ಮಂಗಳೂರು : ಮಿತಿಮೀರಿದ ವೇಗದಿಂದ ಡಿವೈಡರ್ ಏರಿದ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದವರು ಸಿನಿಮೀಯ ರೀತಿಯಲ್ಲಿ ಪಾರಾದ ಘಟನೆ ಮಂಗಳೂರಿನ ಕಾವೂರು ಬಳಿ ನಡೆದಿದೆ.
ಶುಕ್ರವಾರ ಬೆಳ್ಳಂಬೆಳಗ್ಗೆ ಈ ಭೀಕರ ಅಪಘಾತ ನಡೆದಿದ್ದು, ಸ್ವಲ್ಪವೂ ಗಾಯಗಳಿಲ್ಲದೆ ಕಾರಿನಲ್ಲಿದ್ದ ಇಬ್ಬರು ಪಾರಾಗಿದ್ದಾರೆ. ಫೋನ್ನಲ್ಲಿ ಮಾತಾಡುತ್ತಾ ಅತೀ ವೇಗದಿಂದ ಚಾಲನೆ ಮಾಡುತ್ತಿದ್ದ ಚಾಲಕನ ನಿಯಂತ್ರಣ ತಪ್ಪಿ ಈ ಕಾರು ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಅಪಘಾತದ ತೀವ್ರತೆಗೆ ರಿಮ್ನಿಂದ ಟೈರ್ ಕಳಚಿ ಬಿದ್ದಿದೆ. ಪಲ್ಟಿಯಾದಾಗ ಕಾರಿನ ಏರ್ಬ್ಯಾಗ್ ತೆರೆದಿದ್ದರಿಂದ ಕಾರಿನಲ್ಲಿದ್ದವರು ಪಾರಾಗಿದ್ದಾರೆ. ಅಪಘಾತದ ದೃಶ್ಯ ಸ್ಥಳೀಯ ಪೆಟ್ರೋಲ್ ಬಂಕ್ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.