ಬೈಕ್‌ ಡಿಕ್ಕಿ – ದೇವಸ್ಥಾನಕ್ಕೆ ಹೋಗುತ್ತಿದ್ದ ವಿದ್ಯಾರ್ಥಿನಿ ಸಾವು

ಕಾರ್ಕಳ : ದೇವಸ್ಥಾನಕ್ಕೆ ಹೋಗುತ್ತಿದ್ದ ವೇಳೆ ಬೈಕ್‌ ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿನಿ ಪ್ರಣಮ್ಯ ಶೆಟ್ಟಿ (14) ಮೃತಪಟ್ಟ ಘಟನೆ ನಂದಳಿಕೆಯಲ್ಲಿ ಸಂಭವಿಸಿದೆ.

ಹತ್ತನೇ ತರಗತಿ ಕಲಿಯುತ್ತಿರುವ ವಿದ್ಯಾರ್ಥಿನಿ ಸ್ಥಳೀಯ ಲಕ್ಷ್ಮೀ ಜನಾರ್ದನ ದೇವಸ್ಥಾನಕ್ಕೆಂದು ಮನೆಯಿಂದ ಹೊರಟ ಸ್ವಲ್ಪ ಸಮಯದಲ್ಲಿಯೇ ಬೈಕ್‌ ಡಿಕ್ಕಿಯಾಗಿತ್ತು. ಬೈಕ್‌ ಸವಾರ ರಸ್ತೆಯಿಂದ ತೀರಾ ಎಡಬದಿಗೆ ಬಂದು ಪ್ರಣಮ್ಯ ಅವರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದ.

ತಲೆಗೆ ಏಟಾದ ಆಕೆಯನ್ನು ಕೂಡಲೇ ಕಾರ್ಕಳದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಬೈಕ್‌ ಸವಾರನ ಅಜಾಗರೂಕತೆಯ ಚಾಲನೆಯ ಪರಿಣಾಮ ಈ ಘಟನೆ ನಡೆದಿದೆ ಎಂದು ದೂರು ದಾಖಲಾಗಿದೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ