ಬೆಳ್ತಂಗಡಿ : ಬೆಂಗಳೂರಿನಲ್ಲಿ ನಡೆದ ಬೈಕ್ ಮತ್ತು ಕಂಟೈನರ್ ನಡುವೆ ಭೀಕರ ಅಪಘಾತದಲ್ಲಿ ಇಂದಬೆಟ್ಟುವಿನ ಯುವಕ ಮೃತಪಟ್ಟ ಘಟನೆ ನಡೆದಿದೆ.

ಇಂದಬೆಟ್ಟು ಗ್ರಾಮದ ವಸಂತ ಗೌಡರವರ ಪುತ್ರ ತುಷಾರ್ (22ವ) ಮೃತ ದುರ್ದೈವಿಯಾಗಿದ್ದಾರೆ.
ಬೈಕ್ನಲ್ಲಿದ್ದ ಇನೋರ್ವ ವ್ಯಕ್ತಿ ಬೆಳಾಲು ನಿವಾಸಿ ಸೃಜನ್ ಸುರುಳಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ.
ತುಷಾರ್ರವರು ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ರಾತ್ರಿ ವೇಳೆ ಬೈಕ್ನಲ್ಲಿ ಹೋಗುವಾಗ ಈ ಅವಘಡ ಸಂಭವಿಸಿದೆ.