ಕಾಟಿಪಳ್ಳ ಮಸೀದಿಗೆ ಕಲ್ಲು ತೂರಾಟ, ಪ್ರದೇಶದಲ್ಲಿ ಬಿಗಿ ಭದ್ರತೆ

ಸುರತ್ಕಲ್ : ಮಂಗಳೂರು ಹೊರವಲಯದ ಸುರತ್ಕಲ್ ಕಾಟಿಪಳ್ಳ 3ನೆ ಬ್ಲಾಕ್‌‌ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.

ರವಿವಾರ ರಾತ್ರಿ 11ರ ಸುಮಾರಿಗೆ ಈ ಘಟನೆ ನಡೆದಿದ್ದು ಎರಡು ಬೈಕ್‌‌ಗಳಲ್ಲಿ ಬಂದ ನಾಲ್ಕು ಮಂದಿ ದುಷ್ಕರ್ಮಿಗಳು ಮಸೀದಿಗೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಮಸೀದಿಯ ಕಿಟಕಿಗಳಿಗೆ ಕಲ್ಲು ತೂರಾಟದಿಂದ ಹಾನಿಯಾಗಿದೆ.

ಸುರತ್ಕಲ್‌ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಮಸೀದಿಯ ಸಿಸಿಟಿವಿ ಸೇರಿದಂತೆ ಸಮೀಪದ ಸಿಸಿಟಿವಿ ಫೂಟೇಜ್‌ ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಇಂದು ಈದ್ ಮಿಲಾದ್ ಹಬ್ಬವೂ ಇರುವ ಕಾರಣ ಸುರತ್ಕಲ್ ಪ್ರದೇಶ ಸೇರಿದಂತೆ ಮಂಗಳೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ