ಮಂಗಳೂರು : ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ತಾಲೂಕು ಸಮಿತಿ, ಮಹಿಳಾ ಘಟಕ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರ ಹಾಗೂ ಎಲ್ಲಾ ಶಾಲಾ ಕಾಲೇಜು ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ ಮಾದಕದ್ರವ್ಯ ವ್ಯಸನಮುಕ್ತ ಮಂಗಳೂರು ಜಾಥಾ ನವೆಂಬರ್ 14ರ ಗುರುವಾರ ಸಂಜೆ 3 ಗಂಟೆಗೆ ಎಸ್.ಡಿ.ಎಂ. ಕಾನೂನು ಕಾಲೇಜು ಸಭಾಂಗಣದಲ್ಲಿ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.
Anti Drug Campaign
ಉಡುಪಿ : ಎಸ್ಎಸ್ಎಫ್ ಉಡುಪಿ ಡಿವಿಷನ್ ವತಿಯಿಂದ ಉಡುಪಿ ನಗರ ಪೊಲೀಸ್ ಠಾಣೆ ಸಹಯೋಗದೊಂದಿಗೆ ಮಾದಕ ದ್ರವ್ಯ ವಿರೋಧಿ ಮಾಸಾಚರಣೆಯ ಅಂಗವಾಗಿ ಕ್ಯಾಂಪಸ್ ವಿದ್ಯಾರ್ಥಿಗಳಿಗಾಗಿ ಮಾದಕ ವ್ಯಸನದ ವಿರುದ್ದ ಜಾಗೃತಿ ಅಭಿಯಾನವನ್ನು ದೊಡ್ಡಣಗುಡ್ಡೆ ರಹ್ಮಾನಿಯ ಜುಮ್ಮಾ ಮಸೀದಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಉಡುಪಿ ನಗರ ಠಾಣೆಯ ಪೋಲಿಸ್ ಉಪನಿರೀಕ್ಷಕರುಗಳಾದ ಈರಣ್ಣ ಶ್ರೀರಂಗುಪ್ಪಿ ಹಾಗೂ ಪುನೀತ್ ಕುಮಾರ್ ಮಾದಕ ವ್ಯಸನದ ಬಗ್ಗೆ ಹಾಗೂ ಸಂಚಾರ ನಿಯಮ ಪಾಲನೆ ಬಗ್ಗೆ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು. ಅಧ್ಯಕ್ಷತೆಯನ್ನು ಎಸ್ಎಸ್ಎಫ್ ಉಡುಪಿ ಡಿವಿಷನ್ ಅಧ್ಯಕ್ಷ ಇಮ್ತಿಯಾಝ್ ಸಂತೋಷ್ ನಗರ ವಹಿಸಿದ್ದರು.
ಕಾರ್ಯಾಗಾರವನ್ನು ಮಸೀದಿ ಸದರ್ ಉಸ್ತಾದ್, ಮಾಜಿ ಡಿವಿಷನ್ ಅಧ್ಯಕ್ಷ ಅಬ್ದುರ್ರಹ್ಮಾನ್ ಸಹದಿ ಉದ್ಘಾಟಿಸಿದರು. ಪೋಲಿಸ್ ಸಿಬ್ಬಂದಿಗಳಾದ ಬಶೀರ್, ಚೇತನ್, ದೊಡ್ಡಣಗುಡ್ಡೆ ಮಸೀದಿಯ ಕಾರ್ಯದರ್ಶಿ ಖಾಸಿಂ, ಸಮಾಜ ಸೇವಕ ರಪೀಕ್ ದೊಡ್ಡಣಗುಡ್ಡೆ, ಡಿವಿಷನ್ ಪ್ರಧಾನ ಕಾರ್ಯದರ್ಶಿ ಫವಾಝ್ ದೊಡ್ಡಣಗುಡ್ಡೆ, ಕೋಶಾಧಿಕಾರಿ ಮುತ್ತಲಿಬ್ ರಂಗನಕೆರೆ ಮೊದಲಾದವರು ಉಪಸ್ಥಿತರಿದ್ದರು.
ಸುಳ್ಯ : ಗಾಂಜಾ ಸಾಗಾಟದ ಪ್ರಕರಣದ ವಿಚಾರಣೆ ನಡೆಸಿ, ನ್ಯಾಯಾಲಯದಲ್ಲಿ ಆರೋಪ ಸಾಬೀತಾಗಿದ್ದು, ಇಬ್ಬರಿಗೆ ಸುಳ್ಯ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
2018ರ ಮಾರ್ಚ್ 28ರಂದು ಸುಳ್ಯ ಗಾಂಧಿನಗರ ಶಾಲಾ ಕ್ರಾಸ್ ಬಳಿ ಮೋಟಾರು ಸೈಕಲ್ನಲ್ಲಿ ಗಾಂಜಾ ಸಾಗಿಸುತ್ತಿದ್ದುದನ್ನು ಪೊಲೀಸರು ಪತ್ತೆ ಹಚ್ಚಿ ಪಿ.ಎಂ. ಮೊಯಿದ್ದೀನ್ ಮತ್ತು ಮುರಳಿ ಸಿ. ಅವರನ್ನು ಬಂಧಿಸಿದ್ದರು. ಇವರಿಬ್ಬರ ಮೇಲಿನ ಆರೋಪ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅವರಿಗೆ ಎನ್.ಡಿ.ಪಿ.ಎಸ್. ಕಾಯ್ದೆಯ ಅಡಿಯಲ್ಲಿ ತಲಾ ರೂ.10,000 ದಂಡ ವಿಧಿಸಲಾಗಿದೆ.
ದಂಡ ತೆರಲು ತಪ್ಪಿದ್ದಲ್ಲಿ 4 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ.ಬಿ ಮೋಹನ್ ಬಾಬು ಅವರು ಆದೇಶ ಮಾಡಿರುತ್ತಾರೆ. ಈ ಪ್ರಕರಣವನ್ನು ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕರು ವಾದ ಮಂಡಿಸಿದ್ದಾರೆ.