Brahmavara

ಬ್ರಹ್ಮಾವರ ಸಕ್ಕರೆ ಕಾರ್ಖಾನೆ : ಬೇಡಿಕೆ ಈಡೇರಿಕೆಗೆ ಸರಕಾರ ಒಪ್ಪಿಗೆ – 49 ದಿನಗಳ ದರಣಿ ನಾಳೆ ಅಂತ್ಯ

ಬ್ರಹ್ಮಾವರ : ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿರುವ 14ಕೋಟಿ ರೂ. ವಂಚನೆಯ ವಿರುದ್ಧ ರೈತರ ಹೋರಾಟಕ್ಕೆ ಮೊದಲ ಹಂತದ ಜಯ ಸಿಕ್ಕಿದೆ. ಧರಣಿ ನಿರತ ರೈತರ ಎಲ್ಲ ಬೇಡಿಕೆಗಳನ್ನೂ ಸರ್ಕಾರ ಒಪ್ಪಿರುವುದಾಗಿ ಉಡುಪಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಧರಣಿ…

Read more

ರಸ್ತೆ ದಾಟುತ್ತಿದ್ದ ಬಾಲಕನಿಗೆ ಅತೀ ವೇಗವಾಗಿ ಬಂದ ಕಾರು ಢಿಕ್ಕಿ; ಬಾಲಕ ಸಾವು

ಬ್ರಹ್ಮಾವರ : ರಸ್ತೆ ದಾಟುತ್ತಿದ್ದಾಗ ಬಾಲಕನಿಗೆ ಅತೀ ವೇಗವಾಗಿ ಬಂದ ಕಾರು ಢಿಕ್ಕಿಯಾಗಿ ಪರಿಣಾಮ ಬಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬ್ರಹ್ಮಾವರ ಸಮೀಪ ಮಂಗಳವಾರ ಬೆಳಿಗ್ಗೆ ನಡೆದಿದೆ. ಮೃತ ಬಾಲಕ ಸ್ಥಳೀಯ ಎಸ್‌ಎಮ್‌ಎಸ್ ಆಂಗ್ಲಮಾಧ್ಯಮ ಶಾಲೆಯ 6ನೇ ತರಗತಿ…

Read more

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬ್ರಹ್ಮಾವರ : ಅಣ್ಣನಿಂದ 10 ಲಕ್ಷ ರೂ.ಮೌಲ್ಯದ ಚಿನ್ನಾಭರಣಗಳನ್ನು ಸುಳ್ಳುಹೇಳಿ ಪಡೆದು ತಂಗಿಯೇ ವಂಚಿಸಿ, ಬೆದರಿಕೆ ಹಾಕಿದ ಘಟನೆ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಹಾರಾಡಿಯಲ್ಲಿ ನಡೆದಿದೆ. ಹಾರಾಡಿ ಗ್ರಾಮದಲ್ಲಿ ವಾಸವಾಗಿರುವ ವಿಶ್ವನಾಥ್ ಇವರ ಮನೆಗೆ ಕಳೆದ ವರ್ಷದ ಎಪ್ರಿಲ್ ತಿಂಗಳಲ್ಲಿ ಬಂದ…

Read more

ಚೇರ್ಕಾಡಿ ಗ್ರಾಪಂ ಬರ್ಖಾಸ್ತುಗೊಳಿಸುವಂತೆ ಆಗ್ರಹಿಸಿ ಧರಣಿ

ಬ್ರಹ್ಮಾವರ : ಜನವಿರೋಧಿ ನೀತಿ ಅನುಸರಿಸುತ್ತಿರುವ ಚೇರ್ಕಾಡಿ ಗ್ರಾಮ ಪಂಚಾಯತ್ ಬರ್ಖಾಸ್ತುಗೊಳಿಸುವಂತೆ ಆಗ್ರಹಿಸಿ ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ, ಸಮತಾ ಸೈನಿಕ ದಳ ಉಡುಪಿ ವತಿಯಿಂದ ಗ್ರಾ.ಪಂ ಎದುರು ಧರಣಿ ನಡೆಸಲಾಯಿತು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಸಮುದಾಯದವರಿಗೆ ನೀಡ‌ಬೇಕಾದ…

Read more

ಹಬ್ಬಕ್ಕೆ ನೃತ್ಯದ ರಂಗು – ಕುಡುಬಿ ಸಮುದಾಯದ ಹೋಳಿ ಆಚರಣೆಯೇ ವಿಭಿನ್ನ

ಬ್ರಹ್ಮಾವರ : ನಾಡಿನಾದ್ಯಂತ ಹೋಳಿ ಹುಣ್ಣಿಮೆಯ ಸಂಭ್ರಮ ಮನೆಮಾಡಿದೆ. ಬಣ್ಣದ ಪುಡಿ, ರಂಗಿನ ನೀರು ಎರಚಿ ಜನ ಹೋಳಿ ಆಚರಣೆ ಮಾಡುತ್ತಿದ್ದಾರೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನಲ್ಲಿ ಕುಡುಬಿ ಸಮುದಾಯ ಸಾಂಪ್ರದಾಯಕ ಹೋಳಿ ಆಚರಣೆಯಲ್ಲಿ ತೊಡಗಿಸಿಕೊಂಡಿದೆ. ವಿಭಿನ್ನ ವೇಷಭೂಷಣ, ಹೂವಿನ ಅಲಂಕಾರ…

Read more

ನೆಲ, ನೀರು, ಆಕಾಶ – ಮಕ್ಕಳ ವಿಜ್ಞಾನ ಕಾರ್ಯಾಗಾರ

ಉಡುಪಿ : ಭಾರತ ಜ್ಞಾನ ವಿಜ್ಞಾನ ಸಮಿತಿ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕು ಘಟಕದ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಭಾಗವಾಗಿ ನೆಲ – ನೀರು – ಆಕಾಶ ಎಂಬ ಒಂದು ದಿನದ ವಿಜ್ಞಾನ ಕಾರ್ಯಾಗಾರವನ್ನು ಎಸ್.ಎಮ್.ಎಸ್ ಆಂಗ್ಲ ಮಾಧ್ಯಮ ಶಾಲೆ…

Read more

2025ನೇ ಸಾಲಿನ ಉಡುಪ-ಹಂದೆ ಪ್ರಶಸ್ತಿಗೆ ಹೆರೆಂಜಾಲು ಗೋಪಾಲ ಗಾಣಿಗ, ಶ್ರೀಪಾದ ಭಟ್ ಆಯ್ಕೆ

ಬ್ರಹ್ಮಾವರ : ಐವತ್ತರ ಸುವರ್ಣ ಸಂಭ್ರಮವನ್ನು ಆಚರಿಸುತ್ತಿರುವ ಯಕ್ಷಗಾನದಲ್ಲಿ ವಿಶ್ವ ಖ್ಯಾತಿ ಪಡೆದಿರುವ ಸಾಲಿಗ್ರಾಮ ಮಕ್ಕಳ ಮೇಳದ ಸ್ಥಾಪಕ ನಿರ್ದೇಶಕರೂ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರೂ ಆಗಿರುವ ದಿ.ಕಾರ್ಕಡ ಶ್ರೀನಿವಾಸ ಉಡುಪ ಮತ್ತು ಎಚ್. ಶ್ರೀಧರ ಹಂದೆ ಹೆಸರಿನ 2025ರ ಸಾಲಿನ…

Read more

108 ಅರೋಗ್ಯ ಕವಚ ಆಂಬುಲೆನ್ಸ್‌ನಲ್ಲಿ ಸುರಕ್ಷಿತ ಹೆರಿಗೆ

ಬ್ರಹ್ಮಾವರ : 108 ಅರೋಗ್ಯ ಕವಚ ಆಂಬುಲೆನ್ಸ್‌ನಲ್ಲಿ ಸುರಕ್ಷಿತ ಹೆರಿಗೆಯಾದ ಘಟನೆ ಇಂದು ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆಯಲ್ಲಿ ನಡೆದಿದೆ. ಬೆಳಗ್ಗಿನ ಜಾವ ಕೊಕ್ಕರ್ಣೆಯ 108 ಆಂಬುಲೆನ್ಸ್‌ಗೆ ಕರೆ ಬಂದಿತ್ತು. ಅದರಂತೆ ಬ್ರಹ್ಮಾವರ ತಾಲೂಕಿನ ಹೊಸೂರು ಗ್ರಾಮಕ್ಕೆ ಧಾವಿಸಿದ 108 ಆಂಬುಲೆನ್ಸ್ ಸಿಬ್ಬಂದಿ,…

Read more

ಪತ್ರಕರ್ತರ ಸಂಘ ಕೊಡಮಾಡುವ ವಡ್ಡರ್ಸೆ ರಘುರಾಮ್ ಶೆಟ್ಟಿ ಪ್ರಶಸ್ತಿಗೆ ರವಿ ಹೆಗಡೆ ಆಯ್ಕೆ

ಕೋಟ : ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ಆಶ್ರಯದಲ್ಲಿ ಕೊಡಮಾಡುವ 2024ನೇ ಸಾಲಿನ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಕನ್ನಡಪ್ರಭ ಪತ್ರಿಕೆಯ ಪ್ರಧಾನ ಸಂಪಾದಕ, ಹಿರಿಯ ಪತ್ರಕರ್ತ ರವಿ ಹೆಗಡೆ ಆಯ್ಕೆಯಾಗಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸಿದ ಗಣ್ಯರಿಗೆ…

Read more

ಬೆಂಕಿ ಆಕಸ್ಮಿಕ – ಚಿಕಿತ್ಸೆ ಫಲಕಾರಿಯಾಗದೆ ವೃದ್ಧೆ ಸಾವು

ಬ್ರಹ್ಮಾವರ : ಆರೂರು ಗ್ರಾಮದ ಬಂಗ್ಲಗುಡ್ಡೆ ಎಂಬಲ್ಲಿ ಸಂಭವಿಸಿದ ಬೆಂಕಿ ಅಕಸ್ಮಿಕದಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರನ್ನು ಆರೂರು ಗ್ರಾಮದ ಗಿರಿಜಾ(70) ಎಂದು ಗುರುತಿಸಲಾಗಿದೆ. ಇವರು ಮನೆಯ ಒಲೆಯ ಬಳಿ ಚಳಿ ಕಾಯಿಸುತ್ತಿರುವಾಗ ಸೀರೆಗೆ ಆಕಸ್ಮಿಕವಾಗಿ ಬೆಂಕಿ…

Read more