ಉಡುಪಿ ವಕೀಲರ ಸಂಘದಿಂದ ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಶ್ರೀ ಎ.ಎಸ್ ಬೋಪಣ್ಣ ಭೇಟಿ

ಉಡುಪಿ : ಉಡುಪಿ ವಕೀಲರ ಸಂಘದ ನಿಯೋಗವು ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಶ್ರೀ ಎ.ಎಸ್. ಬೋಪಣ್ಣ ಇವರನ್ನು ಇಂದು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿಯಾಯಿತು. ಈ ವೇಳೆ ಡಿಸೆಂಬರ್ 3‌ರಂದು ವಕೀಲರ ಸಂಘವು ಆಯೋಜಿಸಲಿರುವ ವಕೀಲರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸುವಂತೆ ಆಹ್ವಾನಿಸಿತು.

ನಿಯೋಗದಲ್ಲಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಜಂಟಿ ಕಾರ್ಯದರ್ಶಿ ರವೀಂದ್ರ ಬೈಲೂರ್, ಸಾಂಸ್ಕೃತಿಕ ಕಾರ್ಯದರ್ಶಿ ಸಂತೋಷ್ ಕುಮಾರ್ ಮೂಡುಬೆಳ್ಳೆ, ಕಾರ್ಯಕಾರಿ ಸಮಿತಿ ಸದಸ್ಯರಾದ ಆರೂರ್ ಸುಕೇಶ್ ಶೆಟ್ಟಿ, ಪ್ರಜ್ವಲ್ ಶೆಟ್ಟಿ ಹಾಗೂ ನ್ಯಾಯವಾದಿ ಶಶಿರಾಜ್ ಕೋಟ್ಯಾನ್ ಉಪಸ್ಥಿತರಿದ್ದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ