ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಅಧ್ಯಕ್ಷೆಯಾಗಿ ಬಿಜೆಪಿಯ ಸುಕನ್ಯಾ ಶೆಟ್ಟಿ, ಉಪಾಧ್ಯಕ್ಷೆಯಾಗಿ ಗಿರಿಜಾ ಪೂಜಾರಿ ಆಯ್ಕೆ

ಕೋಟ : ಸಾಲಿಗ್ರಾಮ ಪ.ಪಂ. ಎರಡನೇ ಅವಧಿಯ ಅಧ್ಯಕ್ಷರಾಗಿ ಬಿಜೆಪಿ ಪಕ್ಷದ ಸದಸ್ಯೆ, ಮಾರಿಗುಡಿ ವಾರ್ಡ್‌ನ ಸದಸ್ಯೆ ಸುಕನ್ಯಾ ಶೆಟ್ಟಿ, ಉಪಾಧ್ಯಕ್ಷರಾಗಿ ಬಿಜೆಪಿಯ ಕಾರ್ಕಡ ತೆಂಕುಹೋಳಿ ವಾರ್ಡ್‌ನ ಗಿರಿಜಾ ಪೂಜಾರಿ ಆಯ್ಕೆಯಾಗಿದ್ದಾರೆ.

ಇಲ್ಲಿನ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ (ಎ) ಮಹಿಳೆಗೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಸುಕನ್ಯಾ ಶೆಟ್ಟಿ, ಉಪಾಧ್ಯಕ್ಷ ಸ್ಥಾನಕ್ಕೆ ಗಿರಿಜಾ ಪೂಜಾರಿ ನಾಮಪತ್ರ ಸಲ್ಲಿಸಿದ್ದರು ಹಾಗೂ ಅಧ್ಯಕ್ಷ, ಉಪಾಧ್ಯಕ್ಷ ಎರಡೂ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಝಹಿರಾ ನಾಮ ಪತ್ರ ಸಲ್ಲಿಸಿದ್ದರು.

16 ಮಂದಿ ಸಂಖ್ಯಾಬಲದ ಪ.ಪಂ.ನಲ್ಲಿ ಬಿಜೆಪಿಯ 10, ಕಾಂಗ್ರೆಸ್‌ನ 5, ಪಕ್ಷೇತರ ಓರ್ವ ಸದಸ್ಯರಿದ್ದು ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಶಾಸಕ ಕಿರಣ್ ಕೊಡ್ಗಿ ಮತದೊಂದಿಗೆ 11, ಕಾಂಗ್ರೆಸ್‌ನ ಬೆಂಬಲಿತರು 5 ಮತಗಳನ್ನು ಪಡೆದರು. ಪಕ್ಷೇತರ ಸದಸ್ಯೆ ರತ್ನಾ ನಾಗರಾಜ್ ಗಾಣಿಗ ತಟಸ್ಥವಾಗುಳಿದರು.

ಕಾಂಗ್ರೆಸ್‌ನಲ್ಲಿ ಐದೇ ಮಂದಿ ಸದಸ್ಯರಿದ್ದರೂ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಲಾಗಿತ್ತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಪರ್ಧೆ ಎನ್ನುವಂತದ್ದು ಇರಬೇಕು, ಅವಿರೋಧ ಸರಿಯಲ್ಲ ಎನ್ನುವ ನೆಲೆಯಲ್ಲಿ ಸಂಖ್ಯಾಬಲ ಇಲ್ಲದಿದ್ದರೂ ನಾಮಪತ್ರ ಸಲ್ಲಿಸಲಾಗಿತ್ತು ಎಂದು ಕಾಂಗ್ರೆಸ್‌ನ ಹಿರಿಯ ಸದಸ್ಯ ಶ್ರೀನಿವಾಸ್ ಅಮೀನ್ ತಿಳಿಸಿದರು. ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ಕುಂದಾಪುರ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಮುಖ್ಯಾಧಿಕಾರಿ ಶಿವ ನಾಯ್ಕ್ ಉಪಸ್ಥಿತರಿದ್ದರು.

Related posts

ಉಡುಪಿ ಜಿಲ್ಲೆಯಲ್ಲಿ ಮಂಗನಕಾಯಿಲೆ ಪ್ರಕರಣ ಬಾರದಂತೆ ಮುನ್ನೆಚ್ಚರಿಕೆ ವಹಿಸಿ : ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

ನಿಷೇಧಾಜ್ಞೆ, ಸಂತೆ, ಜಾತ್ರೆ ನಿಷೇಧ ಆದೇಶ ಹಿಂದೆಗೆತ : ಉಡುಪಿ ಜಿಲ್ಲಾಧಿಕಾರಿ

ಶಾಲಾ ವಾಹನಕ್ಕೆ ಬೈಕ್ ಢಿಕ್ಕಿಯಾಗಿ ಸವಾರ ಮೃತ್ಯು