ಕುಂದಾಪುರ : ಕುಂದಾಪುರ ನಗರದ ಸಂಗಮ್ ಬಳಿಯ ನಿವಾಸಿ, ಕಾಂಗ್ರೆಸ್ ಹಿರಿಯ ಮುಖಂಡ ಜಾಕೋಬ್ ಡಿಸೋಜ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕುಂದಾಪುರ ನಗರದ ಪುರಸಭಾ ಸದಸ್ಯರಾಗಿ, ಉಪಾಧ್ಯಕ್ಷರಾಗಿ ಹಾಗೂ ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು, ಕಾಂಗ್ರೆಸ್ ಮುಖಂಡ ದಿ. ಆಸ್ಕರ್ ಫೆರ್ನಾಂಡೀಸ್ರವರ ಆಪ್ತರಾಗಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿ ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
