ಉಡುಪಿ : ನಗರದ ಇಂದ್ರಾಳಿ ರೈಲ್ವೆ ಬ್ರಿಜ್‌ನ ಅಪೂರ್ಣ ಕಾಮಗಾರಿಯಿಂದ ಸ್ಥಳೀಯರು ರೋಸಿ ಹೋಗಿದ್ದಾರೆ. ಅದರಲ್ಲೂ ಸ್ಥಳೀಯ ಇಂಗ್ಲಿಷ್ ಮೀಡಿಯಂ ವಿದ್ಯಾರ್ಥಿಗಳು ಪ್ರತಿದಿನ ಶಾಲೆಗೆ ಹೋಗಲು ಹರಸಾಹಸ ಪಡುವಂತಾಗಿದೆ. ಪದೇ ಪದೇ ಅಪಘಾತಗಳು ಸಂಭವಿಸುತ್ತಿರುವುದರಿಂದ ಶಾಲೆಗೆ ಮಕ್ಕಳನ್ನು ಕಳಿಸಲು ಪೋಷಕರು ಭಯ ಪಡುತ್ತಿದ್ದಾರೆ.

ಇಂದು ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಾಮಗಾರಿ ವೀಕ್ಷಣೆಗೆ ಸ್ಥಳಕ್ಕೆ ಭೇಟಿ ನೀಡಿದ್ದರು. ಸ್ಥಳೀಯ ಶಾಲೆಯ ವಿದ್ಯಾರ್ಥಿಗಳು ಅಧ್ಯಾಪಕರ ನೇತೃತ್ವದಲ್ಲಿ ಸಂಸದರಿಗೆ ಮನವಿ ಮಾಡಿದರು. ರೈಲ್ವೆ ನಿಲ್ದಾಣದ ಕಡೆಗೆ ಹೋಗಲು ಮೇಲ್ ಸೇತುವೆ ನಿರ್ಮಿಸಬೇಕೆಂದು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಒತ್ತಾಯಿಸಿದರು. ಇದಕ್ಕೆ ಸ್ಪಂದಿಸಿದ ಸಂಸದರು, ಮೇಲ್ ಸೇತುವೆಯ ಭರವಸೆ ನೀಡಿದರು.