ಶಾಲಾ-ಕಾಲೇಜು ಬಳಿ ತಂಬಾಕು ಉತ್ಪನ್ನ ಮಾರಾಟ ವಿರುದ್ಧ ಕಠಿಣ ಕ್ರಮ : ಅಧಿಕಾರಿಗಳಿಗೆ ಉಡುಪಿ ಡಿಸಿ ಕಟ್ಟುನಿಟ್ಟಿನ ಸೂಚನೆ

ಉಡುಪಿ : ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳ ನೂರು ಮೀ. ವ್ಯಾಪ್ತಿಯೊಳಗೆ ಯಾವುದೇ ಅಂಗಡಿ, ಹೋಟೆಲ್‌ಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮಕೈಗೊಂಡು ಅವರ ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕೋಟ್ಪಾ-2003 ಕಾಯ್ದೆ ಕುರಿತ ತ್ರೈಮಾಸಿಕ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು

ಕಳೆದ ಜಿಲ್ಲಾ ತಂಬಾಕು ನಿಯಂತ್ರಣ ಹಾಗೂ ಕೋಟ್ಪಾ ಕಾಯಿದೆ ಅನುಷ್ಠಾನ ಸಭೆಯಲ್ಲಿ ಶಾಲಾ-ಕಾಲೇಜುಗಳ ವ್ಯಾಪ್ತಿಯ ನೂರು ಮೀ. ಅಂತರದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಿದಲ್ಲಿ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೆ. ಆದರೆ ಬೈಂದೂರು ತಾಲೂಕಿನ ನಾವುಂದ, ಶಿರೂರು, ಹಕ್ಕಾಡಿ, ಉಪ್ಪುಂದ ಗ್ರಾಪಂಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವುದು ಕಂಡು ಬಂದಿದ್ದರೂ ಸಹ ಬರಿ ಎಚ್ಚರಿಕೆ ಹಾಗೂ ತಿಳುವಳಿಕೆ ನೋಟಿಸ್‌ನ್ನು ನೀಡಲಾಗಿದೆ. ಇದು ಸರಿಯಲ್ಲ. ಅಂತಹವರ ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸಬೇಕು ಎಂದು ಖಡಕ್ ಸೂಚನೆ ನೀಡಿದರು.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ