ಜನರ ಧಾರ್ಮಿಕ ಭಾವನೆ ಜೊತೆ ಆಟವಾಡಿ ಚುನಾವಣೆ ಗೆದ್ದ ಸುನಿಲ್ ಕುಮಾರ್ ತಕ್ಷಣ ರಾಜೀನಾಮೆ ನೀಡಲಿ – ಮುನಿಯಾಲು ಉದಯಕುಮಾರ್ ಶೆಟ್ಟಿ

ಉಡುಪಿ : ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ನಲ್ಲಿ ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿದ್ದ ಶಿಲ್ಪಿ ಕೃಷ್ಣ ನಾಯ್ಕ ಅವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್‌ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಶಿಲ್ಪಿಯು ಹೈಕೋರ್ಟ್‌ನಲ್ಲಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ತತ್‌ಕ್ಷಣ ತನಿಖೆ ಆರಂಭಿಸಿ ವಾರದೊಳಗೆ ನಕಲಿ ಮೂರ್ತಿಗೆ ಬಳಸಿದ ಪರಿಕರಗಳು ಎಲ್ಲಿವೆ ಎಂಬುದನ್ನು ಪತ್ತೆಹಚ್ಚಬೇಕು ಎಂದು ಕಾಂಗ್ರೆಸ್‌ ಮುಖಂಡ ಉದಯ ಕುಮಾರ್‌ ಶೆಟ್ಟಿ ಮುನಿಯಾಲು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.

ಪರಶುರಾಮ ಥೀಮ್‌ ಪಾರ್ಕ್‌ ಅವ್ಯವಹಾರದ ತನಿಖೆಯನ್ನು ರಾಜ್ಯ ಸರಕಾರ ಈಗಾಗಲೇ ಸಿಐಡಿಗೆ ಒಪ್ಪಿಸಿದೆ. ಸದ್ಯ ಸಿಐಡಿ ತನಿಖೆಗೆ ನ್ಯಾಯಾಲಯದಲ್ಲಿ ತಡೆಯಾಜ್ಞೆ ನೀಡಲಾಗಿದೆ. ತಡೆಯಾಜ್ಞೆ ತೆರವುಗೊಳಿಸಲು ಕಾನೂನು ಪ್ರಕ್ರಿಯೆ ನಡೆಯುತ್ತಿದೆ. ಹೀಗಾಗಿ ಇನ್ನೊಂದು ಪ್ರಕರಣದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ತನಿಖೆ ಚುರುಕುಗೊಳಿಸಬೇಕೆಂದು ಆಗ್ರಹಿಸಿದರು. ಶಾಸಕ ಸುನಿಲ್‌ ಕುಮಾರ್‌ ಅವರು ಚುನಾವಣೆ ಗೆಲ್ಲುವುದಕ್ಕಾಗಿ ಜನರ ಧಾರ್ಮಿಕ ಭಾವನೆಯ ಜತೆಗೆ ಆಟವಾಡಿದ್ದಾರೆ. ನಕಲಿ ಮೂರ್ತಿಯನ್ನು ಕಂಚಿನ ಮೂರ್ತಿ ಎಂದು ನಂಬಿಸಿ, ಜನರನ್ನು ಮೋಸಗೊಳಿಸಿದ್ದಾರೆ. ಸುನಿಲ್‌ ಕುಮಾರ್‌ ಅವರು ಎಂಎಲ್‌ಎ ಸ್ಥಾನಕ್ಕೆ ತತ್‌ಕ್ಷಣವೇ ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದವರು ಹೇಳಿದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ