ಉಡುಪಿ : ಉಡುಪಿ ಶ್ರೀಕೃಷ್ಣ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಭೇಟಿ ನೀಡಿ ಶ್ರೀ ಕೃಷ್ಣ ಹಾಗೂ ಮುಖ್ಯಪ್ರಾಣ ದೇವರ ದರ್ಶನ ಮಾಡಿ ಪರ್ಯಾಯ ಶ್ರೀಪಾದರಿಂದ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಶಾಸಕ ಯಶ್ಪಾಲ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

ಮಲ್ಪೆ : ಉಡುಪಿಯ ಇತಿಹಾಸ ಪ್ರಸಿದ್ದ ಮಲ್ಪೆ ವಡಭಾಂಡೇಶ್ವರ ಶ್ರೀ ಬಲರಾಮ ದೇವಸ್ಥಾನಕ್ಕೆ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ವೈ ವಿಜಯೆಂದ್ರ ಭೇಟಿ ನೀಡಿ ದೇವರ ದರ್ಶನ ಪಡೆದು, ದೇವಾಲಯದ ಸಮಗ್ರ ಜೀರ್ಣೋದ್ಧಾರವನ್ನು ನೋಡಿ ಪ್ರಶಂಸಿದರು.
ಇದೇ ಸಂದರ್ಭದಲ್ಲಿ ಶಾಸಕರಾದ ಯಶ್ಪಾಲ್ ಸುವರ್ಣ, ಹರೀಶ್ ಪೂಂಜ ಹಾಗೂ ಮಂಗಳೂರು ಎಂ.ಪಿ. ಕ್ಯಾ. ಬ್ರಿಜೇಶ್ ಚೌಟ ಹಾಗೂ ದೇವಾಲಯದ ಟಿ. ಶ್ರೀನಿವಾಸ ಭಟ್, ಶ್ರೀಶ ಆಚಾರ್ಯ ಕಡೇಕಾರ್, ನಾಗರಾಜ ಮೂಲಿಗಾರ್, ಶಶಿಧರ್ ಅಮೀನ್, ಶರತ್ ಬೈಲಕೆರೆ, ಈಶ್ವರ್ ಜಿ ಸಾಲ್ಯಾನ್ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ : ಅ.21ರಂದು ನಡೆಯಲಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಅ.15ರಂದು ಉಡುಪಿ ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ‘ಜನಪ್ರತಿನಿಧಿಗಳ ಸಮಾವೇಶ’ವನ್ನು ಉದ್ದೇಶಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಾತನಾಡಿ ಮಾರ್ಗದರ್ಶನ ನೀಡಿದರು.
ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಸಮಾವೇಶವನ್ನುದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲೆಯ ಶಾಸಕರುಗಳಾದ ಯಶ್ಪಾಲ್ ಎ. ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ ಮತ್ತಿತರರು ಉಪಸ್ಥಿತರಿದ್ದರು.
ಬಂಟ್ವಾಳ : ಭ್ರಷ್ಟ, ಜನ ವಿರೋಧಿ, ಹಿಂದೂ ವಿರೋಧಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬುದ್ದಿ ಕಲಿಸಬೇಕಾದ ಅಗತ್ಯವಿದೆ. ಆದ್ದರಿಂದ ರಾಜ್ಯ ಸರಕಾರದ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ನೀಡಿ, ಸರ್ಕಾರವನ್ನು ವಜಾಗೊಳಿಸಲು ಮನವಿ ಸಲ್ಲಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಬಂಟ್ವಾಳದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ. ಪರಿಣಾಮ ಸರ್ಕಾರ ಒಂದೂವರೆ ವರ್ಷದಲ್ಲೇ ಜನರ ಹಿಡಿಶಾಪಕ್ಕೆ ಒಳಗಾಗಿದೆ. ವಾಲ್ಮೀಕಿ ಹಗರಣದ ಹಗರಣದ ಬಗ್ಗೆ ಸಿಎಂ ಸದನದಲ್ಲೇ ಒಪ್ಪಿದ್ದಾರೆ. ಮೈಸೂರಿನ ಮುಡಾ ಹಗರಣದಲ್ಲೂ ಸಿದ್ದರಾಮಯ್ಯ ಅದೇ ರೀತಿ ಹೇಳಿದ್ದಾರೆ. ಪರಿಹಾರ ನಿರೀಕ್ಷಿಸದೆ ನಿವೇಶನ ಹಿಂದೆ ಕೊಟ್ಟಿದ್ದಾರೆ. ಮೊದಲು ಪರಿಹಾರ ಕೊಡಿ ಎಂದಿದ್ದ ಸಿದ್ದರಾಮಯ್ಯ ಈಗ ಪರಿಹಾರ ಕೇಳದೇ ಹಿಂದಿರುಗಿಸಿದ್ದಾರೆ. ಈ ಮೂಲಕ ತಪ್ಪು ಮಾಡಿರೋದನ್ನು ಒಪ್ಪಿಕೊಂಡಿದ್ದಾರೆ ಎಂದರು.
ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಗೆ ಹಣ ನೀಡುತ್ತಿಲ್ಲ. ಮೊನ್ನೆ ರಾಜು ಕಾಗೆ ಸ್ವತಃ ಅನುದಾನ ಸಿಗುತ್ತಿಲ್ಲವೆಂದು ಹೇಳಿ ಕ್ಷೇತ್ರದಲ್ಲಿ ತಲೆ ಎತ್ತಿನಡೆಯಲಾಗದೇ ಆತ್ಮಹತ್ಯೆ ಮಾಡುವ ಪರಿಸ್ಥಿತಿಯಿದೆ ಅಂದಿದ್ದಾರೆ.
ಕ್ಯಾಬಿನೆಟ್ನಲ್ಲಿ ಹುಬ್ಬಳ್ಳಿ ಗಲಭೆಯ ಆರೋಪಿಗಳ ಕೇಸು ವಾಪಾಸ್ ಪಡೆಯಲಾಗಿದೆ. ದೇಶದ್ರೋಹಿಗಳ ಕೇಸುಗಳನ್ನು ವಾಪಸ್ ಪಡೆಯಲಾಗಿದೆ. ಎನ್ಐಎ ಸೇರಿ ಕರ್ನಾಟಕ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಹೀಗಿರುವಾಗ ಕೇಸು ವಾಪಸ್ ಪಡೆದಿರೋದು ಅಕ್ಷಮ್ಯ ಅಪರಾಧ. ಈ ಹಿನ್ನೆಲೆಯಲ್ಲಿ ಅ.25ರಂದು ಹುಬ್ಬಳ್ಳಿಯಲ್ಲಿ ಬೃಹತ್ ಹೋರಾಟ ಮಾಡ್ತೇವೆ ಎಂದರು.
ಚೆನ್ನಪಟ್ಟಣ, ಸಂಡೂರು ಉಪಚುನಾವಣೆ ಅಭ್ಯರ್ಥಿ ಘೋಷಣೆ ವಿಚಾರ ರಾಷ್ಟ್ರೀಯ ನಾಯಕರ ಮುಂದಿದೆ. ಹಲವು ಬಾರಿ ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚೆ ಆಗಿದೆ. ಆದರೆ ಈವರೆಗೆ ಯಾರು ಅಭ್ಯರ್ಥಿ ಅನ್ನೋದು ಚರ್ಚೆಯಾಗಿಲ್ಲ. ಡಿಕೆಶಿ ಬೆಂಗಳೂರು ಗ್ರಾಮಾಂತರದಲ್ಲೂ ನಾನೇ ಅಭ್ಯರ್ಥಿ ಅಂದಿದ್ದರು. ಆದರೆ ಅಲ್ಲಿನ ಜನ ಅವರಿಗೆ ಅಲ್ಲಿ ಪಾಠ ಕಲಿಸಿದ್ದಾರೆ. ಹೀಗಾಗಿ ಚನ್ನಪಟ್ಟಣದಲ್ಲೂ ಜನರು ಅವರಿಗೆ ಪಾಠ ಕಲಿಸ್ತಾರೆ. ನಾವು ತಕ್ಷಣ ಸೂಕ್ತ ಅಭ್ಯರ್ಥಿಗಳ ಆಯ್ಕೆ ಮಾಡ್ತೇವೆ ಎಂದರು.
ಉಡುಪಿ : ಸಂಡೂರು, ಶಿಗ್ಗಾವಿ, ಚನ್ನಪಟ್ಟಣ ಚುನಾವಣೆ ಘೋಷಣೆಯಾಗಿದೆ. ಚನ್ನಪಟ್ಟಣ ಅಭ್ಯರ್ಥಿ ಯಾರಾಗಬೇಕು ಎಂಬ ಬಗ್ಗೆ ನಾಳೆ ಕೇಂದ್ರದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಸಂಡೂರು ಮತ್ತು ಶಿಗ್ಗಾವಿ ಬಗ್ಗೆ ಇವತ್ತು ರಾತ್ರಿ ಚರ್ಚೆ ಮಾಡುತ್ತೇವೆ. ಅಭ್ಯರ್ಥಿ ಯಾರು ಎಂಬ ಪಟ್ಟಿಯನ್ನು ಕಳುಹಿಸಿ ಕೊಡುತ್ತೇವೆ. ನಾಳೆ ಅಥವಾ ನಾಡಿದ್ದು ಅಂತಿಮ ತೀರ್ಮಾನ ಆಗುತ್ತೆ. ಮೂರೂ ಕ್ಷೇತ್ರದಲ್ಲಿ ಗೆಲ್ಲುವುದು ಬಿಜೆಪಿಯ ಗುರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಎನ್ಡಿಎ ಗೆಲ್ಲಿಸಬೇಕು, ಇದು ನಮ್ಮ ಗುರಿ. ನಮ್ಮ ಕಾರ್ಯಕರ್ತರು ಸಜ್ಜಾಗಿದ್ದಾರೆ. ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಂದೋಲನ ಮಾಡಿದ್ದೇವೆ. ಅಭಿವೃದ್ಧಿ ಶೂನ್ಯ ಸರಕಾರದ ವಿರುದ್ಧ ಜನ ಆಕ್ರೋಶಿತರಾಗಿದ್ದಾರೆ. ಇದರ ಪರಿಣಾಮ ಮೂರೂ ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ ಎಂದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಈಗಾಗಲೇ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿಗಳ ರೇಸ್ನಲ್ಲಿ ಇರುವವರ ಪಟ್ಟಿ ದೊಡ್ಡದಿದೆ. ಸದ್ಯದಲ್ಲೇ ಯಾರ್ಯಾರು ಇದ್ದಾರೆ ಅನ್ನೋದು ಬಹಿರಂಗವಾಗಲಿದೆ. ಭ್ರಷ್ಟಾಚಾರದ ಸುಳಿಯಲ್ಲಿ ಸಿಕ್ಕ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕಾದ ಸಂದರ್ಭ ಬಂದಿದೆ. ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಆಗಲು ಅನೇಕ ಹಿರಿಯರು ಕಾಯುತ್ತಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಕೊಡುವುದನ್ನು ಕಾಯುತ್ತಿದ್ದಾರೆ ಎಂದು ಹೇಳಿದ್ದಾರೆ.
ಉಡುಪಿ : ಅ.21ರಂದು ನಡೆಯಲಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಜನಪ್ರತಿನಿಧಿಗಳ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ‘ಜನಪ್ರತಿನಿಧಿಗಳ ಸಮಾವೇಶ’ವು ನಾಳೆ ಅ.15 ಮಂಗಳವಾರ ಮಧ್ಯಾಹ್ನ ಗಂಟೆ 3.00ಕ್ಕೆ ಉಡುಪಿ-ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನಡೆಯಲಿದೆ.
ಈ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.
ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು, ರಾಜ್ಯ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್, ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲೆಯ ಶಾಸಕರುಗಳಾದ ಯಶ್ಪಾಲ್ ಎ. ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯ ಡಾ| ಧನಂಜಯ ಸರ್ಜಿ ಹಾಗೂ ಪಕ್ಷದ ಪ್ರಮುಖರು, ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಅಪೇಕ್ಷಿತರು ಪಾಲ್ಗೊಳ್ಳಲಿದ್ದಾರೆ ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ಚುನಾವಣಾ ಬಾಂಡ್ ಮೂಲಕ ಕಾರ್ಪೊರೇಟ್ ಕಂಪೆನಿಗಳಿಂದ ಸಾವಿರಾರು ಕೋಟಿ ರೂ. ಸುಲಿಗೆ ಮಾಡಿದ ಆರೋಪದಡಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ಬೆಂಗಳೂರಿನ ತಿಲಕ್ನಗರ ಪೊಲೀಸ್ ಠಾಣೆಯಲ್ಲಿ ಶನಿವಾರ ಎಫ್ಐಆರ್ ದಾಖಲಾಗಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಮೇರೆಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಜಾರಿ ನಿರ್ದೇಶನಾಲಯ(ಈ.ಡಿ) ಅಧಿಕಾರಿಗಳು ಸೇರಿ ಇತರರ ವಿರುದ್ಧ ಅಪರಾಧಿಕ ಒಳಸಂಚು, ಸುಲಿಗೆಯಡಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣದಲ್ಲಿ ನಿರ್ಮಲಾ ಸೀತಾರಾಮನ್ ಅವರು ಎ1 ಆರೋಪಿಯಾಗಿದ್ದಾರೆ. ಈ.ಡಿ. ಅಧಿಕಾರಿಗಳು ಎ2, ಕೇಂದ್ರ ಬಿಜೆಪಿ ಪದಾಧಿಕಾರಿಗಳು ಎ3, ನಳಿನ್ ಕುಮಾರ್ ಕಟೀಲ್ ಎ4, ಬಿ.ವೈ.ವಿಜಯೇಂದ್ರ ಎ5, ರಾಜ್ಯ ಬಿಜೆಪಿ ಪದಾಧಿಕಾರಿಗಳು ಎ6 ಆರೋಪಿಗಳಾಗಿದ್ದಾರೆ.
ಚುನಾವಣಾ ಬಾಂಡ್ ಮೂಲಕ 8 ಸಾವಿರ ಕೋಟಿ ರೂ. ಸುಲಿಗೆ ಮಾಡಿ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿ ದೂರುದಾರ ಜನಾಧಿಕಾರ ಸಂಘರ್ಷ ಪರಿಷತ್(ಜೆಎಸ್ಪಿ)ನ ಆದರ್ಶ ಆರ್. ಅಯ್ಯರ್ ಎಂಬವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ನಾಯಾಲಯ, ಎಫ್ಐಆರ್ ದಾಖಲಿಸುವಂತೆ ಬೆಂಗಳೂರಿನ ತಿಲಕ್ನಗರ ಠಾಣಾ ಪೊಲೀಸರಿಗೆ ಶುಕ್ರವಾರ ಸೂಚನೆ ನೀಡಿತ್ತು.
ಜಾರಿ ನಿರ್ದೇಶನಾಲಯ(ಈ.ಡಿ.) ಬಳಸಿಕೊಂಡು ದೇಶದ ಕಾರ್ಪೊರೇಟ್ ಕಂಪೆನಿಗಳ ಮೂಲಕ ದಾಳಿ ಮಾಡಿ, ಅವರಿಂದ ಚುನಾವಣಾ ಬಾಂಡ್ ಮೂಲಕ ಸುಮಾರು 8 ಸಾವಿರ ಕೋಟಿ ರೂ.ವರೆಗೂ ಹಣ ಸುಲಿಗೆ ಮಾಡಲಾಗಿದೆ. ರಾಜ್ಯದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರಹಸ್ಯ ಮಾರ್ಗವಾಗಿ ಹಣ ವರ್ಗಾವಣೆಗೆ ಸಹಕರಿಯಾಗಿದ್ದಾರೆ. ರಾಜಕೀಯ ಲಾಭಕ್ಕಾಗಿ ಈ.ಡಿ. ಬಳಸಿಕೊಂಡು ಕಂಪೆನಿಗಳ ಮೇಲೆ ದಾಳಿ ಮಾಡಿ, ಸಿಇಒ ಹಾಗೂ ಎಂ.ಡಿ.ಯನ್ನು ಬಂಧಿಸಲಾಗಿತ್ತು. ಬಂಧನಕ್ಕೆ ಹೆದರಿದ ಕಂಪೆನಿ ಮಾಲಕರಿಗೆ ಚುನಾವಣಾ ಬಾಂಡ್ ಖರೀದಿಗೆ ಒತ್ತಾಯಿಸಿದ್ದಾರೆ ಎಂದು ಆದರ್ಶ ಆರ್. ಅಯ್ಯರ್ ದೂರಿನಲ್ಲಿ ವಿವರಿಸಿದ್ದಾರೆ.
ಉಡುಪಿ : ಬಿಜೆಪಿಯ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಅಶ್ವಿನಿ ಅವರು ಮಹಿಳಾ ಮೋರ್ಚಾದ ಮೂಲಕ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದಿರುವ ಅವರು, ಅವರ ಕುಟುಂಬಸ್ಥರು ಬಂಧುಗಳು, ಹಿತೈಷಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
ಉಡುಪಿ : ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರನ್ನು ಬಂಧಿಸಿ ಪ್ರತಿಭಟನೆಯ ಸಾಂವಿಧಾನಿಕ ಹಕ್ಕನ್ನು ಮೊಟಕುಗಿಳಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ಪ್ರತಿಭಟನೆ ಇಂದು ಸಂಜೆ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ ಅವರು ಮಾತನಾಡಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹೆರ್ಗ ದಿನಕರ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರುಗಳಾದ ಪೆರ್ನಾಂಕಿಲ ಶ್ರೀಶ ನಾಯಕ್, ಪ್ರಕಾಶ್ ಶೆಟ್ಟಿ ಪಾದಬೆಟ್ಟು, ಜಿಲ್ಲಾ ವಕ್ತಾರೆ ಗೀತಾಂಜಲಿ ಸುವರ್ಣ, ಜಿಲ್ಲಾ ಕಾರ್ಯದರ್ಶಿ ನಳಿನೀ ಪ್ರದೀಪ್, ಜಿಲ್ಲಾ ಒಬಿಸಿ ಮೋರ್ಚಾದ ಅಧ್ಯಕ್ಷರಾದ ವಿಜಯ್ ಕೊಡವೂರು, ಮಟ್ಟಾರು ರತ್ನಾಕರ ಹೆಗ್ಡೆ, ತಿಂಗಳೇ ವಿಕ್ರಮಾರ್ಜುನ ಹೆಗ್ಡೆ,ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ವಿಖ್ಯಾತ ಶೆಟ್ಟಿ, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಪ್ರಥ್ವಿರಾಜ್ ಬಿಲ್ಲಾಡಿ ಜಿಲ್ಲಾ ಮಾದ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಗಳಾದ ಶಿವಕುಮಾರ, ಸತ್ಯಾನಂದ ನಾಯಕ, ವೀಣಾ ಶೆಟ್ಟಿ, ಸಹಿತ ಹಲವು ನಾಯಕರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಮಂಗಳೂರು : ನಾಲ್ಕು ಸಾವಿರ ಕೋಟಿಯ ಮೂಡ ಹಗರಣ ಖಂಡಿಸಿ ಮೈಸೂರಿನಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್.ಅಶೋಕ್ ಸಹಿತ ಹಲವು ನಾಯಕರನ್ನು ಬೆಂಗಳೂರಿನಲ್ಲಿಯೇ ಬಂಧಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ದ.ಕ ಜಿಲ್ಲಾ ಬಿಜೆಪಿ ಕಚೇರಿ ಬಳಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ಅವರು, ರಣಹೇಡಿ ಭ್ರಷ್ಟ ಕಾಂಗ್ರೆಸ್ ಸರ್ಕಾರ ವಿಪಕ್ಷಗಳ ಪ್ರತಿಭಟನಾ ಸ್ವಾತಂತ್ರ್ಯವನ್ನು ಹತ್ತಿಕ್ಕಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸರ್ವಾಧಿಕಾರ ಧೋರಣೆಯ ಮೂಲಕ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ ನಿರ್ಮಾಣವಾಗಿದೆ. ಸಿದ್ದರಾಮಯ್ಯನವರು ಬಿಜೆಪಿಯ ಪ್ರತಿಭಟನೆಯನ್ನು ಹತ್ತಿಕ್ಕಬಹುದು ಆದರೆ ಹಗರಣದಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಕೈಯಲ್ಲಿ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ಬಾಯಲ್ಲಿ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆ, ಅಭಿವ್ಯಕ್ತಿ ಸ್ವಾತಂತ್ರ್ಯವೆನ್ನುತ್ತಾ ತಿರುಗಾಡುವ ರಾಹುಲ್ ಗಾಂಧಿ ಈಗೆಲ್ಲಿದ್ದಾರೆ? ಸಿದ್ದರಾಮಯ್ಯನವರಿಗೆ ತಪ್ಪು ಮಾಡಿದ್ದರಿಂದಲೇ ಭಯ ಕಾಡುತ್ತಿದೆ. ಈ ಕೂಡಲೇ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕ ಹರೀಶ್ ಪೂಂಜ, ಮಾಜಿ ಶಾಸಕ ಕ್ಯಾ.ಗಣೇಶ್ ಕಾರ್ಣಿಕ್, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ನಂದನ್ ಮಲ್ಯ ಸಹಿತ ಅನೇಕರು ಉಪಸ್ಥಿತರಿದ್ದರು.
Maax News covers major news and events of Udupi district. This channel provides detailed reports on the political, social, economic, and cultural life of Udupi district.
Maax News, equipped with the most sophisticated studio in Udupi, assures people comprehensive news coverage.