ಮೀನು ಸಾಗಾಟದ ಲಾರಿಗೆ ದುಷ್ಕರ್ಮಿಗಳಿಂದ ಕಲ್ಲು- ದೂರು ದಾಖಲು

ಕಾರ್ಕಳ : ಮಲ್ಪೆ ಬಂದರಿನಿಂದ ತಮಿಳುನಾಡಿಗೆ ಮೀನು ತುಂಬಿಕೊಂಡು ಬರುತ್ತಿದ್ದ ಲಾರಿಗೆ ದುಷ್ಕರ್ಮಿಗಳು ಕಲ್ಲು ತೂರಿದ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಕೇಮಾರು ಪರ್ಪಲೆಯಲ್ಲಿ ನಡೆದಿದೆ.

ತಮಿಳುನಾಡು ಮೂಲದ ಎಂ. ಮಣಿಕಂಠನ್ (34) ಅವರು ಲಾರಿಯಲ್ಲಿ ಮಲ್ಪೆಯಿಂದ ಮೀನು ತುಂಬಿಕೊಂಡು ಹೊರಟಿದ್ದರು.
ಮಧ್ಯಾಹ್ನ ಕೇಮಾರು ಪರ್ಪಲೆ ಬಳಿ ಬರುತ್ತಿದ್ದಾಗ ಕಾರ್ಕಳ ಕಡೆಯಿಂದ ಎರಡು ಬೈಕ್‌ಗಳಲ್ಲಿ ಬಂದ ಮೂವರು ಮುಸುಕುಧಾರಿಗಳು ಲಾರಿಯ ಮುಂಭಾಗದ ಗಾಜಿಗೆ ಕಲ್ಲು ಎಸೆದಿದ್ದಾರೆ.

ಲಾರಿಯ ಗಾಜು ಹಾನಿಗೀಡಾಗಿದ್ದು, 15,000 ರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ