ಮಂಗಳೂರು: ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾ ಕೊನಲೆ ನಿವಾಸಿ ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿಗಳ ಪುತ್ರಿಯ ಮೇಲೆ ದಾರಂದ ಬಿದ್ದ ಪರಿಣಾಮ ಸಾವನ್ನಪ್ಪಿದ ಘಟನೆ ನಡೆದಿದೆ.

ಇವರ ನಾಲ್ಕು ಹೆಣ್ಣು ಮಕ್ಕಳಲ್ಲಿ 3ನೇ ಮಗು ಕೇರ್ಯಾ ಸರಕಾರಿ ಶಾಲೆಯ 1ನೇ ತರಗತಿಯ ಹಾಗೂ ಕೇರ್ಯಾ ಸಂಶುಲ್ ಹುದಾ ಜುಮಾ ಅರಬೀಕ್ ಮದರಸದಲ್ಲಿ 1ನೇ ತರಗತಿ ವಿದ್ಯಾರ್ಥಿನಿ ಅಲ್ಫಿಯಾ (6 ವರ್ಷ) ಅಸುನಿಗಿದ್ದಾಳೆ.
ಮಗುವಿನ ತಂದೆ ಕುಂಡಡ್ಕದಲ್ಲಿ ನೂತನ ಮನೆಯನ್ನು ನಿರ್ಮಾಣ ಮಾಡುತ್ತಿದ್ದಾರೆ. ಮನೆಯ ಮುಖ್ಯ ದ್ವಾರಕ್ಕೆ ದಾರಂದ ಜೋಡಿಸುವ ಕೆಲಸವನ್ನು ಮಾಡುವುದ್ದಕ್ಕಾಗಿ ಮನೆಯ ಪಕ್ಕದಲ್ಲಿ ದಾರಂದವನ್ನು ಜೋಡಣೆ ಮಾಡಿದ್ದರು. ಈ ಸಂದರ್ಭದಲ್ಲಿ ಮಗು ಅದರ ಪಕ್ಕದಲ್ಲಿ ಆಟವಾಡುತ್ತಿರುವಾಗ ದಾರಂದವು ಆಯಾ ತಪ್ಪಿ ಮಗುವಿನ ತಲೆಗೆ ಬಿದ್ದು ಗಂಭೀರ ಗಾಯಗೊಂಡಿತ್ತು. ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮಗು ಅಸುನೀಗಿರುವುದಾಗಿ ತಿಳಿದು ಬಂದಿದೆ. ಕೇರ್ಯ ಮಸೀದಿಯಲ್ಲಿ ದಫನ ಅಂತ್ಯ ಸಂಸ್ಕಾರ ನಡೆಯಿತು. ಜಮಾತ್ ಅಧ್ಯಕ್ಷರ ರಶೀದ್ ಕುಂಡಡ್ಕ ಮತ್ತು ಜಮಾತ್ ಶಿಕ್ಷಕರು ಉಪಸ್ಥಿತರಿದ್ದರು.
