ಉಡುಪಿ : ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು. ದಿನಾಂಕ : 01-08-2024ರ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ : 02.08.2024ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ.
Anganwadi
ಅಂಗನವಾಡಿಗಳಲ್ಲಿ ಪೌಷ್ಠಿಕ ಆಹಾರದ ಜೊತೆಗೆ ಗುಣಮಟ್ಟದ ಶಿಕ್ಷಣ; ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕ : ವಿಧಾನ ಪರಿಷತ್ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಂಗಳೂರು : ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕಾತಿ ಪ್ರತಿಕ್ರಿಯೆ ನಡೆಯಲಿದೆ. ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಕರೆದಿದ್ದು, ಜಿಲ್ಲಾಧಿಕಾರಿಗಳ, ಜಿಲ್ಲಾ ಪಂಚಾಯಿತಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ (ಸಿಇಒ) ಒಳಗೊಂಡ ಜಿಲ್ಲಾ ಮಟ್ಟದ ಸಮಿತಿಯಲ್ಲಿ ನೇಮಕಾತಿ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ವಿಧಾನ ಪರಿಷತ್ ಕಲಾಪದಲ್ಲಿ ಶುಕ್ರವಾರ ನಡೆದ ಪ್ರಶ್ನೋತ್ತರ ವೇಳೆ ಸದಸ್ಯ ಕೆ.ಅಬ್ದುಲ್ ಜಬ್ಬರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅದಷ್ಟು ಬೇಗ ಅಂಗನವಾಡಿ ಶಿಕ್ಷಕಿಯರ ನೇಮಕಾತಿ ನಡೆಯಲಿದೆ ಎಂದರು.
ಅಂಗನವಾಡಿಯ ಮೂಲ ಉದ್ದೇಶ, ಉತ್ತಮ ಶಿಕ್ಷಣದ ಜೊತೆಗೆ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವುದು. ಮುಖ್ಯಮಂತ್ರಿಗಳು ಈಗಾಗಲೇ ಮೌಕಿಕವಾಗಿ ಆದೇಶ ನೀಡಿದ್ದು, ಇದೇ 22ರಿಂದ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ತರಗತಿಗಳನ್ನು ಆರಂಭಿಸಲಾಗುತ್ತಿದ್ದು, ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣ ಮಾಡಲಾಗುವುದು ಎಂದರು.
ಪೌಷ್ಠಿಕ ಆಹಾರ ಯೋಜನೆಯಡಿ ಅಕ್ಕಿ, ಗೋಧಿಯನ್ನು ಕೇಂದ್ರ ಸರ್ಕಾರದ ಎಫ್.ಸಿ.ಐ ಮೂಲಕ, ಹಾಲಿನ ಪುಡಿಯನ್ನು ಕೆ.ಎಂ.ಎಫ್. ಮೂಲಕ ಖರೀದಿಸಲಾಗುತ್ತಿದೆ. ಕೋಳಿಮೊಟ್ಟೆಗಳನ್ನು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಸ್ಥಳೀಯವಾಗಿ ಖರೀದಿಸಲಾಗುತ್ತಿದೆ ಎಂದು ಸಚಿವರು ಹೇಳಿದರು. ಹೇಮಲತಾ ನಾಯಕ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, 49 ವರ್ಷ ಇತಿಹಾಸ ಹೊಂದಿರುವ ರಾಜ್ಯದ ಅಂಗನವಾಡಿಯಲ್ಲಿ ಇದುವರೆಗೂ ಅಹಿತಕರ ಘಟನೆ ವರದಿಯಾಗಿಲ್ಲ. ನಾನೇ ಖುದ್ದು ಕೆಲವೊಂದು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇನೆ ಎಂದು ಹೇಳಿದರು.
ಪೌಷ್ಠಿಕ ಆಹಾರ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಒಂದು ಮಗುವಿಗೆ 8 ರೂಪಾಯಿಯಂತೆ ನಿಗದಿಪಡಿಸಿದೆ. ಕಳೆದ 9 ವರ್ಷಗಳಿಂದ ಈ ಮೊತ್ತವನ್ನು ಕೇಂದ್ರ ಸರ್ಕಾರ ಪರಿಷ್ಕರಿಸಿಲ್ಲ. ಈ ಮೊತ್ತದಲ್ಲೇ ಸರ್ಕಾರ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುತ್ತಿದೆ ಎಂದರು.
2017ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ವೇಳೆ ಸೃಷ್ಠಿ ಎಂಬ ಯೋಜನೆ ಆರಂಭಿಸಿ, ಪೌಷ್ಠಿಕ ಆಹಾರ ನೀಡುವ ಸಲುವಾಗಿ ಮಕ್ಕಳಿಗೆ ಮೊಟ್ಟೆ ನೀಡಲು ತೀರ್ಮಾನಿಸಿತು. ರಾಜ್ಯದಲ್ಲಿ 69 ಸಾವಿರ ಅಂಗನವಾಡಿ ಕೇಂದ್ರಗಳಿದ್ದು, ಈ ಪೈಕಿ ಕೆಲವೊಂದು ಕೇಂದ್ರಗಳಲ್ಲಿ ಸಮಸ್ಯೆಗಳು ಬಂದಿದ್ದು, ಇದರ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಕೋಟ : ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ರೋಟರಿ ಸಮುದಾಯದಳ ಮೂಡುಗಿಳಿಯಾರು ಮತ್ತು ಸಮುದಾಯ ಆರೋಗ್ಯ ಕೇಂದ್ರ ಕೋಟ ಇವರ ಸಂಯುಕ್ತ ಆಶ್ರಯದಲ್ಲಿ ಅಂಗನವಾಡಿ ಕೇಂದ್ರ ಹೊನ್ನಾರಿಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ತಾಯಿ ಮಕ್ಕಳ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಸೋಮವಾರ ನಡೆಸಲಾಯಿತು.
ಕೋಟ ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ಪಿಎಚ್ಸಿ ಮಂದಾನಾಯಕ್ ಶಿಬಿರವನ್ನು ನಡೆಸಿಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಕೋಟ ಸಾಲಿಗ್ರಾಮದ ಅಧ್ಯಕ್ಷ ಜಿ. ತಿಮ್ಮ ಪೂಜಾರಿ ವಹಿಸಿದ್ದರು.
ಕ್ಲಬ್ನ ಸದಸ್ಯ ಶರಣಯ್ಯ ಹಿರೇಮಠ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಗಂಗಾ ಸ್ವಾಗತಿಸಿದರು. ಕ್ಲಬ್ನ ಪೂರ್ವಾಧ್ಯಕ್ಷ ದೇವಪ್ಪ ಪಟಗಾರ ಕಾರ್ಯಕ್ರಮವನ್ನು ನಿರೂಪಿಸಿದರು. ಆರೋಗ್ಯ ನಿರೀಕ್ಷಣಾಧಿಕಾರಿ ಹರಿಶ್ಚಂದ್ರ ನಾಯಕ್ ವಂದಿಸಿದರು.
ಉಡುಪಿ : ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುತ್ಪಾಡಿ ಪಡುಕರೆ ಭಾಗದಲ್ಲಿ ಸುಮಾರು 15 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಅಂಗನವಾಡಿ ಕಟ್ಟಡವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ಪಾಲ್ ಸುವರ್ಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಯಶ್ಪಾಲ್ ಸುವರ್ಣ ಮಕ್ಕಳ ವಿದ್ಯಾಭ್ಯಾಸಕ್ಕೆ ಅಡಿಪಾಯವಾಗಿ ಪ್ರಾಥಮಿಕ ಶಿಕ್ಷಣಕ್ಕೆ ಸಜ್ಜುಗೊಳ್ಳುವಲ್ಲಿ ಅಂಗನವಾಡಿ ಕೇಂದ್ರದ ಪಾತ್ರ ಮಹತ್ವದ್ದಾಗಿದ್ದು, ಪುಟಾಣಿ ಮಕ್ಕಳಿಗೆ ಪೌಷ್ಟಿಕಾಂಶಭರಿತ ಆಹಾರದ ಜೊತೆಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಸದಾ ಸಹಕಾರ ನೀಡುವ ಆಶಯ ವ್ಯಕ್ತಪಡಿಸಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ದಿ ಯೋಜನಾಧಿಕಾರಿ ಶ್ರೀ ಕುಮಾರ್ ನಾಯ್ಕ್, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಪ್ರವೀಣ್ ಮೆಂಡನ್, ಶ್ರೀಮತಿ ವೇದಾವತಿ ರವಿ ಸುವರ್ಣ, ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಪೂರ್ಣಿಮಾ, ಸ್ಥಳ ದಾನಿಗಳಾದ ಶ್ರೀ ಗಂಗಾಧರ ಸಾಲ್ಯಾನ್, ಸ್ಥಳೀಯರಾದ ಶ್ರೀ ಭುವನ್ ಪಡುಕರೆ, ಅಂಗನವಾಡಿ ಕಾರ್ಯಕರ್ತೆಯರು, ಪೋಷಕರು ಉಪಸ್ಥಿತರಿದ್ದರು.
ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಧಾರಾಕಾರ ಮಳೆಯಾಗಿದ್ದು ಇಲ್ಲಿನ ಪಟ್ಟಣ ಪಂಚಾಯತ್ ನಿರ್ಲಕ್ಷ್ಯದಿಂದಾಗಿ ಯಡ್ತರೆ ಗ್ರಾಮದ ಬಂಕೇಶ್ವರ ಅಂಗನವಾಡಿ ಕೇಂದ್ರಕ್ಕೆ ಕೃತಕ ನೆರೆ ನೀರು ನುಗ್ಗಿದೆ. ವಿಷಯ ತಿಳಿದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಟ್ಟಣ ಪಂಚಾಯತ್ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿದ ಶಾಸಕರು, ಪಟ್ಟಣ ಪಂಚಾಯತ್ ಚರಂಡಿ ಅವ್ಯವಸ್ಥೆ ಕುರಿತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಅಂಗನವಾಡಿಯ ಆಹಾರ ಸಾಮಗ್ರಿ ದಾಸ್ತಾನಿಗೂ ಮಳೆ ನೀರು ನುಗ್ಗಿದ್ದು ಎರಡು ದಿನದ ಒಳಗೆ ಒಳಚರಂಡಿ ವ್ಯವಸ್ಥೆ ಸರಿಪಡಿಸುವಂತೆ ಶಾಸಕರು ಸೂಚನೆ ನೀಡಿದರು. ಮಳೆ ನೀರು ನುಗ್ಗಿದ ಪರಿಣಾಮ ಇವತ್ತು ಅಂಗನವಾಡಿ ಮಕ್ಕಳಿಗೆ ರಜೆ ನೀಡಲಾಗಿತ್ತು.