ಉಡುಪಿ : ಜಿಲ್ಲಾ ಸಾಹಿತ್ಯ ಪರಿಷತ್ತಿನ 17ನೇ ಸಾಹಿತ್ಯ ಸಮ್ಮೇಳನ ಎಪ್ರಿಲ್30 ಮತ್ತು ಮೇ 1ರಂದು ರಾಜಾಂಗಣದಲ್ಲಿ ನಡೆಯಲಿದ್ದು ಸಮ್ಮೇಳನಾಧ್ಯಕ್ಷರಾಗಿ ವಿದ್ವಾಂಸ ಡಾ| ಪಾದೇಕಲ್ಲು ವಿಷ್ಣು ಭಟ್ ಅವರನ್ನು ಆಯ್ಕೆ ಮಾಡಲಾಗಿದೆ.
ಶಿಕ್ಷಣ ಕ್ಷೇತ್ರದಲ್ಲಿ ಗುರುತಿಸಿ ಕೊಂಡಿರುವ ಡಾ| ಪಾದೇಕಲ್ಲು ವಿಷ್ಣು ಭಟ್ ಅವರು ಸರಕಾರಿ ಕಾಲೇಜುಗಳಲ್ಲಿ ಉಪನ್ಯಾಸಕ, ಪ್ರಾಂಶುಪಾಲರಾಗಿ ಸೇವೆಸಲ್ಲಿಸಿ ನಿವೃತ್ತಿ ಹೊಂದಿದ್ದಾರೆ. ಸಂಶೋಧನಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಇವರು ತುಳು ನಿಘಂಟು ರಚನೆಯಲ್ಲೂ ಪ್ರಮುಖ ಪಾತ್ರ ವಹಿಸಿದ್ದರು. 20ಕ್ಕೂ ಅಧಿಕ ಕೃತಿಗಳನ್ನು ರಚಿಸಿದ್ದು, 50ಕ್ಕೂ ಅಧಿಕ ಸಂಪಾದಿತ, ಸಹಸಂಪಾದಿತ ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಯಕ್ಷಗಾನ ತಾಳಮದ್ದಳೆಯ ಅರ್ಥಧಾರಿಯಾಗಿ ಕಲೆಗೆ ಜೀವ ತುಂಬಿದ್ದಾರೆ. ಹಲವು ಪ್ರಶಸ್ತಿಗಳು ಇವರಿಗೆ ಲಭಿಸಿವೆ ಎಂದು ಜಿಲ್ಲಾ ಕಸಾಪ ಪ್ರಕಟನೆ ತಿಳಿಸಿದೆ.