಾಪ್ರಭುತ್ವ ವಿರೋಧಿ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಆರಂಭದಿಂದಲೂ ವಿಪಕ್ಷದ ಶಾಸಕರನ್ನು ಗುರಿಯಾಗಿಸಿಕೊಂಡು ನಡೆಸುತ್ತಿದ್ದ ದ್ವೇಷರಾಜಕಾರಣ ನಡೆಸಲಾಗುತ್ತಿತ್ತು. ಅದು ಈಗ ಮತ್ತೊಂದು ಮಜಲು ತಲುಪಿದೆ. ಈಗ ಹೋರಾಟಗಾರರನ್ನೂ ದಮನಿಸುವುದಕ್ಕೆ ಈ ಸರ್ಕಾರ ಮುಂದಾಗಿದೆ. ಸಿದ್ದರಾಮಯ್ಯನವರೇ ಅಧಿಕಾರ ಶಾಶ್ವತವಲ್ಲ. ದೌರ್ಜನ್ಯಕ್ಕೆ ಜನ ಬೆದರುವುದಿಲ್ಲ. ಜನತಾ ನ್ಯಾಯಾಲಯದಲ್ಲಿ ಸಾಕ್ಷಿ ನಾಶ ಸುಲಭವಲ್ಲ ಎಂಬುದು ನೆನಪಿರಲಿ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ ಸುನಿಲ್‌ ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್