ನಕ್ಸಲರ ಶರಣಾಗತಿ ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ – ಸುನಿಲ್ ಕುಮಾರ್ ಆಕ್ಷೇಪ

ಉಡುಪಿ : ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ.
ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ? ಎಂಬುದನ್ನು ಸ್ಪಷ್ಟಪಡಿಸಬೇಕು. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ!

ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿಯೂ ಆಗಿದ್ದ ತಣ್ಣಗಿನ ಮಲೆನಾಡು ಭಾಗದಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯನವರೇ? ಇದರಿಂದ ಪೊಲೀಸರ ಆತ್ಮ ಸ್ಥೈರ್ಯ ಏನಾಗಬೇಡ? ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್‌ ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಮರದ ದಿಮ್ಮಿಗೆ ಮೀನುಗಾರಿಕಾ ಬೋಟ್ ಡಿಕ್ಕಿ : ಅಪಾರ ಹಾನಿ

ಮೆಸ್ಕಾಂ ಎಟಿಪಿ ಬಿಲ್ ಪಾವತಿ ಸೇವೆ ಪುನರಾರಂಭಿಸಿ : ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ

ಸಿಬಿಐ ಅಧಿಕಾರಿ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ