ಬಸ್‌ನಲ್ಲಿ ವಿದ್ಯಾರ್ಥಿನಿ ಅಸ್ವಸ್ಥ; ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದ ಚಿಕಿತ್ಸೆ ಕೊಡಿಸಿದ ಚಾಲಕ – ನಿರ್ವಾಹಕ

ಉಡುಪಿ : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳು ದಿಢೀರ್ ಅಸ್ವಸ್ಥಗೊಂಡ ಪರಿಣಾಮ ಖಾಸಗಿ ಬಸ್ ಚಾಲಕ ಸಮಯ ಪ್ರಜ್ಞೆ ಮೆರೆದು ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದ ಮತ್ತೊಂದು ಘಟನೆ ಗುರುವಾರ ಬೆಳಗ್ಗೆ ಉಡುಪಿಯಲ್ಲಿ ನಡೆದಿದೆ.

ಇಂದು ಬೆಳಗ್ಗೆ ಮಂಗಳೂರಿನಿಂದ ಮಣಿಪಾಲಕ್ಕೆ ಹೊರಟಿದ್ದ ಎಕೆಎಂ‌ಎಸ್ ಬಸ್ಸಿಗೆ ಮೂಲ್ಕಿಯಲ್ಲಿ ವಿದ್ಯಾರ್ಥಿನಿ‌ಯೊಬ್ಬಳು ಉಡುಪಿಗೆ ತೆರಳಲು ಹತ್ತಿದ್ದಾಳೆ. ಆದರೆ ಕಟಪಾಡಿ ದಾಟಿ ಉದ್ಯಾವರ ಸಮೀಪಿಸುತ್ತಿದ್ದಂತೆ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿ ಅಸ್ವಸ್ಥಗೊಂಡಿದ್ದಳು. ಬಸ್ಸಿನ ಚಾಲಕ ನಸೀಫ್, ಹಾಗೂ ನಿರ್ವಾಹಕ ಮೋಹಿತ್ ಕೂಡಲೇ ಬಸ್ಸನ್ನು ಉಡುಪಿಯ ಟಿ.ಎಂ.ಎ. ಪೈ ಆಸ್ಪತ್ರೆಗೆ ಕೊಂಡೊಯ್ದ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ಕೊಡಿಸಿದ್ದಾರೆ.

ವಿದ್ಯಾರ್ಥಿನಿಗೆ ಸಕಾಲದಲ್ಲಿ ಚಿಕಿತ್ಸೆ ಕೊಡಿಸಲು ನೇರವಾದ ಎಕೆಎಂ‌ಎಸ್ ಚಾಲಕ ಹಾಗೂ ನಿರ್ವಾಹಕರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಪ್ರಥಮ ಬಾರಿಗೆ ಯಕ್ಷ ರಂಗದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ