ಉಡುಪಿ : ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಸಿಮೆಂಟ್ ರೆಡಿಮಿಕ್ಸ್ ಲಾರಿಯೊಂದು ಪಲ್ಟಿಯಾದ ಘಟನೆ ಅಂಬಾಗಿಲು – ಪೆರಂಪಳ್ಳಿ ಕ್ರಾಸ್ನಲ್ಲಿ ಸಂಭವಿಸಿದೆ.
ಚಾಲಕ ಅಪಾಯದಿಂದ ಪಾರಾಗಿದ್ದು, ಯಾವುದೇ ವಾಹನ ಇಲ್ಲದ ಕಾರಣ ದೊಡ್ಡ ದುರಂತವೊಂದು ತಪ್ಪಿದೆ. ಸಿಮೆಂಟ್ ರೆಡಿಮಿಕ್ಸ್ ಲಾರಿ ಅಂಬಾಗಿಲಿನಿಂದ ಮಣಿಪಾಲದ ಕಡೆಗೆ ತೆರಳುತ್ತಿದ್ದು, ಪೆರಂಪಳ್ಳಿಗೆ ತೆರಳುವ ಕ್ರಾಸ್ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಪಲ್ಟಿಯಾಗಿ ಬಿದ್ದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Ambagilu
ಉಡುಪಿ : ಅಂಬಾಗಿಲು ಗುಂಡಿಬೈಲು ಭಾಗದ ಜನರ ಬಸ್ಸಿನ ಸಮಸ್ಯೆ ಪರಿಹಾರಗೊಡಿದೆ.
ಅಂಬಾಗಿಲು ಗುಂಡಿ ಬೈಲ್ನಿಂದ ಉಡುಪಿಗೆ ಹೋಗುವ ಪರವಾನಿಗೆ ಇದ್ದರೂ ಬಸ್ಸುಗಳು ಅಂಬಾಗಿಲು ನಿಟ್ಟೂರು ಬನ್ನಂಜೆಯಿಂದ ಉಡುಪಿಗೆ ಹಾದು ಹೋಗುತ್ತಿದ್ದವು. ಆದ್ದರಿಂದ ಅಂಬಾಗಿಲು ಗುಂಡಿಬೈಲು ಭಾಗದ ಜನರಿಗೆ 15 ವರ್ಷಗಳಿಂದ ಬಸ್ಸಿನ ಸಮಸ್ಯೆ ಕಾಡುತ್ತಿತ್ತು. ಈ ಸಮಸ್ಯೆಗೆ ಈಗ ಮುಕ್ತಿ ಸಿಕ್ಕಿದೆ.
ಇಂದು ಬೆಳಿಗ್ಗೆ ಬಸ್ಸುಗಳನ್ನು ಅಂಬಾಗಿಲು ಜಂಕ್ಷನ್ನಲ್ಲಿ ನಿಲ್ಲಿಸಿ ಬಸ್ಸುಗಳಿಗೆ ನಾಮಫಲಕ ಅಳವಡಿಸಿ ಬಸ್ ಸಿಬ್ಬಂದಿಯೊಂದಿಗೆ ಇನ್ನು ಮುಂದೆ ಗುಂಡಿಬೈಲು ಕಲ್ಸಂಕದಿಂದ ಉಡುಪಿಗೆ ಹಾದು ಹೋಗಬೇಕಾಗಿ ವಿನಂತಿಸಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಆರ್ಟಿಓ ಅಧಿಕಾರಿಗಳು, ನಗರಸಭಾ ಅಧ್ಯಕ್ಷರಾದ ಪ್ರಭಾಕರ್ ಪೂಜಾರಿ, ಕಕ್ಕುಂಜೆ ವಾರ್ಡಿನ ನಗರಸಭಾ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಕರಂಬಳ್ಳಿ ವಾರ್ಡ್ ನಗರಸಭಾ ಸದಸ್ಯರಾದ ಗಿರಿಧರ್ ಆಚಾರ್ಯ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಉಡುಪಿ : ಉಡುಪಿಯ ಅಂಬಾಗಿಲು ಎಂಬಲ್ಲಿ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ಗಾಯಗೊಂಡ ಘಟನೆ ಸಂಭವಿಸಿದೆ.
ಸಂತೆಕಟ್ಟೆಯಿಂದ ಉಡುಪಿ ಕಡೆಗೆ ಸಂಚರಿಸುತಿದ್ದ ಕಾರು ಅತೀ ವೇಗದಲ್ಲಿ ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲುಸಲಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಸ್ತೆಯೆಲ್ಲಾ ಕಾರಿನ ಬಿಡಿಭಾಗಗಳು ಹರಡಿಕೊಂಡು ಅಪಘಾತದ ಭೀಕರತೆಗೆ ಸಾಕ್ಷಿಯಾಗಿವೆ.
ಇನ್ನು ಕಾರಿನ ಕಾರಿನ ಇಂಜಿನ್ ಬೇರ್ಪಟ್ಟು ಮಾರುದೂರ ಹೋಗಿ ಬಿದ್ದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರ ಮಾಹಿತಿ ಇನ್ನಷ್ಟೇ ಗೊತ್ತಾಗಬೇಕಿದ್ದು ಪ್ರಯಾಣಿಸುತ್ತಿದ್ದವರಿಗೆ ಗಂಭೀರ ಗಾಯಗಳಾಗಿರುವ ಸಾಧ್ಯತೆಗಳಿವೆ.