ತಲವಾರು ಝಳಪಿಸಿದ ಪ್ರಕರಣ; ಇಬ್ಬರ ಸೆರೆ

ಮಂಗಳೂರು : ಕಾವೂರು ಠಾಣಾ ವ್ಯಾಪ್ತಿಯ ಪಂಜಿಮೊಗರು ಮತ್ತು ಶಾಂತಿನಗರ ಪ್ರದೇಶದಲ್ಲಿ ತಲವಾರು ಝಳಪಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಿಜೈ ನಿವಾಸಿ ವಿಷ್ಣು (18) ಮತ್ತು ಕಾಪಿಕಾಡ್‌ ಆಕಾಶಭವನ ನಿವಾಸಿ ವೇಣುಗೋಪಾಲ್‌ (19) ಬಂಧಿತ ಆರೋಪಿಗಳು.

ಸುಹಾಸ್‌ ಹತ್ಯೆಯ ಮರುದಿನ ಮೇ 2ರಂದು ಸಂಜೆ ವೇಳೆ ಆರೋಪಿಗಳು ತಲವಾರು ಝಳಪಿಸಿ ಸಾರ್ವಜನಿಕರಲ್ಲಿ ಭಯ ಮತ್ತು ಗಾಬರಿ ಹುಟ್ಟಿಸಿದ್ದಾರೆ. ಈ ಬಗ್ಗೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಸಿ ಕೆಮರಾ ಮತ್ತು ಪ್ರತ್ಯಕ್ಷದರ್ಶಿಗಳ ಮಾಹಿತಿಯನ್ವಯ ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳು ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿದ್ದು, ಬಾಡಿ ವಾರಂಟ್‌ ಪಡೆದು ಆರೋಪಿಗಳನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ಪೊಲೀಸ್ ವೃತ್ತ ನಿರೀಕ್ಷಕ ನಂಜಪ್ಪ ಎನ್ ನಿಧನ; ಸರಕಾರಿ ಗೌರವಗಳೊಂದಿಗೆ ಅಂತಿಮ ನಮನ