ಜೂನ್ 9ರಂದು ಸುರತ್ಕಲ್ ಬಂಟರ ಸಂಘದ ಮಹಾಸಭೆ, ಸಹಾಯ ಹಸ್ತ, ಅಭಿನಂದನೆ, ವಿದ್ಯಾರ್ಥಿ ವೇತನ ವಿತರಣೆ

ಸುರತ್ಕಲ್ ಬಂಟರ ಸಂಘದ ವಾರ್ಷಿಕ ಮಹಾಸಭೆ ಜೂನ್ 9ರಂದು ನಡೆಯಲಿದೆ. ಈ ಸಮಾರಂಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ವಾರ್ಷಿಕ ಮಹಾಸಭೆ, ಗ್ರಾಮವಾರು ಸಾಂಸ್ಕೃತಿಕ ಸ್ಪರ್ಧೆ, ಅಭಿನಂದನಾ ಸಮಾರಂಭ, ಸಹಾಯಹಸ್ತ ಮತ್ತು ವಿದ್ಯಾರ್ಥಿ ವೇತನ ವಿತರಣೆಯ ಕಾರ್ಯಕ್ರಮಗಳು ನಡೆಯಲಿದೆ.

ಸಮಾರಂಭವನ್ನು ಮುಂಬೈ ವಿ.ಕೆ. ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಕರುಣಾಕರ ಶೆಟ್ಟಿ ಮಧ್ಯಗುತ್ತು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ವಹಿಸುವರು.

ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಡಾ. ವೈ ಭರತ್ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಬೆಂಗಳೂರು ಯುವ ಬಂಟರ ಸಂಘದ ಅಧ್ಯಕ್ಷ ರವೀಂದ್ರನಾಥ ಮಾರ್ಲ ಭಾಗವಹಿಸಲಿದ್ದಾರೆ.

ಸಮಾರಂಭದಲ್ಲಿ ಅಭಿನಂದನೆ, ನಿರಂತರ ಸಹಾಯಹಸ್ತ, ವಿದ್ಯಾರ್ಥಿ ವೇತನ ವಿತರಣೆ, ನೂತನ ಮನೆಯ ಕೀ ಹಸ್ತಾಂತರ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಗೊಳಿಸಿ – ಕರ್ನಾಟಕ ಯುವರಕ್ಷಣಾ ವೇದಿಕೆ

ಸಚಿವ ಜಾರಕಿಹೊಳಿ ಅವರಿಂದ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ