Disaster Management

ನೀರಿನ ಮೂಲ ಸಮರ್ಪಕವಾಗಿ ಬಳಸಿ – ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರ ಸಭೆಯಲ್ಲಿ ಡಿಸಿ ಸೂಚನೆ

ಉಡುಪಿ : ಬೇಸಗೆಯಲ್ಲಿ ಜನಸಾಮಾನ್ಯರು ಹಾಗೂ ಜಾನುವಾರು‌ಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರ ಸಭೆಯ…

Read more

ಟ್ಯಾಂಕರಿನಿಂದ ಹೈಡ್ರಾಲಿಕ್ ಅನಿಲ ಸೋರಿಕೆ

ಮಂಗಳೂರು : ಕೋಟೆಕಾರ್‌ನ ಉಚ್ಚಿಲದಲ್ಲಿ ಕಾರವಾರದಿಂದ ಕೊಚ್ಚಿಯತ್ತ ಹೈಡ್ರೋಕ್ಲೋರಿಕ್ ಅನಿಲ ಸಾಗಾಟ ನಡೆಸುತ್ತಿದ್ದ ಟ್ಯಾಂಕರ್ ವಾಹನದಲ್ಲಿ ಸೋರಿಕೆ ಉಂಟಾಗಿದೆ. ಜಿಲ್ಲಾಡಳಿತ ಹಾಗೂ ತಹಶೀಲ್ದಾರ್ ಅವರ ಸೂಚನೆ ಮೇರೆಗೆ ಅಗ್ನಿಶಾಮಕ ದಳ, ರಾಜ್ಯ ವಿಪತ್ತು ಪಡೆ (ಎಸ್‌ಡಿಆರ್‌ಎಫ್) ಹಾಗೂ ಬಿಎಎಸ್‌ಎಫ್ ತಂಡ ನಿರಂತರ…

Read more

ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಮತ್ತು ಭೂ ಕುಸಿತ ಕುರಿತು ಎರಡು ದಿನಗಳ ಬಿಐಎಸ್ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನೆ

ಮಣಿಪಾಲ : ಮಣಿಪಾಲದ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ)ಯಲ್ಲಿ “ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತಗಳು ಮತ್ತು ಭೂ ಕುಸಿತ: ಕಾರಣಗಳು, ತಡೆಗಟ್ಟುವಿಕೆ, ತಗ್ಗಿಸುವಿಕೆ ಮತ್ತು ಪುನಃಸ್ಥಾಪನೆ” ಕುರಿತು ಎರಡು ದಿನಗಳ ಬಿಐಎಸ್ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಲಾಯಿತು. ಬ್ಯೂರೋ ಆಫ್ ಇಂಡಿಯನ್…

Read more

ಫೆಂಗಾಲ್ ಚಂಡಮಾರುತ – ಉಳ್ಳಾಲದ ಕಿನ್ಯಾದಲ್ಲಿ ನೆರೆ ಅವಾಂತರ; ಸ್ಪೀಕರ್ ಖಾದರ್ ಭೇಟಿ, ಪರಿಶೀಲನೆ

ಉಳ್ಳಾಲ: ಫೆಂಗಾಲ್ ಚಂಡಮಾರುತದಿಂದ ದ.ಕ.ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಅಲ್ಲಲ್ಲಿ ಅವಾಂತರ ಸೃಷ್ಟಿಯಾಗಿದೆ. ಉಳ್ಳಾಲ ಕಿನ್ಯಾ ಗ್ರಾಪಂ ವ್ಯಾಪ್ತಿಯ ನಡುಮನೆ ಎಂಬಲ್ಲಿ ನೆರೆನೀರು ನುಗ್ಗಿದ್ದು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ, ಸ್ಪೀಕರ್ ಯು.ಟಿ. ಖಾದರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು‌.…

Read more

ಶಾಲೆ, ಕಾಲೇಜು ರಜೆ ಸಂದರ್ಭ ಮಕ್ಕಳ ಮೇಲೆ ನಿಗಾ ಇರಿಸಿ – ಜಿಲ್ಲಾಧಿಕಾರಿ

ಉಡುಪಿ : ಜಿಲ್ಲೆಯಲ್ಲಿ ಶಾಲಾ ಹಾಗೂ ಕಾಲೇಜು ಮಕ್ಕಳು ಕೆರೆ, ನದಿ ಹಾಗೂ ಕಿಂಡಿ ಆಣೆಕಟ್ಟಿನ ಹಿನ್ನೀರು ಪ್ರದೇಶಗಳಲ್ಲಿ ಆಟ ಆಡಲು ಅಥವಾ ಈಜಲು ಹೋಗಿ ನೀರಿನಲ್ಲಿ ಮುಳುಗಿ ಪ್ರಾಣ ಬಿಡುವ ಪ್ರಕರಣಗಳು ಇತ್ತೀಚೆಗೆ ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ವರದಿಯಾಗುತ್ತಿವೆ.…

Read more

ಬಾಕಿ ಇರುವ ಮನೆಹಾನಿ, ಬೆಳೆಹಾನಿ ಪರಿಹಾರ ತಕ್ಷಣ ವಿತರಿಸಿ – ಅಧಿಕಾರಿಗಳಿಗೆ ಎಡಿಸಿ ಸೂಚನೆ

ಉಡುಪಿ : ಕಳೆದ ಮುಂಗಾರು ಮಳೆ ಸಂದರ್ಭದಲ್ಲಿ ಮನೆಹಾನಿ ಹಾಗೂ ಬೆಳೆಹಾನಿಗೆ ಒಳಗಾದವರಿಗೆ ಪರಿಹಾರದ ಹಣ ನೀಡುವುದು ಬಾಕಿ ಇದ್ದಲ್ಲಿ ಆದಷ್ಟು ಬೇಗನೆ ಅರ್ಹ ಫಲಾನುಭವಿಗಳಿಗೆ ಪರಿಹಾರದ ಹಣವನ್ನು ನೀಡುವಂತೆ ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್. ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಣಿಪಾಲ…

Read more

ವಾಯುಭಾರ ಕುಸಿತ – ಭಾರಿ ಗಾಳಿ ಮಳೆ ಸಾಧ್ಯತೆ

ಉಡುಪಿ : ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಹೆಚ್ಚಿನ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚಿಸಿರುತ್ತಾರೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ…

Read more

ಕಡಲ್ಕೊರೆತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕೋಟ : ಕಡಲ್ಕೊರೆತಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ ಅವರು ಕೋಡಿ ಗ್ರಾ.ಪಂ. ವ್ಯಾಪ್ತಿಯ ಹೊಸಬೆಂಗ್ರೆ ಲೈಟ್‌ಹೌಸ್‌ ಹಾಗೂ ಕೋಟ ಗ್ರಾ.ಪಂ. ವ್ಯಾಪ್ತಿಯ ಮಣೂರು ಪಡುಕರೆ ವಿವಿಧ ಭಾಗಗಳಿಗೆ ಭೇಟಿ ನೀಡಿದರು. ಕೋಟ ಹೋಬಳಿಯ ವಿವಿಧ ಕಡೆಗಳಲ್ಲಿ ನಿರಂತರ…

Read more

ಮಳೆಯಿಂದ ಇದುವರೆಗೆ ಅಂದಾಜು 183 ಕೋಟಿ ರೂ. ನಷ್ಟ : ಅಪರ ಜಿಲ್ಲಾಧಿಕಾರಿ ಮಮತಾದೇವಿ

ಉಡುಪಿ : ಪ್ರಸಕ್ತ ಸಾಲಿನ ಜುಲೈ ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇ.41ರಷ್ಟು ಸುರಿದ ಅಧಿಕ ಮುಂಗಾರು ಮಳೆಯಿಂದಾಗಿ ಜಿಲ್ಲೆಯ ರಸ್ತೆ, ಮೇಲ್ಸೇತುವೆ, ವಿದ್ಯುತ್‌ ಕಂಬ, ಟ್ರಾನ್ಸ್‌ಫಾರ್ಮ‌ರ್ ಹಾಗೂ ಲೈನ್‌ಗಳು, ಶಾಲೆಗಳು, ಅಂಗನವಾಡಿ ಕಟ್ಟಡಗಳು ಸೇರಿದಂತೆ ಉಂಟಾಗಿರುವ ವಿವಿಧ ಹಾನಿಗಳಿಂದಾಗಿ ಜಿಲ್ಲೆಯಲ್ಲಿ ಇದುವರೆಗೆ…

Read more

ವಿಪರೀತ ಮಳೆ ಹಾಗೂ ಹಾನಿಯಾಗದಂತೆ ಅನಂತೇಶ್ವರ ಸನ್ನಿಧಿಯಲ್ಲಿ ‘ಚಿತ್ರಾನ್ನ ಸೇವೆ’

ಉಡುಪಿ : ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಆಗುತ್ತಿರುವ ಅತಿವೃಷ್ಟಿ ಕಡಿಮೆ ಮಾಡುವುದಕ್ಕಾಗಿ ಸಂಪ್ರದಾಯದಂತೆ ಉಡುಪಿ ರಥಬೀದಿಯಲ್ಲಿರುವ ಅನಂತೇಶ್ವರ ದೇವಾಲಯದಲ್ಲಿ ಚಿತ್ರಾನ್ನ ಸೇವೆ ನಡೆಸಲಾಯಿತು. ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ನಡೆದ ಈ ಸೇವೆಯ ಸಂದರ್ಭದಲ್ಲಿ…

Read more