ಉಡುಪಿ : ಉಡುಪಿಯ ಮಣಿಪಾಲದಲ್ಲಿ ಆಘಾತಕಾರಿ ಘಟನೆ ಸಂಭವಿಸಿದೆ. ಚಿಕ್ಕಮಗಳೂರು ಮೂಲದ ಆನಂದ (37) ಎಂಬವರು ಕಾರಿನೊಳಗೆ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ.

ಆನಂದ ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಕರೆತಂದಿದ್ದರು. ರೋಗಿಯನ್ನು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲು ಮಾಡಿದ ಬಳಿಕ, ಆನಂದ ಅವರಿಗೆ ತಂಗಲು ಯಾವುದೇ ರೂಮ್ ಸಿಗದ ಕಾರಣ ಕಾರಿನಲ್ಲಿಯೇ ಮಲಗಲು ನಿರ್ಧರಿಸಿದರು. ಮಣಿಪಾಲ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಕಾರನ್ನು ಪಾರ್ಕ್ ಮಾಡಿದ್ದರು. ಕಾರಿನ ಗ್ಲಾಸ್ಗಳನ್ನು ಮುಚ್ಚಿಕೊಂಡು ಮಲಗಿದ್ದ ಹಿನ್ನಲೆ, ಆನಂದ ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ಮಣಿಪಾಲ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.