ಸುರತ್ಕಲ್-ಎಂಆರ್‌ಪಿಎಲ್ ರೈಲ್ವೆ ಮೇಲ್ಸೇತುವೆ ಕಾಂಕ್ರಿಟೀಕರಣ; ಬದಲಿ ಮಾರ್ಗ ಉಪಯೋಗಿಸಲು ಸೂಚನೆ

ಸುರತ್ಕಲ್ : ಸುರತ್ಕಲ್ ಎಂಆರ್‌ಪಿಎಲ್ ರಸ್ತೆಯ ರೈಲ್ವೆ ಮೇಲ್ಸೇತುವೆ ಕಾಂಕ್ರಿಟೀಕರಣ ಕಾಮಗಾರಿಗಾಗಿ ವಾಹನ ಸಂಚಾರ ನಿಷೇಧಿಸಿ, ಬದಲಿಮಾರ್ಗ ಉಪಯೋಗಿಸುವ ಕುರಿತಂತೆ ಮಂಗಳೂರು ಕಮಿಷನರ್ ಸೋಮವಾರ (ಡಿ.09) ಅದೇಶ ಹೊರಡಿಸಿದ್ದಾರೆ.

ಸುರತ್ಕಲ್ ಆಸುಪಾಸಿನ ಜನರಿಗೆ ಸೂರಜ್ ಹೋಟೆಲ್ ಬಳಿಯ ಚೊಕ್ಕಬೆಟ್ಟು ರಸ್ತೆ ಹಾಗೂ ಮಂಗಳೂರು ಕಡೆಯಿಂದ ಬರುವವರಿಗೆ ಕುಳಾಯಿ, ಕಾನಾ ರಸ್ತೆಯಾಗಿ ಚೊಕ್ಕಬೆಟ್ಟು ಹೋಗಲು ಬದಲಿ ಮಾರ್ಗ ಸೂಚಿಸಲಾಗಿದೆ.

ಪರ್ಯಾಯ ರಸ್ತೆ ಬಳಕೆ ಹಾಗೂ ಸಂಚಾರ ನಿಷೇಧ ಕುರಿತಂತೆ ಮಂಗಳೂರು ಕಮಿಷನರ್ ಆದೇಶ ಹೊರಡಿಸಿದ್ದಾರೆ.

ಕಾಂಕ್ರಿಟೀಕರಣ ಕಾಮಗಾರಿಗೆ ಮಂಗಳೂರು ಮಹಾನಗರ ಪಾಲಿಕೆಯ ನಿಧಿಯಿಂದ 78 ಲಕ್ಷ ರೂ.ಮಂಜೂರು ಮಾಡಲಾಗಿದೆ. ಕಾಮಗಾರಿ ಸಂದರ್ಭ ಒಂದೆರಡು ತಿಂಗಳು ಬದಲಿ ಮಾರ್ಗ ಉಪಯೋಗಿಸುವ ಅನಿವಾರ್ಯತೆಯಿದ್ದು ವಾಹನ ಸವಾರರು ಜನರು ಸಹಕರಿಸಬೇಕು. ಶಾಶ್ವತ ಕಾಮಗಾರಿ ಮಾಡುವ ನಿಟ್ಟಿನಲ್ಲಿ ಕಾಂಕ್ರಿಟ್ ಮಾರ್ಗ ಅಗತ್ಯವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿದ್ದಾರೆ.

Related posts

ನವೀಕರಿಸಿದ ಡಯಾಲಿಸಿಸ್ ಘಟಕದ ಉದ್ಘಾಟನೆ

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours