Sushanth Brahmavar A top-graduate from Poorna Prajna Evening college and Vice-President of Bharthiya Janatha Party OBC Morcha Udupi City of RSS Background Who has brought international Fame Award for completing Entire Bhagvadgits”s Verses in 5.30 hours has been nominated for one more National Fame Award of India Books of Awards, which has brought great privilage to the party in the city but the intresting part does not end here he has also taken the steps for getting the farmers ahead by giving great innovative margin profits to the farmers of the state promoting Indian Produce.Mr.Sushanth’s work has not only empowered local farmers but also set new benchmarks in sustainable agri-business.His entrepreneurial spirit and passion for excellence make him a true inspiration in many fields. Let us all applause his dedication and extend our heartfelt appreciation for his contribution to the nations’ economic and agricultural growth.
Dakshina Kannada
ಧರ್ಮಸ್ಥಳ : ಆಂಧ್ರಪ್ರದೇಶದಿಂದ ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆಂದು ಬಂದವರ ಚಿನ್ನಾಭರಣ ಕಳವಾಗಿದ್ದು ಇದೀಗ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರಾದ ಆಂದ್ರಪ್ರದೇಶದ ನೆಲ್ಲೂರು ಜಿಲ್ಲೆಯ ಸಾಯಿ ಹೃದಯ ಟೆಂಪಲ್ ಗೋಮತಿ ನಗರದಲ್ಲಿನ ಶ್ರೀ ನಗರ ಕಾಲೋನಿಯ ನಿವಾಸಿ ಜೆ ಲತಾ (47) ಎಂಬವರು ಅಂದ್ರಪ್ರದೇಶದ ನೆಲ್ಲೂರಿನಿಂದ ಒಂದು ಬಾಡಿಗೆ ಇನ್ನೋವಾ ಕಾರಿನಲ್ಲಿ ಹೊರಟು ದಿನಾಂಕ 03-05-2025 ರಂದು ಸಂಜೆ 05-00 ಘಂಟೆಗೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳಕ್ಕೆ ತಲುಪಿರುತ್ತಾರೆ.
ದೇವರ ದರ್ಶನಕ್ಕೆ ಹೋಗುವ ಮೊದಲು ಕಾರ್ಯಕ್ರಮಕ್ಕೆಂದು ಜೊತೆಯಲ್ಲಿ ತಂದಿದ್ದ ಚಿನ್ನಭರಣಗಳಾದ ಬ್ರಾಸ್ಲೆಟ್, ಚಿನ್ನದ ಚೈನ್, ನೆಕ್ಲೇಸ್ನ್ನು ವ್ಯಾನಿಟಿ ಬ್ಯಾಗ್ನ ಒಳಗಡೆ ಪ್ಲಾಸ್ಟಿಕ್ ಡಬ್ಬದಲ್ಲಿ ಹಾಕಿ ಬ್ಯಾಗ್ನಲ್ಲಿ ಇಟ್ಟುಕೊಂಡಿದ್ದರು. ದೇವರ ದರ್ಶನವನ್ನು ಮುಗಿಸಿ ಹೊರಡುವ ಸಮಯದಲ್ಲಿ ಬ್ಯಾಗನ್ನು ನೋಡಿದಾಗ ವ್ಯಾನಿಟಿ ಬ್ಯಾಗ್ ತೆರೆದಿತ್ತು. ಬ್ಯಾಗ್ನ ಒಳಗಡೆ ನೋಡಿದಾಗ ಪ್ಲಾಸ್ಟಿಕ್ ಬಾಕ್ಸ್ನಲ್ಲಿ ಇಟ್ಟಿದ್ದ 97 ಗ್ರಾಮ್ ತೂಕದ ಚಿನ್ನಾಭರಣಗಳು ಕಳವಾಗಿದ್ದು, ಒಟ್ಟು ಮೌಲ್ಯ ರೂ 6,79,000/- ಆಗಿರುತ್ತದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಮೇ 15ರಿಂದ 17ರವರೆಗೆ ಸುಕ್ಷೇತ್ರ ಗುರುಪುರ ಶ್ರೀಗುರುಮಹಾಕಾಲೇಶ್ವರ ದೇವರ ಪ್ರತಿಷ್ಠಾ ಬ್ರಹ್ಮಕಲಶ ಸಂಭ್ರಮ
ಉಡುಪಿ : ದಕ್ಷಿಣ ಭಾರತದಲ್ಲಿಯೇ ಪ್ರಪ್ರಥಮವಾಗಿ ಸುಕ್ಷೇತ್ರ ಗುರುಪುರ ಪಲ್ಗುಣಿ ನದಿ ತಟದ ಗೋಳಿದಡಿಗುತ್ತುನಲ್ಲಿ ನಿರ್ಮಾಣಗೊಂಡಿರುವ ಶ್ರೀಗುರುಮಹಾಕಾಲೇಶ್ವರ ದೇವರ ಬೃಹತ್ ಏಕಶಿಲಾ ಮೂರ್ತಿಯ ಪ್ರತಿಷ್ಠಾ ಬ್ರಹ್ಮಕಲಶ ಸಂಭ್ರಮ ಮೇ. 15ರಿಂದ 17 ರವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶ ಸಂಭ್ರಮ ಸಮಿತಿಯ ಅಧ್ಯಕ್ಷ, ಮಾಜಿ ಸಂಸದ ಕುಂಜಾಡಿ ಬೀಡು ನಳಿನ್ ಕುಮಾರ್ ಕಟೀಲು ತಿಳಿಸಿದರು.
ಈ ಬಗ್ಗೆ ಸೋಮವಾರ ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ವೇದ ಕೃಷಿಕ ಬ್ರಹ್ಮಋಷಿ ಕೆ.ಎಸ್. ನಿತ್ಯಾನಂದ ಗುರುಗಳ ಮಾರ್ಗದರ್ಶನದಲ್ಲಿ ಗುರುಮಹಾಕಾಲೇಶ್ವರ ದೇವರ ಬೃಹತ್ ಏಕಶಿಲಾ ಮೂರ್ತಿಯ ಪತ್ರಿಷ್ಠಾ ಬ್ರಹ್ಮಕಲಶ ನೆರವೇರಲಿದೆ. ಮೇ 16 ರಂದು ಸಂಜೆ ನಡೆಯಲಿರುವ ಪಂಚಕಲ್ಯಾಣಯುಕ್ತ ಬ್ರಹ್ಮಕಲಶಾಭೀಷೇಕ ಕಾರ್ಯದಲ್ಲಿ ಜಾತಿ, ಪಂಗಡ, ಲಿಂಗಭೇದ ಇಲ್ಲದೇ ಭಾಗವಹಿಸಬಹುದಾಗಿದೆ. ದೇವರ ಬೃಹತ್ ಏಕಶಿಲಾ ಮೂರ್ತಿಗೆ ಪಂಚಕಲ್ಯಾಣ ಸ್ವರೂಪದ ಕಲಶಾಭೀಷೇಕವನ್ನು ಸಮರ್ಪಿಸಬಹುದಾಗಿದೆ ಎಂದರು.
ಮೇ 17 ರಂದು ಸಂಜೆ 6 ಗಂಟೆಗೆ ಶಿವಾನುಭವ ಮಂಟಪದಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ವೇದ ಕೃಷಿಕ ಬ್ರಹ್ಮಋಷಿ ಕೆ.ಎಸ್. ನಿತ್ಯಾನಂದ ಸಾನಿಧ್ಯ ವಹಿಸಲಿದ್ದಾರೆ. ಸಮಿತಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಪಾವಂಜೆ ಕ್ಷೇತ್ರದ ಯಾಜಿ ನಿರಂಜನ್ ಭಟ್ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಗೋಳಿದಡಿ ಗುತ್ತಿನ ಗಡಿಕಾರ ವರ್ಧಮಾನ ದುರ್ಗಾಪ್ರಸಾದ್ ಶೆಟ್ಟಿ, ಅಂತರಾಷ್ಟ್ರೀಯ ಕ್ರೀಡಾಪಟು, ಚಲನಚಿತ್ರ ನಟ, ಸ್ವಾಗತ ಸಮಿತಿ ಅಧ್ಯಕ್ಷ ರೋಹಿತ್ ಕುಮಾರ್ ಕಟೀಲ್, ಪ್ರಮುಖರಾದ ಚಂದ್ರಹಾಸ್ ಆಮೀನ್, ಸುಜಾತ ಸದಾಶಿವ, ದಿವಾಕರ್ ಉಪಸ್ಥಿತರಿದ್ದರು.
ಉಡುಪಿ : ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿ ನೀಡಿದರು. ಶಾಸಕರಾದ ರಾಜೇಶ್ ನಾಯ್ಕ್ರವರೊಂದಿಗೆ ಭೇಟಿ ನೀಡಿದ ಸಂಸದ ಕೋಟ, ಸುಹಾಸ್ ಶೆಟ್ಟಿ ಅವರ ತಂದೆ ತಾಯಿ ಮತ್ತು ಅವರ ಸಹೋದರರನ್ನು ಭೇಟಿಯಾದರು.
ಈ ಸಂದರ್ಭದಲ್ಲಿ ಅವರ ತಾಯಿ ಕೋಟ ಶ್ರೀನಿವಾಸ ಪೂಜಾರಿಯವರ ಬಳಿ ಸರ್ಕಾರವು ತನ್ನ ಮಗನನ್ನು ನಡೆಸಿಕೊಂಡ ರೀತಿಯ ಬಗ್ಗೆ ಬೇಸರ ತೋಡಿಕೊಂಡರು. ಸುಮಾರು 20 ದಿನಗಳಿಂದ ಸುಭಾಸ್ ಶೆಟ್ಟಿಯನ್ನು ಪದೇ ಪದೇ ಪರಿಶೀಲಿಸಿ ಆತನ ಕಾರು ತಪಾಸಣೆ ಮಾಡಿ ಆತನನ್ನು ನಿಶಸ್ತ್ರಗೊಳಿಸುವಂತೆ ಮಾಡಿದ್ದರು. ಯಾವುದೇ ಶಸ್ತ್ರಾಸ್ತ್ರವನ್ನು ಇಟ್ಟುಕೊಳ್ಳದ ಹಾಗೆ ಪ್ರಯಾಣಿಸುವ ಬಗ್ಗೆ ಸರ್ಕಾರವು ತನ್ನ ಮಗನನ್ನು ಕೊಲ್ಲಲು ಪರೋಕ್ಷವಾಗಿ ಸಹಕರಿಸಿದೆ. ಠಾಣೆಗೆ ಕರೆಸಿ ಯಾವುದೇ ಕಾರಣಕ್ಕೂ ಯಾವುದೇ ಶಸ್ತ್ರಾಸ್ತ್ರವನ್ನು ಇಟ್ಟುಕೊಂಡರೆ ಜೈಲಿಗೆ ಅಟ್ಟುತ್ತೇವೆ ಎಂಬ ಬೆದರಿಕೆಯನ್ನು ಪೊಲೀಸರ ಮೂಲಕ ಸರ್ಕಾರವು ಹಾಕಿತ್ತು. ಹೀಗಾಗಿ ಆತನನ್ನು ಕೊಲೆ ಮಾಡಲು ಹಂತಕರಿಗೆ ಸುಲಭವಾಯಿತು. ಕನಿಷ್ಠ ಉಸ್ತುವಾರಿ ಸಚಿವರು ಮತ್ತು ಗೃಹ ಸಚಿವರು ಮಂಗಳೂರಿಗೆ ಬಂದಿದ್ದರೂ ಮನೆಗೆ ಬಾರದೆ ಒಂದು ಸಾಂತ್ವನ ಹೇಳುವ ಕನಿಷ್ಠ ಕೆಲಸವನ್ನು ಮಾಡಲಿಲ್ಲ. ಅದರ ಬದಲು ಮುಸ್ಲಿಂ ಮುಖಂಡರು ಹೇಳಿದಂತೆ ಸರ್ಕಾರ ಕುಣಿಯುತ್ತಿದೆ ಎಂದು ಸುಹಾಸ್ ಕುಟುಂಬಸ್ಥರು ಬೇಸರ ತೋಡಿಕೊಂಡರು.
ಎಲ್ಲಾ ಹೇಳಿಕೆಗಳನ್ನು ಗಮನಿಸಿದ ಸಂಸದರು ನಿಶ್ಚಯವಾಗಿ ಈ ಪ್ರಕರಣವನ್ನು ಎನ್ಐಎಗೆ ಒಳಪಡಿಸುವಂತೆ ಒತ್ತಾಯಿಸಲಾಗುವುದು ಎಂದು ಭರವಸೆ ನೀಡಿದರು.
ಎಸ್ಎಸ್ಎಲ್ಸಿ ಫಲಿತಾಂಶ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಅಗ್ರಸ್ಥಾನ : ಯಶ್ಪಾಲ್ ಸುವರ್ಣ ಅಭಿನಂದನೆ
ಉಡುಪಿ : ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಶೇ. 91.12, ಉಡುಪಿ ಜಿಲ್ಲೆ ಶೇ. 89.96 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ರಾಜ್ಯಕ್ಕೆ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆಯುವ ಮೂಲಕ ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಇಲಾಖೆಗೆ ಉಡುಪಿ ಶಾಸಕ ಶ್ರೀ ಯಶ್ಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಜಿಲ್ಲೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆಯುವ ಮೂಲಕ ಕರಾವಳಿ ಜಿಲ್ಲೆಯ ಶಿಕ್ಷಣದ ಗುಣಮಟ್ಟವನ್ನು ಮತ್ತೊಮ್ಮೆ ರಾಜ್ಯ ಮಟ್ಟದಲ್ಲಿ ಸಾಬೀತು ಮಾಡಿದೆ.
ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ, ಶಿಕ್ಷಕ ವೃಂದ, ಶಾಲಾಡಳಿತ ಮಂಡಳಿ, ಪೋಷಕರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಉಡುಪಿ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲ್ಲೂಕುಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲ್ಲೂಕುಗಳಲ್ಲಿ ಶುಕ್ರವಾರದಿಂದ ಶನಿವಾರ ಬೆಳಿಗ್ಗೆ 6 ಗಂಟೆಯವರೆಗೆ ಶೇಂದಿ ಅಂಗಡಿ ಮತ್ತು ಎಲ್ಲ ಮದ್ಯದಂಗಡಿಗಳನ್ನು ಮುಚ್ಚಲು, ಎಲ್ಲ ವಿಧದ ಅಮಲು ಪದಾರ್ಥಗಳ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ನಗರ ಪೊಲೀಸ್ ಕಮಿಷನರೇಟ್ನ ಬಜಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸುಹಾಸ್ ಶೆಟ್ಟಿ ಎಂಬುವವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದು, ಮೃತ ವ್ಯಕ್ತಿಯು ಬಂಟ್ವಾಳ ತಾಲ್ಲೂಕಿನ ಪುಂಜಾಲಕಟ್ಟೆ ವ್ಯಾಪ್ತಿಯವರು. ಜಿಲ್ಲೆಯಲ್ಲಿ ಪರಿಸ್ಥಿತಿಯು ಬೂದಿ ಮುಚ್ಚಿದ ಕೆಂಡದಂತಿರುವ ಕಾರಣ, ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇರುತ್ತದೆ.
ಈ ಕಾರಣಕ್ಕೆ ಮೇ 2ರಿಂದ ಮೇ 3ರ ಬೆಳಿಗ್ಗೆ 6 ಗಂಟೆವರೆಗೆ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲ್ಲೂಕುಗಳಲ್ಲಿ ಮದ್ಯದಂಗಡಿ ಮುಚ್ಚಲು ಸೂಚಿಸಲಾಗಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.
ಉಡುಪಿ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ ಪ್ರಸಕ್ತ (2024-25ನೇ) ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದರೆ, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ ಗಳಿಸಿದೆ. ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನ ಗಳಿಸಿದೆ. ಕಲಬುರಗಿ ಜಿಲ್ಲೆ ಕೊನೆ ಸ್ಥಾನ ಗಳಿಸಿದೆ.
ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಎಸೆಸೆಲ್ಸಿ ಫಲಿತಾಂಶವನ್ನು ಪ್ರಕಟಿಸಿದರು. ದ.ಕ. ಜಿಲ್ಲೆ 91.12 ಶೇ. ಫಲಿತಾಂಶ ದಾಖಲಿಸಿದ್ದರೆ, ಉಡುಪಿ ಜಿಲ್ಲೆ 89.96 ಫಲಿತಾಂಶ ದಾಖಲಿಸಿದೆ. 42.43 ಶೇ. ಫಲಿತಾಂಶ ದಾಖಲಿಸಿರುವ ಕಲಬುರಗಿ ಜಿಲ್ಲೆ ರಾಜ್ಯಕ್ಕೆ ಕೊನೆಯ ಸ್ಥಾನಿಯಾಗಿದೆ.
ಈ ವರ್ಷ ಒಟ್ಟು ಶೇ. 66.14ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಉಡುಪಿಯ ಸ್ವಸ್ತಿ ಕಾಮತ್ ಸಹಿತ 22 ವಿದ್ಯಾರ್ಥಿಗಳು 625ರಲ್ಲಿ 625 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನಿಗಳಾಗಿದ್ದಾರೆ ಎಂದು ಶಿಕ್ಷಣ ಸಚಿವರು ತಿಳಿಸಿದರು.
ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಖಂಡಿಸಿ ದಕ್ಷಿಣ ಕನ್ನಡ ಬಂದ್ಗೆ ವಿಎಚ್ಪಿ ಕರೆ; ಖಾಸಗಿ ಬಸ್ಗಳ ಮೇಲೆ ಕಲ್ಲು ತೂರಾಟ; ಬಸ್ ಸಂಚಾರ ಸ್ಥಗಿತ
ಮಂಗಳೂರು : ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಶುಕ್ರವಾರ (ಮೇ-2), ದಕ್ಷಿಣ ಕನ್ನಡ ಬಂದ್ಗೆ ಕರೆ ನೀಡಿದೆ.

ಗುರುವಾರ ಮಂಗಳೂರಿನ ಬಜ್ಪೆ ಪರಿಸರದಲ್ಲಿ ನಡೆದ ಅಹಿತಕರ ಘಟನೆ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಿನಾಂಕ ಮೇ 5ರವರೆಗೆ ನಿಷೇದಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಸುಹಾಸ್ ಹತ್ಯೆ ಕೇಸ್ ಸಂಬಂಧಿಸಿ ಮೇ.2ರ ಶುಕ್ರವಾರ ನಗರದ ಯೂನಿವರ್ಸಿಟಿ ಕಾಲೇಜ್ ಬಳಿ ಖಾಸಗಿ ಬಸ್ಗಳ ಮೇಲೆ ಕಲ್ಲು ತೂರಾಟ ನಡೆದಿದೆ.
ನಗರದ ಖಾಸಗಿ ಬಸ್ಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದು, ಮೂರು ಬಸ್ಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.
ಇಂದು ಮುಂಜಾನೆ ಚಲಿಸುತ್ತಿದ್ದ ಬಸ್ಗೆ ದುಷ್ಕರ್ಮಿಗಳ ತಂಡ ಕಲ್ಲು ತೂರಿದ್ದು, ಈ ಹಿನ್ನೆಲೆ ನಗರದಲ್ಲಿ ಖಾಸಗಿ ಬಸ್ ಸಂಚಾರ ಸ್ಥಗಿತಗೊಂಡಿದೆ.
ಯಕ್ಷಗಾನ ಕಾರ್ಯಾಗಾರಗಳ ಮೂಲಕ ಅಕಾಡೆಮಿಯಿಂದ ಯಕ್ಷಗಾನಕ್ಕೆ ಶಕ್ತಿ ತುಂಬುವ ಕಾರ್ಯ : ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಅಭಿಪ್ರಾಯ
ಉಡುಪಿ : ಯಕ್ಷಗಾನ ಕಲೆ ಒಂದು ವಿಶ್ವವಿದ್ಯಾಲಯವಿದ್ದಂತೆ. ಈ ಕಲೆಯ ಆಳ, ವಿಸ್ತಾರ, ಸೊಬಗನ್ನು ಯಕ್ಷಾಸಕ್ತರಿಗೆ ಮುಟ್ಟಿಸಲು ವಿವಿಧ ಕಡೆಗಳಲ್ಲಿ ಯಕ್ಷಗಾನ ಕಾರ್ಯಾಗಾರಗಳನ್ನು ಅಕಾಡೆಮಿ ಹಮ್ಮಿಕೊಳ್ಳುವುದರ ಮೂಲಕ ಕಲೆಯ ಬೆಳೆವಣಿಗೆಗೆ ಪ್ರೋತ್ಸಾಹಿಸುತ್ತಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.
ಅವರು ಭಾನುವಾರ ಮಂಗಳೂರು ಉಲ್ಲಾಳದ ಮಂಜನಾಡಿ ಶ್ರೀ ವಿಷ್ಣುಮೂರ್ತಿ ಜನಾರ್ದನ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ವತಿಯಿಂದ ಹಮ್ಮಿಕೊಂಡ ‘ತೆಂಕುತಿಟ್ಟು ಯಕ್ಷಗಾನ ಮುಖವರ್ಣಿಕೆ ಮತ್ತು ವೇಷಭೂಷಣ ಕಟ್ಟುವ ಬಗ್ಗೆ ಕಾರ್ಯಾಗಾರ, ವಿಚಾರಗೋಷ್ಠಿ, ಮಹಿಳಾ ಯಕ್ಷಗಾನ ತಾಳಮದ್ದಲೆ ಹಾಗೂ ಯಕ್ಷಗಾನ ಪ್ರದರ್ಶನ ಕಾರ್ಯಗಾರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಖಕ್ಕೆ ಬಣ್ಣ ಹಚ್ಚಿ, ಕುಣಿದರಷ್ಟೇ ಯಕ್ಷಗಾನ ಕಲಿತಂತಾಗುವುದಿಲ್ಲ. ಇದರಲ್ಲಿರುವ ಪ್ರಕಾರಗಳು, ತಿಟ್ಟುಗಳು, ಮುಖವರ್ಣಿಕೆ, ವೇಷಭೂಷಣ, ಭಾಗವತಿಕೆ, ಹಿಮ್ಮೇಳ ಇತ್ಯಾದಿಗಳ ಬಗ್ಗೆ ಕಲಾವಿದರು ಅರಿವು ಹೊಂದಿದರೆ ಮಾತ್ರ, ಅವರು ಪ್ರಬುದ್ಧ ಕಲಾವಿದರಾಗಿ ಹೊರಹೊಮ್ಮಲು ಸಾಧ್ಯ. ಯಕ್ಷಗಾನ ಕೇವಲ ಮನೋರಂಜನೆ ಕಲೆ ಎನ್ನುವದಕ್ಕಿಂತಲೂ ಇದು ನಮ್ಮ ಬದುಕನ್ನು ಅರಳಿಸುವ, ಬದುಕಿನ ಸೌರಭ, ಸೌರಂಭವನ್ನು ಹೆಚ್ಚಿಸುವ ಕಲೆ ಎಂದೇ ಪರಿಗಣಿಸಬೇಕು ಎಂದು ಅವರು ಹೇಳಿದರು.
ರಾಜ್ಯ ಸರಕಾರ ಯಕ್ಷಗಾನ ಅಕಾಡೆಮಿಗೆ ಹೆಚ್ಚಿನ ಪ್ರೋತ್ಸಾಹ ಕೊಡುತ್ತಿದೆ. ಈ ಅನುದಾನ ಅರ್ಹ ಕಾರ್ಯಕ್ರಮಗಳಿಗೆ, ಕಲಾವಿದರ ಅಭ್ಯುದಯಕ್ಕೆ ವಿನಿಯೋಗವಾಗಬೇಕು ಎಂಬುದೇ ಅಧ್ಯಕ್ಷನಾದ ನನ್ನ ಹೆಬ್ಬಯಕೆ. ಹೀಗಾಗಿ ಯಕ್ಷಗಾನ ಕಾರ್ಯಾಗಾರಗಳಿಗೆ, ಮಕ್ಕಳ ಯಕ್ಷಗಾನ ಕಾರ್ಯಕ್ರಮಗಳಿಗೆ ಅಕಾಡೆಮಿ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ ಎಂದ ಅವರು ಇಂದು ಯಕ್ಷಗಾನದ ವರ್ತಮಾನದ ಸ್ಥಿತಿಗತಿ ಬಗ್ಗೆ ಎಲ್ಲೆಡೆ ಚರ್ಚೆ, ಚಿಂತನೆಗಳು ನಡೆಯುತ್ತಿರುವುದು ಸ್ವಾಗತಾರ್ಹ ಬೆಳವಣಿಗೆ. ಸಾಕಷ್ಟು ಸಂಖ್ಯೆಯಲ್ಲಿ ಮಹಳೆಯರು ಯಕ್ಷಗಾನ ಕಲಿಯಲು ಮುಂದಾಗುತ್ತಿರುವುದು ಸಂತೋಷ ತಂದಿದೆ. ನಮ್ಮಲ್ಲಿ ಮಹಿಳಾ ಯಕ್ಷಗಾನ ತಂಡಗಳು ಪ್ರಾರಂಭವಾಗಿರುವುದು ಇದಕ್ಕೆ ಉದಾಹರಣೆಯಾಗಿದೆ ಎಂದರು.
ಉಡುಪಿ ಜಿಲ್ಲೆಯಲ್ಲಿ ಯಕ್ಷಗಾನ ಕಲಾರಂಗದ ಮೂಲಕ ಯಕ್ಷ ಶಿಕ್ಷಣ ಟ್ರಸ್ಟ್ ಆರಂಭಿಸಿ ಇದೀಗ 90ಕ್ಕೂ ಅಧಿಕ ಪ್ರೌಢಶಾಲೆಗಳಲ್ಲಿ ಯಕ್ಷಗಾನವನ್ನು ಕಲಿಸಲಾಗುತ್ತಿದೆ. 3,000ಕ್ಕೂ ಅಧಿಕ ವಿದ್ಯಾರ್ಥಿಗಳು ಈ ಕಲೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಆಸಕ್ತಿಯ ವಿಚಾರವೆಂದರೆ ಹೆಣ್ಮಕ್ಕಳೇ ಬಹು ಸಂಖ್ಯೆಯಲ್ಲಿ ಯಕ್ಷಗಾನವನ್ನು ಕಲಿಯಲು ಮುಂದೆ ಬಂದಿದ್ದಾರೆ. ಅದರಲ್ಲೂ ಉತ್ತರ ಕನ್ನಡ, ಹಾವೇರಿ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳ ಮಕ್ಕಳು ಬಹು ಆಸಕ್ತಿಯಿಂದ ಕಲಿಯುತ್ತಿದ್ದಾರೆ. ಹೀಗಾಗಿ ಭವಿಷ್ಯದಲ್ಲಿ ಉತ್ತರ ಕರ್ನಾಟಕದಲ್ಲೂ ಯಕ್ಷಗಾನ ತಂಡಗಳು ಹುಟ್ಟಿದರೆ ಆಶ್ಚರ್ಯ ಪಡಬೇಕಾದ ಅಗತ್ಯವಿಲ್ಲ ಎಂದರು.
ಮಕ್ಕಳು ಯಕ್ಷಗಾನವನ್ನು ಕಲಿತರೆ ಅವರ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯಾಗಬಹುದು ಎಂಬ ಆತಂಕ ಹೆತ್ತವರಿಗೆ ಬೇಡ. ಯಕ್ಷ ಶಿಕ್ಷಣವನ್ನು ಪ್ರಾರಂಭಿಸಿದಾಗ ಇಂತಹುದೇ ಆತಂಕ ಎದುರಾಗಿತ್ತು. ಆದರೆ ಯಕ್ಷಗಾನಕ್ಕೆ ಸೇರಿದ ಮಕ್ಕಳು ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿರುವುದನ್ನು ಕಂಡಾಗ ಈ ಕಲೆ ಮಕ್ಕಳ ಶೈಕ್ಷಣಿಕ ಪ್ರಗತಿಗೂ ಪೂರಕವಾಗಿದೆ ಎಂಬುದು ದೃಢಪಟ್ಟಿದೆ. ಯಕ್ಷಗಾನ ಕಲಿತ ಮಕ್ಕಳು ಶುದ್ಧ ಕನ್ನಡವನ್ನು ನಿರರ್ಗಳವಾಗಿ ಮಾತನಾಡಬಲ್ಲರು. ವೇದಿಕೆ ಏರಿ ಎಲ್ಲರ ಮುಂದೆ ಉತ್ತಮ ಪ್ರದರ್ಶನವನ್ನು ನೀಡಬಲ್ಲರು. ಕುಣಿತದಿಂದ ಆರೋಗ್ಯವೂ ಉತ್ತಮಗೊಳ್ಳುತ್ತದೆ. ಒಟ್ಟಾರೆ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಈ ಕಲೆ ಅನುಕೂಲವಾಗಿದೆ ಎಂದು ಅವರು ಹೇಳಿದರು.
ಯಕ್ಷಗಾನ ಕಲಿತ ಮಕ್ಕಳು ಬಾಲ್ಯದಲ್ಲಿಯೇ ನೈತಿಕತೆಯನ್ನು ಬೆಳೆಸಿಕೊಳ್ಳುವುದರಿಂದ ತಂದೆ ತಾಯಿ, ಗುರುಹಿರಿಯರನ್ನು ನೋಡಿಕೊಳ್ಳುವುದು, ಗೌರವಿಸುವುದನ್ನು ಕಲಿಯುತ್ತಾರೆ. ಇದರಿಂದಾಗಿ ವೃದ್ಧಾಪ್ಯದಲ್ಲಿ ತಂದೆತಾಯಿ ಅನಾಥಾಶ್ರಮಗಳನ್ನು ಸೇರುವ ಪ್ರಸಂಗಗಳು ಬರಲಿಕ್ಕಿಲ್ಲ. ಆದ್ದರಿಂದ ಹೆತ್ತವರು ತಮ್ಮ ಮಕ್ಕಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಯಕ್ಷಗಾನ ಕಲಿಕೆಗೆ ಸೇರಿಸಬೇಕು. ಅಕಾಡೆಮಿಯ ಈ ಪ್ರಯತ್ನಕ್ಕೆ ಕಲಾವಿದರು, ಸಂಘಸoಸ್ಥೆಗಳು ಕೈ ಜೋಡಿಬೇಕು ಎಂದು ಅವರು ಮನವಿ ಮಾಡಿದರು.
ಮುಖ್ಯ ಅತಿಥಿ ನಿವೃತ್ತ ಮುಖ್ಯೋಪಾಧ್ಯಾಯ ರವೀಂದ್ರ ರೈ ಕಲ್ಲಿಮಾರು ಮಾತನಾಡಿ, ಜೀವನ ಪರಿಪೂರ್ಣವಾಗಬೇಕಾದರೆ ಸಂಗೀತ, ಸಾಹಿತ್ಯದಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮುಖ್ಯ, ಯಕ್ಷಗಾನ ಒಂದು ಶ್ರೇಷ್ಠ ಕಲೆ. ಮಾತುಗಾರಿಕೆ, ವೇಧಷಭೂಷಣ, ಹಾಡು, ನೃತ್ಯ ಎಲ್ಲವೂ ಇಲ್ಲಿದೆ. ಯಕ್ಷಗಾನದ ವಿಶೇಷತೆ ಎಂದರೆ ಅದನ್ನು ಎಷ್ಟು ಬಾರಿ ನೋಡಿದರೂ ಅದರ ಸೆಳೆತ ನಿಲ್ಲದು. ಈ ಕಲೆ ಕಲಾವಿದರನ್ನು ದಾರಿ ತಪ್ಪಿಸುವುದಿಲ್ಲ. ಇಲ್ಲಿ ಯಾವುದೇ ಪಾತ್ರಗಳನ್ನು ತೆಗೆದುಕೊಂಡರೂ, ಉತ್ತಮ ಸಂದೇಶಗಳನ್ನೇ ನೀಡುತ್ತದೆ. ಒಟ್ಟಾರೆ ಎಲ್ಲಾ ರೀತಿಯಿಂದ ನೋಡಿದರೂ ಯಕ್ಷಗಾನ ಒಂದು ಪರಿಪೂರ್ಣವಾದ ಕಲೆಯಾಗಿಯೇ ನಿಲ್ಲುತ್ತದೆ ಎಂದರು.
ಮoಜನಾಡಿ ಶ್ರೀ ವಿಷ್ಣುಮೂರ್ತಿ ಜನಾರ್ದನ ದೇವಳದ ಅನುವಂಶಿಕ ಅರ್ಚಕ ದೇ.ಮೂ.ಸುಬ್ರಹ್ಮಣ್ಯ ಭಟ್ ಕಾರ್ಯಾಗಾರವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ದೇವಳದ ಆಡಳಿತ ಮೊಕ್ತೇಸರ ರಾಮದಾಸ್ ಆಳ್ವ, ತೇವುನಾಡುಗುತ್ತು, ಶಾರದಾ ವಿದ್ಯಾನಿಕೇತನ ಶಾಲೆಯ ಪ್ರಾಂಶುಪಾಲ ಮೋಹನ್ದಾಸ್, ಪತ್ರಕರ್ತ ವಸಂತ ಕೊಣಾಜೆ, ಶ್ರೀ ವಿಷ್ಣುಮೂರ್ತಿ ಜನಾರ್ದನ ಯಕ್ಷಗಾನ ಅಧ್ಯಯನ ಟ್ರಸ್ಟ್ನ ಅಧ್ಯಕ್ಷ ಹರೀಶ್ ಬಟ್ಯಡ್ಕ, ಯಕ್ಷಗಾನ ಕಲಾವಿದೆ ಪ್ರೇಮಾ ಕಿಶೋರ್, ಯಕ್ಷಗಾನ ಅಕಾಡೆಮಿ ಸದಸ್ಯರುಗಳಾದ ಸುಧಾಕರ ಶೆಟ್ಟಿ ಉಲ್ಲಾಳ, ಗುರುರಾಜ ಭಟ್, ವಿನಯ ಕುಮಾರ್ ಶೆಟ್ಟಿ ಗುರುಪುರ ಮೊದಲಾದವರು ಉಪಸ್ಥಿತರಿದ್ದರು.
ಅಕಾಡೆಮಿಯ ಸದಸ್ಯ ಸಂಚಾಲಕ ಕೃಷ್ಣಪ್ಪ ಪೂಜಾರಿ ಕಿನ್ಯ ಸ್ವಾಗತಿಸಿ, ಸದಸ್ಯ ಸತೀಶ್ ಅಡಪ ಸಂಕಬೈಲು ವಂದಿಸಿದರು. ವಿಜೇತ್ ಎಂ. ಶೆಟ್ಟಿ ಮಂಜನಾಡಿ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಜನಾರ್ದನ ಬದಿಯಡ್ಕ, ಜಗದೀಶ್ ಉಚ್ಚಿಲ್ ಅವರಿಂದ ತೆಂಕುತಿಟ್ಟು ಯಕ್ಷಗಾನ ಮುಖವರ್ಣಿಕೆ ಬಗ್ಗೆ, ವೇಷಭೂಷಣ ಧಾರಣೆಯ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಾದ ಸಂದೀಪ್ ಶೆಟ್ಟಿ ಕಾವೂರು, ಒದ್ಮನಾಭ ಮಾಸ್ತರ್, ಸಮೃದ್ಧ್ ಭಂಡಾರಿ ಪಿಲಾರು ಅವರಿಂದ ಪ್ರಾತ್ಯಕ್ಷಿಕೆ ನಡೆಯಿತು. ವಿಚಾರಗೋಷ್ಠಿಯಲ್ಲಿ ‘ಪರಿವರ್ತನೆಯ ಪರ್ವಕಾಲದಲ್ಲಿ ಯಕ್ಷಗಾನ ಕಲೆ’ ಬಗ್ಗೆ ಅರ್ಥಧಾರಿ ಸದಾಶಿವ ಆಳ್ವ ದೇವಿಪುರ ವಿಚಾರಮಂಡನೆ ಮಾಡಿದರು. ಮಹಿಳಾ ಯಕ್ಷಗಾನ ತಾಳಮದ್ದಲೆ, ಯಕ್ಷಗಾನ ಪ್ರದರ್ಶನ ನಡೆದವು.
ಮಂಗಳೂರು : ನಿಡ್ಡೋಡಿಯ ಮಹಿಳೆಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಆರೋಪಿ ಶೇಖರ ಶೆಟ್ಟಿ ಅವರನ್ನು ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಖುಲಾಸೆಗೊಳಿಸಿದೆ.
2016ರ ಜ. 12ರಂದು ನಿಡ್ಡೋಡಿಯ ಯಮುಲ ಮನೆ ನಿವಾಸಿ ರೇವತಿ ನಿಡ್ಡೋಡಿಗೆ ಹೋಗಿ ಬರುವುದಾಗಿ ಮನೆಯಿಂದ ಹೋಗಿದ್ದು, ಮರಳಿ ಬಂದಿರಲಿಲ್ಲ. ಅವರ ಅಣ್ಣ ತಿಮ್ಮಪ್ಪ ಮಡಿವಾಳ ದೂರಿನಂತೆ ಮೂಡುಬಿದಿರೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು.
ಸ್ಥಳೀಯ ಶುಂಠಿಲ ಪದವಿನ ನಿವಾಸಿಯಾದ ಶೇಖರ ಶೆಟ್ಟಿ ಅವರ ಮೇಲೆ ಸಂಶಯವಿರುವುದಾಗಿ ತಿಳಿಸಿದ್ದರು. ಶೇಖರ ಅವರನ್ನು ಈ ಬಗ್ಗೆ ಕೂಲಂಕಷವಾಗಿ ವಿಚಾರಿಸಿದಾಗಲೂ ಯಾವುದೇ ಮಾಹಿತಿ ನೀಡಿರಲಿಲ್ಲ. ಈ ಮಧ್ಯೆ ಶೇಖರ ಶೆಟ್ಟಿ ಮನೆಯನ್ನು ಬಿಟ್ಟು ಹೋಗಿದ್ದು ಈ ಬಗ್ಗೆ ಅವರ ಪತ್ನಿ ದಯಾವತಿಯವರು ಶೇಖರ ಶೆಟ್ಟಿ ಕಾಣೆಯಾದ ಬಗ್ಗೆ ಪ್ರಕರಣ ದಾಖಲಿಸಿದ್ದರು.
ಅನಂತರ ಶೇಖರ ಶೆಟ್ಟಿ 2016 ಜ. 18ರಂದು ಠಾಣೆಗೆ ಹಾಜರಾಗಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದನು. ರೇವತಿ ಬೀಡಿ ಬ್ರಾಂಚಿಗೆಂದು ಶುಂಠಿಲ ಪದವಿಗೆ ಬರುತ್ತಿರುವಾಗ ಪರಿಚಯವಾಗಿದ್ದು ಅನ್ಯೋನ್ಯವಾಗಿದ್ದರು. ಶೇಖರ್ಗೆ ಹಣದ ಸಮಸ್ಯೆಯಾದಾಗ ರೇವತಿಯ ಬಂಗಾರವನ್ನು ಪಡೆದು ಅಡವಿಟ್ಟು ಸಾಲ ಪಡೆಯುತ್ತಿದ್ದ. ಅಂತೆಯೇ 2015ರ ನವೆಂಬರ್ನಲ್ಲಿ ರೇವತಿ ಸರವನ್ನು ನೀಡಿದ್ದು ಸಹಕಾರಿ ಸಂಘದಲ್ಲಿ ಅಡವಿಟ್ಟು ಸಾಲ ಪಡೆದಿದ್ದನು. ಆ ಚಿನ್ನದ ಸರವನ್ನು ಬಿಡಿಸಿಕೊಡುವಂತೆ ಆಗಾಗ ಒತ್ತಡ ಹೇರಿದ್ದರಿಂದ ರೇವತಿಯನ್ನು 2016ರ ಜ. 12ರಂದು ಪಡ್ಲಗುರಿಯ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡು ಪೋಲಿಸರನ್ನು ಪಡ್ಡಗುರಿಗೆ ಕರೆದುಕೊಂಡು ಹೋಗಿ ರೇವತಿಯ ಶವವನ್ನು ತೋರಿಸಿದ್ದ.
ಈ ಪ್ರಕರಣದಲ್ಲಿ ಆರೋಪಿ ಪರ ವಕೀಲರು ವಾದ ಮಂಡಿಸಿದ್ದು, ಡಿಎನ್ಎ ವರದಿಯಲ್ಲಿ ತನಿಖಾಧಿಕಾರಿಯವರು ಕಳುಹಿಸಿಕೊಟ್ಟಿದ್ದ ರೇವತಿಯ ಶವದ ಜೈವಿಕ ಅಂಶಗಳು ಪರೀಕ್ಷೆಗೆ ಸಮರ್ಪಕವಾಗಿರಲಿಲ್ಲ ಎಂಬುದಾಗಿ ವರದಿ ನೀಡಿದ್ದವು.
ಈ ಕಾರಣದಿಂದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಅವರು ಪ್ರಕರಣವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂಬುದನ್ನು ಮನಗಂಡು ಆರೋಪಿಯನ್ನು ಖುಲಾಸೆ ಗೊಳಿಸಿದ್ದಾರೆ.