Coastal Karnataka

ಶಾಸಕ ಸುನೀಲ್ ಕುಮಾರ್ ಅವರಿಂದ ಹಿಂದೂ‌ ಭಾವನೆಗಳಿಗೆ ದಕ್ಕೆ: ಎಸ್ಐಟಿ ತನಿಖೆಗೆ ಒತ್ತಾಯಿಸಿ ಸಿಎಂಗೆ ಮನವಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟೀಕೆ

ಬೆಂಗಳೂರು : ನಕಲಿ ಪರಶುರಾಮ ಮೂರ್ತಿ ಸ್ಥಾಪಿಸುವ ಮೂಲಕ ಕಾರ್ಕಳ ಕ್ಷೇತ್ರದ ಶಾಸಕ ಸುನೀಲ್ ಕುಮಾರ್‌ ಹಿಂದೂಗಳ ಭಾವನೆಗೆ ದಕ್ಕೆ ಉಂಟು ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ…

Read more

1 ಎಕ್ರೆಗಿಂತ ಕಡಿಮೆ ಪ್ರದೇಶದ ಏಕವಿನ್ಯಾಸ ಅನುಮೋದನೆ ನೂತನ ಆದೇಶ ರದ್ದುಮಾಡಿ : ಸಚಿವರಿಗೆ ಕರಾವಳಿ ಶಾಸಕರ ಮನವಿ

ಬೆಂಗಳೂರು : ಸ್ಥಳೀಯ ಯೋಜನೆ ಪ್ರದೇಶದ ಹೊರಭಾಗದಲ್ಲಿರುವ ಒಂದು ಎಕರೆಗಿಂತ ಕಡಿಮೆ ಪ್ರದೇಶ ಮತ್ತು ಏಕ ನಿವೇಶನ ವಸತಿ ಹಾಗೂ ವಸತಿಯೇತರರಿಗೆ ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ಸಂಬಂಧಿಸಿದ ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್‌ನಲ್ಲಿಯೇ ಈ ಹಿಂದಿನಂತೆ ಪಡೆಯಲು…

Read more

ಬ್ರಹ್ಮಾವರ ಕೃಷಿ ಡಿಪ್ಲೋಮ ಜೊತೆಗೆ ಕೃಷಿ ಕಾಲೇಜು ಆರಂಭಿಸಲಿ : ಯಶ್‌ಪಾಲ್ ಸುವರ್ಣ ಆಗ್ರಹ

ಉಡುಪಿ : ಬ್ರಹ್ಮಾವರ ಕೃಷಿ ಕೇಂದ್ರದಲ್ಲಿ ಸ್ಥಳೀಯ ಜನತೆಯ ಒಕ್ಕೊರಲ ಬೇಡಿಕೆಯಾಗಿದ್ದ ಕೃಷಿ ಮಹಾವಿದ್ಯಾಲಯ ಆರಂಭಿಸುವ ಮನವಿಯನ್ನು ಪರಿಗಣಿಸದೆ ರಾಜ್ಯ ಸರ್ಕಾರ ಡಿಪ್ಲೋಮ ಪದವಿಯನ್ನು ಪುನರಾರಂಭಿಸಲು ಆದೇಶ ನೀಡಿದ್ದು, ಸರಕಾರ ಈ ನಿರ್ಧಾರವನ್ನು ಪುನರ್ ಪರಿಶೀಲಿಸಿ ಮುಂದಿನ ಶೈಕ್ಷಣಿಕ ವರ್ಷದಿಂದ ಕೃಷಿ…

Read more

ಉಡುಪಿ ಜಿಲ್ಲೆಯಾದ್ಯಂತ ನಿನ್ನೆಯಿಂದ ಭಾರೀ ಮಳೆ

ಉಡುಪಿ : ಜಿಲ್ಲೆಯಾದ್ಯಂತ ನಿನ್ನೆಯಿಂದ ಭಾರೀ ಮಳೆಯಾಗುತ್ತಿದ್ದು ಕರಾವಳಿ ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರ ರೆಡ್ ಅಲರ್ಟ್‌ ಘೋಷಣೆ ಮಾಡಿದೆ. ನಿನ್ನೆಯಿಂದ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು ಇಂದು ಕೂಡ ಮುಂದುವರೆದಿದೆ.…

Read more

ಮತಾಂಧ ಶಕ್ತಿಗಳ ಓಲೈಕೆಗಾಗಿ ಶಾಸಕ ಭರತ್ ಶೆಟ್ಟಿ ವಿರುದ್ಧ ಕೇಸ್ ದಾಖಲಿಸಿದ ಕಾಂಗ್ರೆಸ್ ಸರಕಾರ : ಯಶ್‌ಪಾಲ್ ಸುವರ್ಣ

ಉಡುಪಿ : ಲೋಕಸಭೆಯಲ್ಲಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ರಾಹುಲ್ ಗಾಂಧಿ ಹೇಳಿಕೆಯನ್ನು ಪ್ರತಿಭಟನೆಯಲ್ಲಿ ಖಂಡಿಸಿದ ಮಂಗಳೂರು ಉತ್ತರ ಶಾಸಕರಾದ ಭರತ್ ಶೆಟ್ಟಿ ವಿರುದ್ಧ ಕೇಸ್ ದಾಖಲಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಕ್ರೋಶ…

Read more

ಕಾಪು ಮಾರಿಗುಡಿಗೆ ಕ್ರಿಕೆಟರ್ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ, ಭವ್ಯ ಸ್ವಾಗತ

ಕಾಪು : ಉಡುಪಿ ಜಿಲ್ಲೆಯ ಕಾಪುವಿನಲ್ಲಿರುವ ಹೊಸ ಮಾರಿಗುಡಿಗೆ ಇಂದು ಕ್ರಿಕೆಟರ್ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ ನೀಡಿದರು. ಪತ್ನಿ ದೇವಿಶಾ ಶೆಟ್ಟಿ ಜೊತೆ ಆಗಮಿಸಿದ ಸೂರ್ಯಕುಮಾರ್ ಯಾದವ್‌ಗೆ ಮಾರಿಗುಡಿ ವತಿಯಿಂದ ಭವ್ಯ ಸ್ವಾಗತ ಕೋರಲಾಯಿತು. ಇತ್ತೀಚೆಗಷ್ಟೆ ಮುಗಿದ ವರ್ಲ್ಡ್ ಕಪ್…

Read more

ಮಳೆಗಾಲ ಮುಗಿಯುವವರೆಗೆ ಜಿಲ್ಲೆಯಲ್ಲಿ ಟ್ರಕಿಂಗ್ ನಿಷೇಧ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ದಕ್ಷಿಣ ಕನ್ನಡ : ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಅದರಲ್ಲೂ ಕರಾವಳಿ ಭಾಗದಲ್ಲಿ ಮಳೆರಾಯ ಅವಾಂತರಗಳನ್ನು ಸೃಷ್ಟಿಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಮಳೆಗಾಲ ಮುಗಿಯುವವರೆಗೆ ಜಿಲ್ಲೆಯಲ್ಲಿ ಟ್ರೆಕ್ಕಿಂಗ್ ನಿಷೇಧಿಸಿ ಮತ್ತು ಜಿಲ್ಲೆಯ ಜಲ ಪ್ರದೇಶಗಳಲ್ಲೂ ಅನಧಿಕೃತ…

Read more

ಮರವಂತೆ ಕಡಲಲ್ಲಿ ಮೋಜು ಮಸ್ತಿ; ಅಪಾಯ ಆಹ್ವಾನಿಸುತ್ತಿರುವ ಪ್ರವಾಸಿಗರು!

ಮರವಂತೆ : ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಸತತ ಮಳೆಗೆ ಮರವಂತೆ ಕಡಲು ಪ್ರಕ್ಷುಬ್ಧಗೊಂಡಿದ್ದು ಕಡಲ ಕೊರೆತವೂ ಕಾಣಿಸಿಕೊಂಡಿದೆ. ಮರವಂತೆ ಬೀಚ್ ವಿಶ್ವಪ್ರಸಿದ್ಧಿಯನ್ನು ಹೊಂದಿದ್ದು ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗುವ ಜನರು ಇದರ ಸೌಂದರ್ವವನ್ನು ಆಸ್ವಾದಿಸದೇ ಮುಂದಕ್ಕೆ ಸಾಗುವುದಿಲ್ಲ.…

Read more

ರಿವರ್‌ಫ್ರಂಟ್ ಯೋಜನೆ ತಡೆಗೋಡೆ ಕುಸಿತ – ಸಮಗ್ರ ತನಿಖೆಗೆ ದಿನೇಶ್ ಗುಂಡೂರಾವ್ ಆದೇಶ

ಮಂಗಳೂರು : ಸ್ಮಾರ್ಟ್‌ಸಿಟಿ ರಿವರ್‌ಫ್ರಂಟ್ ಯೋಜನೆಯ ತಡೆಗೋಡೆ ಕುಸಿತದ ಬಗ್ಗೆ ಡಿಸಿ ನೇತೃತ್ವದಲ್ಲಿ ಸಮಗ್ರ ತನಿಖೆಯಾಗಿ, ವಾರದೊಳಗೆ ವರದಿ ಸಲ್ಲಿಸಬೇಕೆಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗುಂಡೂರಾವ್ ಸೂಚನೆ ನೀಡಿದರು. ದ.ಕ.ಜಿಪಂ ನೇತ್ರಾವತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ…

Read more

ಗಾಳಿಮಳೆಗೆ ಹಲವು ಮನೆಗಳಿಗೆ ಹಾನಿ, ಲಕ್ಷಾಂತರ ರೂ.ನಷ್ಟ; ಗ್ರಾಮೀಣ ಭಾಗದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ

ಉಡುಪಿ : ಒಂದು ವಾರದ ಮಳೆ ಉಡುಪಿಯಲ್ಲಿ ಭಾರೀ ಹಾನಿಯನ್ನುಂಟು ಮಾಡಿದೆ. ಮುಖ್ಯವಾಗಿ ಎರಡು ದಿನಗಳ ಗಾಳಿಮಳೆಗೆ ಮರಗಳು, ವಿದ್ಯುತ್ ಕಂಬಗಳು ನೆಲಕ್ಕುರುಳಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇಂದು ಬಂದ ಭಾರೀ ಗಾಳಿ ಮಳೆಗೆ ಉಡುಪಿ ತಾಲೂಕಿನ ಕರ್ಜೆ ಗ್ರಾಮದ ಕುರ್ಪಾಡಿ…

Read more