ಮಂಗಳೂರು : ಉಪಲೋಕಾಯುಕ್ತ. ನ್ಯಾ. ಬಿ. ವೀರಪ್ಪ ಅವರು ಭಾನುವಾರ ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿದರು.
ಆಸ್ಪತ್ರೆಯ ವಿವಿಧ ವಾಡು೯ಗಳಿಗೆ ಭೇಟಿ ನೀಡಿದ ಅವರು ರೋಗಿಗಳೊಂದಿಗೆ ಮಾತನಾಡಿ ಅಹವಾಲು ಆಲಿಸಿದರು. ಆಸ್ಪತ್ರೆಯ ಔಷಧ ದಾಸ್ತಾನು ಪರಿಶೀಲಿಸಿದ ಉಪಲೋಕಾಯುಕ್ತರು, ಮಕ್ಕಳ ಆಸ್ಪತ್ರೆಗೂ ಭೇಟಿ ನೀಡಿದರು. ಆಸ್ಪತ್ರೆಯ ಶೌಚಾಲಯಕ್ಕೂ ಭೇಟಿ ನೀಡಿದ ಅವರು ಸ್ವಚ್ಚತೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾ ಕಾರಾಗೃಹಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದಭ೯ದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಜಿ.ಪಂ. ಸಿಇಓ ಡಾ. ಆನಂದ್, ವೆನ್ ಲಾಕ್ ಅಧೀಕ್ಷಕ ಡಾ. ಶಿವಕುಮಾರ್ ಮತ್ತಿತರರು ಇದ್ದರು.

