ಉಡುಪಿ : ರಾಜ್ಯದ ಹಲವೆಡೆ ಎಟಿಎಂ, ಬ್ಯಾಂಕ್ ದರೋಡೆ ಮಧ್ಯೆಯೇ ಉಡುಪಿಯಲ್ಲೂ ಎಟಿಎಂ ದರೋಡೆಗೆ ವಿಫಲ ಯತ್ನ ನಡೆದಿದೆ. ಕಾಪು ಠಾಣೆ ವ್ಯಾಪ್ತಿಯಲ್ಲಿರುವ ಉದ್ಯಾವರದ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದೆ.

ಮೂವರು ಮುಸುಕುಧಾರಿಗಳುಕಳೆದ ತಡರಾತ್ರಿ 2 ಗಂಟೆಗೆ ಎಟಿಎಂ ಬಾಕ್ಸ್ ಒಡೆಯಲು ಯತ್ನಿಸಿದ್ದಾರೆ. ಈ ವೇಳೆ ಮಷೀನ್ ಒಳಗಿನಿಂದ ಸೈರನ್ ಮೊಳಗಿದ್ದು, ದರೋಡೆಕೋರರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಇದೀಗ ಸ್ಥಳಕ್ಕೆ ಬೆರಳಚ್ಚು ತಜ್ಞರು, ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಆರೋಪಿಗಳ ಪತ್ತೆಗೆ ಮುಂದಾಗಿರುವ ಪೊಲೀಸರು ಸುತ್ತಮುತ್ತಲ ಪೊಲೀಸ್ ಠಾಣೆ ವ್ಯಾಪ್ತಿಗಳಿಗೆ ಸಂದೇಶ ರವಾನೆ ಮಾಡಿದ್ದಾರೆ.