ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳಿಗೆ ಹಲ್ಲೆ; ಆರೋಪ

ಮಂಗಳೂರು : ಬಂಟ್ವಾಳ ತಾಲೂಕಿನ ವಿಟ್ಲದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ವಿದ್ಯಾರ್ಥಿಗಳಿಗೆ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ ಘಟನೆ ಸೋಮವಾರ ಬೆಳಗ್ಗೆ ನಾಗುರಿಯಲ್ಲಿ ನಡೆದಿದೆ. ಹಲ್ಲೆಗೊಳಗಾದವ ವಿದ್ಯಾರ್ಥಿಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂವರು ವಿದ್ಯಾರ್ಥಿಗಳು ಫರಂಗಿಪೇಟೆಯಿಂದ ಮಂಗಳೂರು ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಈ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ನಾಗುರಿಯಲ್ಲಿ ಹಲ್ಲೆ ನಡೆಸಿ ಪಂಪ್‌ವೆಲ್‌ನಲ್ಲಿ ಬಸ್ಸಿನಿಂದ ಇಳಿದು ಹೋದ ಎಂದು ಆರೋಪಿಸಲಾಗಿದೆ.

ವಿದ್ಯಾರ್ಥಿಗಳು ಫರಂಗಿಪೇಟೆ ಸಮೀಪದ ಅಮ್ಮೆಮಾರ್ ನಿವಾಸಿಗಳಾಗಿದ್ದು, ಖಾಸಗಿ ಟ್ಯುಟೋರಿಯಲ್‌ವೊಂ‌ದರ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.

Related posts

ಫಾಸ್ಟ್‌ಟ್ಯಾಗ್‌ ಹೊಸ ನಿಯಮ ಜಾರಿ: ಕಡಿಮೆ ಬ್ಯಾಲೆನ್ಸ್ ಇದ್ರೆ ದುಪ್ಪಟ್ಟು ದಂಡ.!

ಅಂಗಡಿಗೆ ಬಂದ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿಗೆ ಶಿಕ್ಷೆ ಪ್ರಕಟ…!

ಪಡುಬಿದ್ರೆ ಬಾಲಕರಿಗೆ ಹಲ್ಲೆ; ಮೂರು ಪ್ರಕರಣ ದಾಖಲು…!