ಪಂಚಾಯತ್‌ರಾಜ್‌ ವ್ಯವಸ್ಥೆಯನ್ನು ಬಲಪಡಿಸಬೇಕಾಗಿರುವುದು ಇಂದಿನ ಆದ್ಯತೆ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ : ತಳಮಟ್ಟದ ಗ್ರಾಮೀಣಾಭಿವೃದ್ಧಿ ಗುರಿಸಾಧನೆಗಾಗಿ ಪಂಚಾಯತ್‌ರಾಜ್‌ ವ್ಯವಸ್ಥೆಯನ್ನು ಬಲಪಡಿಸಬೇಕಾಗಿರುವುದು ಇಂದಿನ ಆದ್ಯತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯ ಗೆಲುವು ಅನಿವಾರ್ಯ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಳರ್ ಹೇಳಿದ್ದಾರೆ.

ಉಡುಪಿ ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ನಡೆದ ಚುನಾವಣೆಯ ಉಸ್ತುವಾರಿಗಳು ಹಾಗೂ ಬ್ಲಾಕ್ ಅಧ್ಯಕ್ಷರ ಸಭೆಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು.

ಈ ದೃಷ್ಟಿಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಾಜು ಪೂಜಾರಿ ಅನುಭವಿಯಾಗಿದ್ದು, ಪಕ್ಷದ ಶಿಸ್ತಿನ ಸಿಪಾಯಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಅವರ ಗೆಲುವಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದರು.

ಸೋಮವಾರ ನಡೆಯುವ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ನಮಗೆ ಉತ್ತಮ ಅವಕಾಶಗಳಿವೆ. ರಾಜಕೀಯವಾಗಿಯೂ ಈ ಚುನಾವಣೆ ನಮಗೆ ಮುಖ್ಯವಾಗಿದೆ. ಕಾರ್ಯಕರ್ತರೇ ನಮಗೆ ಸ್ಪೂರ್ತಿ. ಕಾರ್ಯಕರ್ತರು ಸರಿಯಾಗಿ ಕೆಲಸ ಮಾಡಿದರೆ ರಾಜು ಪೂಜಾರಿ ಅವರ ಗೆಲವು ಶತಃಸಿದ್ಧ ಎಂದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ