ಬಸ್ ಚಾಲಕನಿಗೆ ಹಠಾತ್ ಎದೆನೋವು; ಇಳಿಜಾರಿಗಿಳಿದ ಬಸ್….!

ಉಡುಪಿ : ಬಸ್ ಚಾಲಕನಿಗೆ ಡ್ರೈವಿಂಗ್ ವೇಳೆ ಹಠಾತ್ ಎದೆ ನೋವು ಕಾಣಿಸಿಕೊಂಡ ಪರಿಣಾಮ ಬಸ್ ಹೆದ್ದಾರಿ ಪಕ್ಕದ ಇಳಿಜಾರಿಗೆ ಇಳಿದು ನಿಂತ ಘಟನೆ ಸಂಭವಿಸಿದೆ.

ತೆಂಕ ಎರ್ಮಾಳಿನ ಮಸೀದಿ ಬಳಿ ಉಡುಪಿಯತ್ತ ಹೋಗುತ್ತಿದ್ದ ಎಕ್ಸ್‌ಪ್ರೆಸ್ ಬಸ್‌ನ ಚಾಲಕ ಶಂಭು ಎಂಬವರಿಗೆ ಎದೆನೋವು ಕಾಣಿಸಿಕೊಂಡಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ಸೀದಾ ರಸ್ತೆ ಬದಿಯ ಇಳಿಜಾರಿಗೆ ಇಳಿದು ನಿಂತಿದೆ. ಕೂಡಲೇ ಬಸ್ ಚಾಲಕ ಹಾಗೂ ಗಾಯಗೊಂಡಿದ್ದ ಪ್ರಯಾಣಿಕರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್ ರಸ್ತೆ ಬದಿ ಹೋದ ಕಾರಣ ದೊಡ್ಡ ಅಪಘಾತವೊಂದು ತಪ್ಪಿದೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ