ಬಾರ್ಕೂರು : ಮೂರು ದಶಕಗಳಿಗೂ ಮಿಕ್ಕಿ ಬಾರ್ಕೂರು ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಸೇವೆಸಲ್ಲಿಸಿದ್ದ, ಶ್ರೇಷ್ಠ ಶಿಕ್ಷಣ ತಜ್ಞರಾದ ಸೀತಾರಾಮ ಶೆಟ್ಟರು ಇಂದು ಮುಂಜಾನೆ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.
ಬಾರ್ಕೂರು ಎಜುಕೇಶನಲ್ ಸೊಸೈಟಿಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಇವರು ಭಾರತೀಯ ವಿಕಾಸ ಟ್ರಸ್ಟ್ನಲ್ಲಿಯೂ ಪರಿಸರ ಸಂರಕ್ಷಣೆಗಾಗಿ ಸಮಾಜಕ್ಕೆ ಸಂದೇಶಗಳನ್ನು ನೀಡುತ್ತಾ ದೊಡ್ಡ ಸೇವೆಯನ್ನು ಸಲ್ಲಿಸಿದ್ದಾರೆ. ಕೃಷಿ, ನೀರು ಇಂಗಿಸುವಿಕೆಯ ಬಗ್ಗೆ ವಿಶೇಷ ಆಸಕ್ತಿಯನ್ನು ಹೊಂದಿದ್ದ ಇವರು ಎಷ್ಟೋ ಯುವಕ – ಯುವತಿಯರಿಗೆ ಆದರ್ಶ ವ್ಯಕ್ತಿಯಾಗಿದ್ದರು.
ಪತ್ನಿ, ಮೂವರು ಪುತ್ರಿಯರು ಹಾಗೂ ಅಪಾರ ಶಿಷ್ಯವರ್ಗವನ್ನು ಅಗಲಿದ್ದಾರೆ. ಯಕ್ಷಗಾನ ಪ್ರೇಮಿಯಾದ, ಯಕ್ಷಗಾನ ಕಲಾರಂಗದ ಆಜೀವ ಸದಸ್ಯರೂ ಆಗಿದ್ದ ಇವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.