ಕರವೇ ಪ್ರವೀಣ್ ಶೆಟ್ಟಿ ಬಣದ ನೂತನ ಜಿಲ್ಲಾಧ್ಯಕ್ಷರಾಗಿ ಸುಜಯ್ ಪೂಜಾರಿ ಹಾಗೂ ಜಿಲ್ಲಾಧ್ಯಕ್ಷೆಯಾಗಿ ಜ್ಯೋತಿ ಸೇರಿಗಾರ್ತಿ ಆಯ್ಕೆ

ಬೆಂಗಳೂರು : ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಮಾಜಿ ಜಿಲ್ಲಾಧ್ಯಕ್ಷರಾದ ಅನ್ಸಾರ್ ಅಹಮದ್‌ರವರ ಸೂಚನೆಯ ಮೇರೆಗೆ ಉಡುಪಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ಸುಜಯ್ ಪೂಜಾರಿ ಹಾಗೂ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಶ್ರೀಮತಿ ಜ್ಯೋತಿ ಸೇರಿಗಾರ್ತಿ‌ರವರನ್ನು ರಾಜ್ಯಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿಯವರು ನೇಮಕಗೊಳಿಸಿ ಅದೇಶ ಹೊರಡಿಸಿರುತ್ತಾರೆ.

ಅನ್ಸಾರ್ ಅಹಮದ್‌ರವರನ್ನು ಉಡುಪಿ ಜಿಲ್ಲಾ ಗೌರವಾಧ್ಯಕ್ಷ‌ರನ್ನಾಗಿ ನೇಮಿಸಿ ಸಂಘಟನೆಯನ್ನು ಅನ್ಸಾರ್ ಅಹಮದ್‌ರವರ ನೇತೃತ್ವದಲ್ಲಿ ಮುನ್ನಡೆಸಿಕೊಂಡು ಹೋಗುವಂತೆ ಸೂಚನೆ ನೀಡಿರು‌ತ್ತಾರೆ.

ಈ ಸಂದರ್ಭದಲ್ಲಿ ಕರವೇ ರಾಜ್ಯ ಕಾರ್ಯದರ್ಶಿ ಲೋಕೇಶ್, ಕರವೇ ಮುಖಂಡರಾದ ಸೈಯದ್ ನಿಜಾಮುದ್ದೀನ್, ಅನುಷಾ ಆಚಾರ್ ಪಳ್ಳಿ, ಸಂತೋಷ್ ಕುಲಾಲ್, ವಿಜಯ ಪೂಜಾರಿ, ಗೋಪಾಲ್ ದೊರೆ, ನಾಗರಾಜ್ ಮೊದಲಾದವರು ಉಪಸ್ಥಿತರಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ