Arrest

ಗಾಂಜಾ ಮಾರಾಟಕ್ಕೆ ಯತ್ನ – ಬಿಹಾರ ಮೂಲದ ವ್ಯಕ್ತಿ ಅರೆಸ್ಟ್, 1.50ಕೆಜಿ ಗಾಂಜಾ ವಶ

ಮಂಗಳೂರು : ನಗರದ ಹೊಸಬೆಟ್ಟು ಬೀಚ್ ರಸ್ತೆಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಬಿಹಾರ ಮೂಲದ ವ್ಯಕ್ತಿಯೋರ್ವನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಿಹಾರ್ ರಾಜ್ಯದ ನಿವಾಸಿ ಸೋನಿ ಕುಮಾರ್(27) ಬಂಧಿತ ಆರೋಪಿ. ಸುರತ್ಕಲ್ ಠಾಣಾ ಪೊಲೀಸರು ಹೊಸಬೆಟ್ಟು ಬಳಿ ಬೀಚ್ ರಸ್ತೆಯಲ್ಲಿ ಗಸ್ತು…

Read more

ವಾಹನ ಅಪಘಾತದ ವಿಚಾರದಲ್ಲಿ ಹಲ್ಲೆ : ಆರೋಪಿಯ ಬಂಧನ

ಉಳ್ಳಾಲ : ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದ ವಿಚಾರವಾಗಿ ಚಾಲಕರಿಬ್ಬರ ಮಧ್ಯೆ ಹೊಯ್ ಕೈ ನಡೆದಿರುವ ಘಟನೆ ಬುಧವಾರ ರಾತ್ರಿ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಸಂಭವಿಸಿದೆ. ಈ ಪ್ರಕರಣವು ಉಳ್ಳಾಲ ಠಾಣಾ ಮೆಟ್ಟಿಲೇರಿದ್ದು, ಮಾತುಕತೆಗೆ ತೆರಳಿದ್ದ ಸಂಘ ಪರಿವಾರದ ಮುಖಂಡನಿಗೆ ಹಲ್ಲೆಗೈದ…

Read more

ದುಬೈನ ಫಾರ್ಚ್ಯೂನ್ ಗ್ರೂಪ್ ಆಫ್ ಹೋಟೆಲ್ಸ್ ಸಂಸ್ಥೆಗೆ 2.5 ಕೋಟಿ ವಂಚಿಸಿದ್ದ ಆರೋಪಿ ಬಂಧನ

ಉಡುಪಿ : ಅನಿವಾಸಿ ಭಾರತೀಯ, ತಾಲೂಕಿನ ವಕ್ವಾಡಿ ಮೂಲದ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ ಹಂತಹಂತವಾಗಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಜಾಮೀನು ಪಡೆದು…

Read more

ದಲಿತ ಸಮುದಾಯ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವಹೇಳನ; ಕಾರ್ಕಳ ತಾಲೂಕು ಹಿಂದೂ ಜಾಗರಣ ವೇದಿಕೆಯ ಸಹಸಂಚಾಲಕ ಬಂಧನ

ಉಡುಪಿ : ದಲಿತ ಸಮುದಾಯ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿ ಮಾತಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಹಿಂದೂ ಜಾಗರಣ ವೇದಿಕೆಯ ಕಾರ್ಕಳ ತಾಲೂಕು ಸಹಸಂಚಾಲಕ ಉಮೇಶ ನಾಯ್ಕ ಸೂಡ ಎಂಬಾತನನ್ನು ಪೊಲೀಸರು ಕಾರ್ಕಳದಲ್ಲಿ ಬಂಧಿಸಿದ್ದಾರೆ. ಪೊಲೀಸರು…

Read more

ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಬಾಂಗ್ಲಾಪ್ರಜೆ – ಉಡುಪಿಯಲ್ಲಿ ಅಕ್ರಮವಾಗಿ ಪಾಸ್‌ಪೋರ್ಟ್ ಮಾಡಿದ್ದ ನುಸುಳುಕೋರ

ಮಂಗಳೂರು : ಭಾರತಕ್ಕೆ ಅಕ್ರಮವಾಗಿ ನುಸುಳಿಕೊಂಡು ಬಂದು ಉಳಿದುಕೊಂಡಿದ್ದಲ್ಲದೆ, ಅಕ್ರಮ ಪಾಸ್‌ಪೋರ್ಟ್ ಮಾಡಿಸಿ ದುಬೈಗೆ ಹಾರಲೆತ್ನಿಸಿದ ಬಾಂಗ್ಲಾ ಮೂಲದ ವ್ಯಕ್ತಿಯೊಬ್ಬನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಾಂಗ್ಲಾದೇಶ ಮೂಲದ ನಿವಾಸಿ ಮಾಣಿಕ್ ಹುಸೈನ್ (26) ಬಂಧಿತ ಆರೋಪಿ.…

Read more

ಮರಳು ಮಾಫಿಯಾ ವಿರುದ್ದ ಪ್ರತಿಭಟನೆ ನಡೆಸಿದ್ದಕ್ಕೆ ಹಲ್ಲೆ : ಇಬ್ಬರ ಬಂಧನ

ಮಂಗಳೂರು : ಮರಳು ಮಾಫಿಯ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಮಾರ್ಗದರ್ಶನ ನೀಡುತ್ತಿದ್ದ ಆಲ್ವಿನ್ ಜೆರೋಮ್ ಡಿಸೋಜಾ ಮೇಲೆ ಹಲ್ಲೆ ನಡೆದ ಪ್ರಕರಣದಲ್ಲಿ, ಮಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರು ಬಂಟ್ವಾಳದ ಪುದು ಗ್ರಾಮದ ಮೊಹಮ್ಮದ್ ಅತಾವುಲ್ಲಾ (40) ಮತ್ತು ಮಂಗಳೂರಿನ ಮಾರ್ನಮಿಕಟ್ಟೆಯ…

Read more

33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಉಡುಪಿ : ಹಳೇ ಪ್ರಕರಣಕ್ಕೆ ಸಂಬಂಧಿಸಿ ಕಳೆದ 33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕಾರ್ಕಳ ರೆಂಜಾಳದ ಮಹಮ್ಮದ್ ಬಶೀರ್‌ನನ್ನು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ವಿಶೇಷ ಕರ್ತವ್ಯದಲ್ಲಿ ತೆರಳಿದ್ದ ಠಾಣಾ ಹೆಡ್‌ ಕಾನ್ಸ್‌ಟೆಬಲ್ ಸುರೇಶ್, ಪಿಸಿ ಹೇಮಂತ್ ಕುಮಾರ್, ಶಿವಕುಮಾ‌ರ್ ಮತ್ತು…

Read more

ಲಕ್ಷಾಂತರ ಮೌಲ್ಯದ ಅಕ್ರಮ ಗೋವಾ ಮದ್ಯ ವಶ – ಆರೋಪಿ ಬಂಧನ

ಉಡುಪಿ : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್‌ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಅಕ್ರಮವಾಗಿ ಗೋವಾ ಮದ್ಯವನ್ನು ಸಾಗಾಟ ಮಾಡುತ್ತಿದ್ದ ಅನಂತ ದೇವದಾಸ ಪ್ರಭು ಎಂಬಾತನನ್ನು ಅಬಕಾರಿ ನಿರೀಕ್ಷಕರ ನೇತೃತ್ವದಲ್ಲಿ ದಸ್ತಗಿರಿ ಮಾಡಿ ಮದ್ಯ ಹಾಗೂ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.…

Read more

ಒರಿಸ್ಸಾದಿಂದ ಮಂಗಳೂರಿಗೆ 8.650 ಕೆಜಿ ಗಾಂಜಾ ಸಾಗಿಸಿ ಮಾರಾಟಕ್ಕೆ ಯತ್ನ – ಇಬ್ಬರು ಅರೆಸ್ಟ್

ಮಂಗಳೂರು : ಒರಿಸ್ಸಾದಿಂದ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು 8.650 ಕೆಜಿ ಗಾಂಜಾ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಒರಿಸ್ಸಾ ರಾಜ್ಯದ ಗಜಪತಿ ಜಿಲ್ಲೆ, ಕಿರ್ಟಿಂಗ್ ನ್ಯೂ ಸ್ಟ್ರೀಟ್, ಪಿಂಡಿಕ್ಕಿ ಗ್ರಾಮದ ನಿವಾಸಿ ಬುಲುಬಿರೊ(24), ಪಶ್ಚಿಮ ಬಂಗಾಳದ ಮುರ್ಶಿದಾಬಾದ್…

Read more

ಹಾಸ್ಟೆಲ್‌ಗೆ ನುಗ್ಗಿ ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ – ಆರೋಪಿ ನವೀನ್ ನಾಯ್ಕ್ ಬಂಧನ

ಮಣಿಪಾಲ : ಮಣಿಪಾಲ ಠಾಣೆ ವ್ಯಾಪ್ತಿಯ ಅನಂತನಗರ ಹಿಂದುಳಿದ ವರ್ಗದವರ ಮೆಟ್ರಿಕ್ ನಂತರದ ಹಾಸ್ಟಲ್‌ಗೆ ಅಕ್ರಮ ಪ್ರವೇಶ ಮಾಡಿ ಕಿಟಕಿಯ ಬಳಿ ಮಂಚದಲ್ಲಿ ಮಲಗಿಕೊಂಡಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿವಳ್ಳಿ ಗ್ರಾಮದ ನವೀನ್ ನಾಯ್ಕ್ (22) ಗ್ರಾಮ…

Read more