ಉಡುಪಿ : ಉಡುಪಿ ಶ್ರೀಕೃಷ್ಣ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಭೇಟಿ ನೀಡಿ ಶ್ರೀ ಕೃಷ್ಣ ಹಾಗೂ ಮುಖ್ಯಪ್ರಾಣ ದೇವರ ದರ್ಶನ ಮಾಡಿ ಪರ್ಯಾಯ ಶ್ರೀಪಾದರಿಂದ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಶಾಸಕ ಯಶ್ಪಾಲ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

ಮಲ್ಪೆ : ಉಡುಪಿಯ ಇತಿಹಾಸ ಪ್ರಸಿದ್ದ ಮಲ್ಪೆ ವಡಭಾಂಡೇಶ್ವರ ಶ್ರೀ ಬಲರಾಮ ದೇವಸ್ಥಾನಕ್ಕೆ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ವೈ ವಿಜಯೆಂದ್ರ ಭೇಟಿ ನೀಡಿ ದೇವರ ದರ್ಶನ ಪಡೆದು, ದೇವಾಲಯದ ಸಮಗ್ರ ಜೀರ್ಣೋದ್ಧಾರವನ್ನು ನೋಡಿ ಪ್ರಶಂಸಿದರು.
ಇದೇ ಸಂದರ್ಭದಲ್ಲಿ ಶಾಸಕರಾದ ಯಶ್ಪಾಲ್ ಸುವರ್ಣ, ಹರೀಶ್ ಪೂಂಜ ಹಾಗೂ ಮಂಗಳೂರು ಎಂ.ಪಿ. ಕ್ಯಾ. ಬ್ರಿಜೇಶ್ ಚೌಟ ಹಾಗೂ ದೇವಾಲಯದ ಟಿ. ಶ್ರೀನಿವಾಸ ಭಟ್, ಶ್ರೀಶ ಆಚಾರ್ಯ ಕಡೇಕಾರ್, ನಾಗರಾಜ ಮೂಲಿಗಾರ್, ಶಶಿಧರ್ ಅಮೀನ್, ಶರತ್ ಬೈಲಕೆರೆ, ಈಶ್ವರ್ ಜಿ ಸಾಲ್ಯಾನ್ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ : ಅ.21ರಂದು ನಡೆಯಲಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಅ.15ರಂದು ಉಡುಪಿ ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ‘ಜನಪ್ರತಿನಿಧಿಗಳ ಸಮಾವೇಶ’ವನ್ನು ಉದ್ದೇಶಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಾತನಾಡಿ ಮಾರ್ಗದರ್ಶನ ನೀಡಿದರು.
ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಸಮಾವೇಶವನ್ನುದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲೆಯ ಶಾಸಕರುಗಳಾದ ಯಶ್ಪಾಲ್ ಎ. ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರು : ಗ್ರಾಮ ಪಂಚಾಯತ್ಗಳ ಬಲವರ್ಧನೆಗೆ ಕೇಂದ್ರದ ಬಿಜೆಪಿಯ ನರೇಂದ್ರ ಮೋದಿಯವರ ನಾಯಕತ್ವದ ಎನ್ಡಿಎ ಸರಕಾರ ಕಾರಣ ಎಂದು ಮಾಜಿ ಸಂಸದ ಹಾಗೂ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಅವರು ಶನಿವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡ ಸುದ್ದಿ ಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.
ಗ್ರಾಮ ಪಂಚಾಯತ್ಗಳಿಗೆ ಕೇಂದ್ರದಿಂದ ನೇರವಾಗಿ ಅನುದಾನ ಬಿಡುಗಡೆ, ನರೇಗಾ, ಸ್ವರ್ಣ ಗ್ರಾಮ ಯೋಜನೆ, ಪಂಚಾಯತ್ ಸದಸ್ಯರಿಗೆ ಗೌರವಧನ ಬಿಜೆಪಿ ನೇತೃತ್ವದ ಸರಕಾರದ ಕೊಡುಗೆ. ಕಳೆದ ಆರೂವರೆ ವರ್ಷ ಬಿಜೆಪಿ ಬೆಂಬಲಿತ ಶಾಸಕ ಕೋಟ
ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್ ಸದಸ್ಯರಾಗಿ ಸಕ್ರೀಯರಾಗಿದ್ದರು. ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ ಕಾರಣ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಿಶೋರ್ ಕುಮಾರ್ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ ಅವರನ್ನು ಬೆಂಬಲಿಸಿ ಬಿಜೆಪಿಯನ್ನು ಈ ಬಾರಿಯೂ ಗೆಲ್ಲಿಸಬೇಕೆಂದು ತಾನು ಮತದಾರರಲ್ಲಿ ಮನವಿ ಮಾಡುವುದಾಗಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಸಿದ್ದರಾಮಯ್ಯರ ನೇತೃತ್ವದಲ್ಲಿನ ಸರಕಾರ ಹಗರಣಗಳಿಂದ ಕೂಡಿದ ಸರಕಾರವಾಗಿದೆ. ಅಭಿವೃದ್ಧಿ ಯೋಜನೆ ಹಣ ಬಿಡುಗಡೆ ಆಗುತ್ತಿಲ್ಲ. ಶಾಸಕರ ನಿಧಿಯ ಯೋಜನೆಗಳಿಗೂ ಅನುದಾನ ಬಿಡುಗಡೆ ಆಗಿಲ್ಲ. ಹಿಂದಿನ ಯಡಿಯೂರಪ್ಪ, ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯಕ್ಕೆ ಜಿಲ್ಲೆಗೆ ಕೋಟ್ಯಾಂತರ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ದಸರಾ ಕಾರ್ಯಕ್ರಮದಲ್ಲೂ ಮುಖ್ಯಮಂತ್ರಿ ರಾಜಕೀಯ ಮಾತುಗಳನ್ನಾಡಿದ್ದಾರೆ. ಭ್ರಷ್ಟಾಚಾರ ಮಿತಿ ಮೀರಿದೆ. ರೈತರ ಆತ್ಮಹತ್ಯೆ ದೊಡ್ಡ ಪ್ರಮಾಣದಲ್ಲಿ ನಡೆದಿದೆ. ಮುಖ್ಯಮಂತ್ರಿಯವರ ಮೇಲೆ ಎಫ್ಐಆರ್ ದಾಖಲಾದರು ಅವರು ರಾಜಿನಾಮೆ ಕೊಟ್ಟಿಲ್ಲ. ಅವರು ಆ ಸ್ಥಾನದಲ್ಲಿ ಮುಂದುವರಿಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದರು. ನಿಮ್ಮ ಮುಂದಿನ ರಾಜಕೀಯ ಭವಿಷ್ಯ ಏನು ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು ಪಕ್ಷದ ಕಾರ್ಯಕರ್ತನಾಗಿ ಇರುತ್ತೇನೆ. ನಾನು ವಿಧಾನ ಪರಿಷತ್ ಅಭ್ಯರ್ಥಿಯ ಆಕಾಂಕ್ಷಿಯಾಗಿರಲಿಲ್ಲ ಪಕ್ಷ ನನಗೆ ಮೂರು ಬಾರಿ ಸಂಸದನಾಗುವ ಅವಕಾಶ, ರಾಜ್ಯಾಧ್ಯಕ್ಷನಾಗುವ ಅವಕಾಶ ನಾನು ಯಾವುದೇ ಬೇಡಿಕೆ ನೀಡದೆ ಕೊಟ್ಟಿದೆ ಅದಕ್ಕಾಗಿ ನಾನು ಪಕ್ಷಕ್ಕೆ ಋಣಿಯಾಗಿದ್ದೇನೆ ಮುಂದೆಯೂ ಪಕ್ಷ ಘಟನೆಯ ಕೆಲಸ ಮಾಡುತ್ತೇನೆ ಎಂದರು.
ಸುದ್ದಿಗೋಷ್ಠಿಯಲ್ಲಿ ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಉಪಾಧ್ಯಕ್ಷ ರಾಕೇಶ್ ರೈ, ಜಿಲ್ಲಾ ವಕ್ತಾರ ರಾಜಗೋಪಾಲ ರೈ, ವಿಧಾನ ಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು, ಬಿಜೆಪಿ ಜಿಲ್ಲಾ ಸಂಘದ ಕೋಶಾಧಿಕಾರಿ ಸಂಜಯ ಪ್ರಭು ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು : ಅಕ್ಟೋಬರ್ 21ರಂದು ನಡೆಯಲಿರುವ ವಿಧಾನ ಪರಿಷತ್ನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಕ್ಷೇತ್ರಕ್ಕೆ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆ ವೇಳೆ ಸಂಸದ ಕ್ಯಾ. ಬ್ರಿಜೇಶ್ ಚೌಟ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಮುಖಂಡ ಪ್ರಮೋದ ಮಧ್ವರಾಜ್, ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಕಿಶೋರ್ ಕುಮಾರ್ ಜೊತೆಗಿದ್ದರು.
ನಾಮಪತ್ರ ಸಲ್ಲಿಕೆಗೆ ತೆರಳುವ ಪೂರ್ವದಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅಭ್ಯರ್ಥಿ ಕಿಶೋರ್ ಕುಮಾರ್, ‘ನನ್ನಂತಹ ಸಾಮಾನ್ಯ ಕಾರ್ಯಕರ್ತನಿಗೆ ಇಂತಹ ಅವಕಾಶ ಸಿಕ್ಕಿದೆ. ಇದು ಬಿಜೆಪಿಯಲ್ಲಿ ಮಾತ್ರ ಸಾಧ್ಯ. ಪಕ್ಷಕ್ಕೆ ಕಪ್ಪುಚುಕ್ಕೆ ಬರದಂತೆ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ’ ಎಂದರು.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಎಲ್ಲ ಬಿಜೆಪಿ ಶಾಸಕರು ಹಾಜರಿದ್ದರು. ನಾಮಪತ್ರ ಸಲ್ಲಿಕೆಗೆ ತೆರಳುವ ಪೂರ್ವದಲ್ಲಿ ಪಕ್ಷದ ಕಚೇರಿ ಎದುರು ಕಾರ್ಯಕರ್ತರು ಹಾರ ಹಾಕಿ ಅಭ್ಯರ್ಥಿಯನ್ನು ಅಭಿನಂದಿಸಿದರು. ಚೆಂಡೆ ವಾದ್ಯ, ಕಾರ್ಯಕರ್ತರ ಜಯಘೋಷ ಮೊಳಗಿದವು.
ಬೆಂಗಳೂರು : ಚುನಾವಣಾ ಬಾಂಡ್ ಮೂಲಕ ಕಾರ್ಪೊರೇಟ್ ಕಂಪೆನಿಗಳಿಂದ ಸಾವಿರಾರು ಕೋಟಿ ರೂ. ಸುಲಿಗೆ ಮಾಡಿದ ಆರೋಪದಡಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ಬೆಂಗಳೂರಿನ ತಿಲಕ್ನಗರ ಪೊಲೀಸ್ ಠಾಣೆಯಲ್ಲಿ ಶನಿವಾರ ಎಫ್ಐಆರ್ ದಾಖಲಾಗಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಮೇರೆಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಜಾರಿ ನಿರ್ದೇಶನಾಲಯ(ಈ.ಡಿ) ಅಧಿಕಾರಿಗಳು ಸೇರಿ ಇತರರ ವಿರುದ್ಧ ಅಪರಾಧಿಕ ಒಳಸಂಚು, ಸುಲಿಗೆಯಡಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣದಲ್ಲಿ ನಿರ್ಮಲಾ ಸೀತಾರಾಮನ್ ಅವರು ಎ1 ಆರೋಪಿಯಾಗಿದ್ದಾರೆ. ಈ.ಡಿ. ಅಧಿಕಾರಿಗಳು ಎ2, ಕೇಂದ್ರ ಬಿಜೆಪಿ ಪದಾಧಿಕಾರಿಗಳು ಎ3, ನಳಿನ್ ಕುಮಾರ್ ಕಟೀಲ್ ಎ4, ಬಿ.ವೈ.ವಿಜಯೇಂದ್ರ ಎ5, ರಾಜ್ಯ ಬಿಜೆಪಿ ಪದಾಧಿಕಾರಿಗಳು ಎ6 ಆರೋಪಿಗಳಾಗಿದ್ದಾರೆ.
ಚುನಾವಣಾ ಬಾಂಡ್ ಮೂಲಕ 8 ಸಾವಿರ ಕೋಟಿ ರೂ. ಸುಲಿಗೆ ಮಾಡಿ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿ ದೂರುದಾರ ಜನಾಧಿಕಾರ ಸಂಘರ್ಷ ಪರಿಷತ್(ಜೆಎಸ್ಪಿ)ನ ಆದರ್ಶ ಆರ್. ಅಯ್ಯರ್ ಎಂಬವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ನಾಯಾಲಯ, ಎಫ್ಐಆರ್ ದಾಖಲಿಸುವಂತೆ ಬೆಂಗಳೂರಿನ ತಿಲಕ್ನಗರ ಠಾಣಾ ಪೊಲೀಸರಿಗೆ ಶುಕ್ರವಾರ ಸೂಚನೆ ನೀಡಿತ್ತು.
ಜಾರಿ ನಿರ್ದೇಶನಾಲಯ(ಈ.ಡಿ.) ಬಳಸಿಕೊಂಡು ದೇಶದ ಕಾರ್ಪೊರೇಟ್ ಕಂಪೆನಿಗಳ ಮೂಲಕ ದಾಳಿ ಮಾಡಿ, ಅವರಿಂದ ಚುನಾವಣಾ ಬಾಂಡ್ ಮೂಲಕ ಸುಮಾರು 8 ಸಾವಿರ ಕೋಟಿ ರೂ.ವರೆಗೂ ಹಣ ಸುಲಿಗೆ ಮಾಡಲಾಗಿದೆ. ರಾಜ್ಯದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರಹಸ್ಯ ಮಾರ್ಗವಾಗಿ ಹಣ ವರ್ಗಾವಣೆಗೆ ಸಹಕರಿಯಾಗಿದ್ದಾರೆ. ರಾಜಕೀಯ ಲಾಭಕ್ಕಾಗಿ ಈ.ಡಿ. ಬಳಸಿಕೊಂಡು ಕಂಪೆನಿಗಳ ಮೇಲೆ ದಾಳಿ ಮಾಡಿ, ಸಿಇಒ ಹಾಗೂ ಎಂ.ಡಿ.ಯನ್ನು ಬಂಧಿಸಲಾಗಿತ್ತು. ಬಂಧನಕ್ಕೆ ಹೆದರಿದ ಕಂಪೆನಿ ಮಾಲಕರಿಗೆ ಚುನಾವಣಾ ಬಾಂಡ್ ಖರೀದಿಗೆ ಒತ್ತಾಯಿಸಿದ್ದಾರೆ ಎಂದು ಆದರ್ಶ ಆರ್. ಅಯ್ಯರ್ ದೂರಿನಲ್ಲಿ ವಿವರಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಸೆ.17ರಿಂದ ಅ.2 ಗಾಂಧಿ ಜಯಂತಿ ಆಚರಣೆಯವರೆಗೆ ವಿವಿಧ ಸೇವಾ ಚಟುವಟಿಕೆಗಳೊಂದಿಗೆ ನಡೆಯುತ್ತಿರುವ ಸೇವಾ ಪಾಕ್ಷಿಕ ಮತ್ತು ಬಿಜೆಪಿ ಸದಸ್ಯತಾ ಅಭಿಯಾನಕ್ಕೆ ವೇಗ ನೀಡುವ ಜೊತೆಗೆ ಸೆ.29ರಂದು ಬೆಳಿಗ್ಗೆ 11.00 ಗಂಟೆ ನಡೆಯುವ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮದ ನೇರ ಪ್ರಸಾರವನ್ನು ಪಕ್ಷದ ಪ್ರಮುಖರು, ಜಿಲ್ಲೆ, ಮಂಡಲ, ಮೋರ್ಚಾ, ಪ್ರಕೋಷ್ಠಗಳ ಸಹಿತ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ವೀಕ್ಷಿಸಿ ತಮ್ಮ ಬೂತ್ ಸಂಖ್ಯೆಯೊಂದಿಗೆ ಫೋಟೋ ಮತ್ತು ವಿವರವನ್ನು ಸರಲ್ ಆಪ್ನಲ್ಲಿ ಅಪ್ಲೋಡ್ ಮಾಡುವ ಮೂಲಕ ಉಡುಪಿ ಜಿಲ್ಲೆ ಈ ಎಲ್ಲಾ ಅಭಿಯಾನಗಳಲ್ಲಿ ರಾಜ್ಯದಲ್ಲೇ ಮುಂಚೂಣಿ ಸ್ಥಾನ ಪಡೆಯುವಂತೆ ಸಂಘಟಿತ ಶ್ರಮ ವಹಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಕರೆ ನೀಡಿದರು.
ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸೇವಾ ಪಾಕ್ಷಿಕದ ಅಂಗವಾಗಿ ‘ತಾಯಿಯ ಹೆಸರಲ್ಲಿ ಒಂದು ಸಸಿ’ ನೆಡುವ ಅಭಿಯಾನದ ಜೊತೆಗೆ ಉದ್ಯಾನವನ, ಧಾರ್ಮಿಕ ಕೇಂದ್ರಗಳಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಬೇಕು. ಪಕ್ಷದ ಪ್ರಮುಖರು, ಜವಾಬ್ದಾರಿಯುತ ಪದಾಧಿಕಾರಿಗಳು, ಸಮಿತಿ ಸದಸ್ಯರು, ಎಲ್ಲಾ ಜನಪ್ರತಿನಿಧಿಗಳು, ಅಭಿಯಾನಗಳ ಪ್ರಭಾರಿಗಳು, ಸಂಚಾಲಕರು ಮತ್ತು ಕಾರ್ಯಕರ್ತರು ಮನೆಮನೆ ಭೇಟಿಯ ಮೂಲಕ ಸದಸ್ಯತಾ ಮಹಾ ಅಭಿಯಾನದಲ್ಲಿ ತೊಡಗಿಸಿಕೊಂಡು, ಸ್ವಯಂ 100 ಮೇಲ್ಪಟ್ಟು ಹಾಗೂ ಪ್ರತೀ ಬೂತ್ನಲ್ಲಿ ಕನಿಷ್ಠ 300 ಸಂಖ್ಯೆಯ ಸದಸ್ಯತನವನ್ನು ನೊಂದಾಯಿಸುವ ಮೂಲಕ ಎಲ್ಲಾ ಅಭಿಯಾನಗಳನ್ನು ಯಶಸ್ವಿಗೊಳಿಸಬೇಕು ಎಂದರು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ ಮಾತನಾಡಿ ಸಂಘಟನಾತ್ಮಕವಾಗಿ ಮುಂಚೂಣಿಯಲ್ಲಿರುವ ಉಡುಪಿ ಜಿಲ್ಲೆ ಸದಸ್ಯತಾ ಅಭಿಯಾನ, ಮನ್ ಕೀ ಬಾತ್ ವೀಕ್ಷಣೆ ಮತ್ತು ವರದಿ ಅಪ್ಲೋಡ್ ಹಾಗೂ ಸೇವಾ ಪಾಕ್ಷಿಕ ಅಭಿಯಾನದಲ್ಲಿ ರಾಜ್ಯಕ್ಕೇ ಮಾದರಿಯಾಗಬೇಕು ಎಂದರು.
ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಸದಸ್ಯತಾ ಅಭಿಯಾನದ ಜಿಲ್ಲಾ ಸಂಚಾಲಕ ಮಟ್ಟಾರ್ ರತ್ನಾಕರ ಹೆಗ್ದೆ ಮಾತನಾಡಿ ದೇಶವನ್ನು ವಿಶ್ವದ ಮುಂದುವರಿದ ರಾಷ್ಟ್ರಗಳಲ್ಲಿ 5ನೇ ಸ್ಥಾನಕ್ಕೇರಿಸಿ ದೇಶವನ್ನು ಪ್ರಗತಿಯ ಪಥದಲ್ಲಿ ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಆಡಳಿತಾವಧಿಯಲ್ಲಿ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ ಬಿಜೆಪಿಯ ಸದಸ್ಯತನವನ್ನು ಪಡೆಯುವುದು ಸುಯೋಗ. ಈ ನಿಟ್ಟಿನಲ್ಲಿ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪ್ರಯತ್ನದಿಂದ ಗರಿಷ್ಠ ಸದಸ್ಯತನ ನೊಂದಾವಣೆ ಮೂಲಕ ಅಭಿಯಾನವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಸೇವಾ ಪಾಕ್ಷಿಕ ಅಭಿಯಾನದ ಕಾರ್ಯಕ್ರಮಗಳ ಕುರಿತು ಹಾಗೂ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕುಂದರ್ ಮನ್ ಕೀ ಬಾತ್ ವೀಕ್ಷಣೆ ಮತ್ತು ವರದಿ ಅಪ್ಲೋಡ್ ಮಾಡುವ ಕುರಿತು ಮಾಹಿತಿ ನೀಡಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಪೆರಣoಕಿಲ ಶ್ರೀಶ ನಾಯಕ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಕೋಶಾಧಿಕಾರಿ ಮನೋಹರ್ ಎಸ್. ಕಲ್ಮಾಡಿ, ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ರಾಜ್ಯ ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ದಿನಕರ ಬಾಬು, ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ವಿಕ್ಯಾತ್ ಶೆಟ್ಟಿ ಸಹಿತ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು, ರಾಜ್ಯ ಪ್ರಕೋಷ್ಠಗಳ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಉಡುಪಿ : ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ ಇಂದು ಸಂಜೆ ಜಿಲ್ಲಾ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತು.
ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸಿಎಂ ರಾಜಿನಾಮೆ ನೀಡುವಂತೆ ಒತ್ತಾಯಿಸಿದರು. ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ ಪ್ರತಿಭಟನಕಾರರು ನೈತಿಕ ಹೊಣೆ ಹೊತ್ತು ತಕ್ಷಣವೇ ರಾಜಿನಾಮೆ ನೀಡಬೇಕು. ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ್ದನ್ನು ಕಾಂಗ್ರೆಸ್ ಸರಕಾರ ವಿರೋಧಿಸಿತ್ತು. ಸಚಿವ ಸಂಪುಟದಲ್ಲೂ ರಾಜ್ಯಪಾಲರ ವಿರುದ್ಧ ನಿರ್ಣಯ ಕೈಗೊಂಡಿತ್ತು. ಈಗ ರಾಜ್ಯಪಾಲರ ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿದೆ. ತಡಮಾಡದೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಬ್ರಹ್ಮಾವರ : ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 74ನೇ ಹುಟ್ಟು ಹಬ್ಬವನ್ನು ಬ್ರಹ್ಮಾವರ ಮಟಪಾಡಿಯ ವಿಜಯ ಬಾಲನಿಕೇತನದಲ್ಲಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ರುಡಾಲ್ಫ್ ಡಿಸೋಜ ಅವರ ನೇತೃತ್ವದಲ್ಲಿ ಕೇಕ್ ಕತ್ತರಿಸಿ, ಸಿಹಿ ಹಂಚುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಕಾರ್ಯದರ್ಶಿ ಜಸೆಲ್ ಡಿಸೋಜ, ಮೋರ್ಚಾದ ಮಾಜಿ ರಾಜ್ಯ ಉಪಾಧ್ಯಕ್ಷ ಸಲೀಂ ಅಂಬಾಗಿಲು, ಜಿಲ್ಲಾ ಉಪಾಧ್ಯಕ್ಷೆ ಸುನಿತಾ ಡಿಸೋಜಾ, ಪ್ರಧಾನ ಕಾರ್ಯದರ್ಶಿ ಶೇಕ್ ಆಸೀಫ್, ಮೋರ್ಚಾದ ಬೈಂದೂರು ಮಂಡಲ ಅಧ್ಯಕ್ಷ ಅಂತೋನಿ ಡಿಸೋಜ, ವಿಜಯ ಬಾಲ ನಿಕೇತನದ ಉಪಾಧ್ಯಕ್ಷ ವಿಶ್ವನಾಥ್ ಶೆಟ್ಟಿ, ಮಟಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಶೋಕ್ ಪೂಜಾರಿ ಉಪಸ್ಥಿತರಿದ್ದರು.
ಮಂಗಳೂರು : ಮನಪಾ 25ನೇ ಅವಧಿಯ ಮೇಯರ್ ಆಗಿ ಮನೋಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಆಗಿ ಭಾನುಮತಿಯವರು ಆಯ್ಕೆಯಾಗಿದ್ದಾರೆ.
ಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿ(ಎಸ್ಸಿ) ಹಾಗೂ ಉಪ ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗ ‘ಎ’ ನಿಗದಿಯಾಗಿತ್ತು. ಬಿಜೆಪಿ ಬಹುಮತ ಹೊಂದಿದ್ದರೂ ವಿರೋಧ ಪಕ್ಷ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದು ವಾಡಿಕೆ. ಆದರೆ ಕಾಂಗ್ರೆಸ್ನಲ್ಲಿ ಪರಿಶಿಷ್ಟ ಜಾತಿ(ಎಸ್ಸಿ) ಮೀಸಲು ಅಭ್ಯರ್ಥಿ ಇಲ್ಲದ ಹಿನ್ನೆಲೆಯಲ್ಲಿ ಮೇಯರ್ ಆಗಿ ಮನೋಜ್ ಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮನೋಜ್ ಕುಮಾರ್ ಅವರು 2ಉಮೇದುವಾರಿಕೆ ಸಲ್ಲಿಸಿದ್ದು, ಎರಡೂ ಸ್ವೀಕೃತಗೊಂಡಿದೆ.
ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಭಾನುಮತಿ ಹಾಗೂ ವನಿತಾ ಪ್ರಸಾದ್, ಕಾಂಗ್ರೆಸ್ನಿಂದ ಜೀನತ್ ಸಂಶುದ್ದೀನ್ ಸ್ಪರ್ಧಾ ಕಣದಲ್ಲಿದ್ದರು. ಭಾನುಮತಿಯವರು ಎರಡು ಉಮೇದುವಾರಿಕೆ ಸಲ್ಲಿಸಿದ್ದು, ಜಾತಿಪ್ರಮಾಣ ಪತ್ರ ಸಲ್ಲಿಸದ ಕಾರಣ ಒಂದು ನಾಮಪತ್ರ ತಿರಸ್ಕೃತಗೊಂಡಿತು. ಚುನಾವಣಾ ಅಧಿಕಾರಿ ಉಮೇದುವಾರಿಕೆ ಹಿಂದೆಗೆದುಕೊಳ್ಳಲು 5ನಿಮಿಷ ಅವಕಾಶ ನೀಡಿದ್ದು, ವನಿತಾ ಪ್ರಸಾದ್ ನಾಮಪತ್ರ ಹಿಂದೆಗೆಕೊಂಡರು. ಈ ಹಿನ್ನೆಲೆಯಲ್ಲಿ ಜೀನತ್ ಸಂಶುದ್ದೀನ್ ಹಾಗೂ ಭಾನುಮತಿಯವರು ಚುನಾವಣಾ ಕಣದಲ್ಲಿದ್ದರು. ಜೀನತ್ ಸಂಶುದ್ದೀನ್ ಪರ 14ಮತ ಬಿದ್ದರೆ, ಭಾನುಮತಿಯವರಿಗೆ 47 ಮತ ಚಲಾವಣೆಯಾಯಿತು. ಈ ಮೂಲಕ ಭಾನುಮತಿಯವರು ಉಪಮೇಯರ್ ಆಗಿ ಆಯ್ಕೆಯಾದರು.
ತೆರಿಗೆ ಹಣಕಾಸು ಸ್ಥಾಯಿ ಸಮಿತಿ, ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ, ಪಟ್ಟಣ ಯೋಜನೆ ಸುಧಾರಣೆ ಸ್ಥಾಯೀಸಮಿತಿ, ಲೆಕ್ಕಪತ್ರ ಸ್ಥಾಯಿಸಮಿತಿ ಸೇರಿದಂತೆ ನಾಲ್ಕು ಸ್ಥಾಯಿಸಮಿತಿಗೆ ತಲಾ ಏಳೇಳು ಮಂದಿ ಸದಸ್ಯರಂತೆ ಅವಿರೋಧವಾಗಿ ಆಯ್ಕೆಯಾದರು. ಚುನಾವಣೆ ನಡೆದ ವೇಳೆ 65 ಮನಪಾ ಸದಸ್ಯರಲ್ಲಿ 61ಮಂದಿ ಹಾಜರಿದ್ದು, ಚುನಾವಣೆಯಲ್ಲಿ ಪಾಲ್ಗೊಂಡರು. ಮೈಸೂರು ರೀಜನಲ್ ಕಮಿಷನರ್ ರಮೇಶ್ ಡಿ.ಎಸ್. ಚುನಾವಣಾ ಅಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆ ನಡೆಸಿದರು.
ನೂತನವಾಗಿ ಮೇಯರ್, ಉಪ ಮೇಯರ್ಗಳಿಗೆ ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಮನಪಾ ಸದಸ್ಯರು, ಅಭಿಮಾನಿಗಳು ಅಭಿನಂದಿಸಿದರು.
Maax News covers major news and events of Udupi district. This channel provides detailed reports on the political, social, economic, and cultural life of Udupi district.
Maax News, equipped with the most sophisticated studio in Udupi, assures people comprehensive news coverage.