ನಕ್ಸಲ್ ನಿಗ್ರಹ ಕಾರ್ಯಾಚರಣೆಯನ್ನು ಇನ್ನಷ್ಟು ಬಲಗೊಳಿಸಿ – ಸುನಿಲ್ ಕುಮಾರ್ ಒತ್ತಾಯ

ಉಡುಪಿ : ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಕುಖ್ಯಾತ ನಕ್ಸಲೀಯ ವಿಕ್ರಂ ಗೌಡನನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ ಪೊಲೀಸರ ಕಾರ್ಯ ಶೈಲಿಯನ್ನು ಶಾಸಕ ಸುನಿಲ್ ಕುಮಾರ್ ಪ್ರಶಂಶಿಸಿದ್ದಾರೆ.

ಜೀವದ ಹಂಗು ತೊರೆದು ದೇಶ ವಿರೋಧಿ ಶಕ್ತಿಗಳನ್ನು ಯಾವುದೇ ಮುಲಾಜಿಗೆ ಒಳಗಾಗದೇ ಹತ್ತಿಕ್ಕಿದ ಪೊಲೀಸರ ಕಾರ್ಯ ವೈಖರಿ ಅಭಿನಂದನೀಯ. ಆದರೆ ಈ ಘಟನೆಯ ಬಳಿಕ ಕೆಲ ಪ್ರಶ್ನೆಗಳು‌ ಉಳಿದಿವೆ. ರಾಜ್ಯದಲ್ಲಿ ಹದಿನೈದು ವರ್ಷಗಳ ಬಳಿಕ ನಕ್ಸಲ್ ಚಟುವಟಿಕೆ ಇಷ್ಟು ಬಹಿರಂಗವಾಗಿ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು ? ಅಥವಾ ಕಾರಣ ಯಾರು?

ರಾಜ್ಯ ಸರ್ಕಾರ, ಅದರಲ್ಲೂ ವಿಶೇಷವಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನಗರ ನಕ್ಸಲರ ಬಗ್ಗೆ ತೋರುತ್ತಿರುವ ವಿಶೇಷ ಪ್ರೀತಿ ಇದಕ್ಕೆ ಪ್ರೇರಣೆಯಲ್ಲವೇ? ಸ್ಥಳೀಯ ಜನಪ್ರತಿನಿಧಿಗಳು ಅಭಿವೃದ್ಧಿ ವಿಚಾರದಲ್ಲಿ ತೋರಿದ ವಿಶೇಷ ಆಸಕ್ತಿಯಿಂದ ಸ್ಥಳೀಯರು ನಕ್ಸಲ್ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸ್ಥಳೀಯ ಬೆಂಬಲವಿಲ್ಲದೇ ಅಳಿದು ಹೋಗುವ ಹಂತಕ್ಕೆ ತಲುಪಿದ್ದ ನಕ್ಸಲ್ ಚಟುವಟಿಕೆ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಪೌಷ್ಠಿಕ ಆಹಾರ ಮೆದ್ದು ಎದ್ದು ನಿಂತಿದೆ.

ಸಿದ್ದರಾಮಯ್ಯನವರೇ ದೇಶವಿರೋಧಿ ಹಾಗೂ ಬುಡಮೇಲು ಕೃತ್ಯಕ್ಕೆ ನೆರವಾಗುವವರಿಗೆ ಆದರ್ಶದ ನೆಪದಲ್ಲಿ ಬೆಂಬಲ ರಕ್ಷಣೆ ಬೇಡ. ಇದು ಪಶ್ಚಿಮಘಟ್ಟದ ತನ್ಮೂಲಕ ರಾಜ್ಯದ ಶಾಂತಿ – ನೆಮ್ಮದಿ ಕೆಡಿಸಲಿದೆ. ಹೀಗಾಗಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯನ್ನು ಇನ್ನಷ್ಟು ಬಲಗೊಳಿಸಿ. ಎ‌ಎನ್ಎಫ್‌ಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ. ನಕ್ಸಲ್ ಚಟುವಟಿಕೆ ಹತ್ತಿಕ್ಕಿ. ಜತೆಗೆ ಪಶ್ಚಿಮಘಟ್ಟ ಭಾಗದಲ್ಲಿ ಅಭಿವೃದ್ಧಿ ಕಾರ್ಯವನ್ನೂ ಚುರುಕುಗೊಳಿಸಿ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ ಸುನಿಲ್‌ ಕುಮಾರ್ ಹೇಳಿಕೆಯಲ್ಲಿ ಒತ್ತಾಯ ಮಾಡಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ