ಕಾಪು ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ SDPIಯಿಂದ ಕಾಂಗ್ರೆಸ್‌ಗೆ ಬೆಂಬಲ

ಕಾಪು : ಆಗಸ್ಟ್ 28‌ರಂದು ಕಾಪು ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ SDPI ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಗಳನ್ನು ಬೆಂಬಲಿಸಲು ತನ್ನ ಪಕ್ಷದ ಪುರಸಭಾ ಸದಸ್ಯರುಗಳಿಗೆ ವಿಪ್ ನೀಡಿದೆ ಎಂದು SDPI ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಬಾವ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪುರಸಭೆಯಲ್ಲಿ ಬಿಜೆಪಿಯನ್ನು ಸೋಲಿಸುವ ಭಾಗವಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಲಿದ್ದೇವೆ ಎಂದು ಅಶ್ರಫ್ ಬಾವ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ