ಮಂಗಳೂರು : ನಿಷೇದಿತ ಮಾದಕದ್ರವ್ಯ ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಐವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು 70ಗ್ರಾಂ ಎಂಡಿಎಂಎಯನ್ನು ವಶಪಡಿಸಿಕೊಂಡಿದ್ದಾರೆ.
ಕಾಸರಗೋಡು ಮಂಜೇಶ್ವರ ಬೆಂಗ್ರೆ ನಿವಾಸಿ ಅಬ್ದುಲ್ ಶಾಕೀರ್(24), ಕಾಸರಗೋಡು ಮಂಜೇಶ್ವರ, ಕುಂಜತ್ತೂರು, ಉದ್ಯಾವರ ನಿವಾಸಿ ಹಸನ್ ಆಶೀರ್(34), ಕೇರಳದ ಕಣ್ಣೂರು ಜಿಲ್ಲೆಯ ಕೊರಂಗಾಡ್, ಪಯ್ಯನೂರು, ಪೆರಿಂಗಾಂವ್ ನಿವಾಸಿ ರಿಯಾಜ್ ಎ.ಕೆ(31), ಕಾಸರಗೋಡು ವರ್ಕಾಡಿಯ ಪಾವೂರು ನಿವಾಸಿ ಮೊಹಮ್ಮದ್ ನೌಷಾದ್(22), ಕಾಸರಗೋಡು ಮಂಜೇಶ್ವರ, ಕುಂಜತ್ತೂರು ನಿವಾಸಿ ಯಾಸೀನ್ ಇಮ್ರಾಜ್(35) ಬಂಧಿತ ಆರೋಪಿಗಳು.
ಬಂಧಿತ ಆರೋಪಿಗಳು ಮಂಗಳೂರಿನಲ್ಲಿ ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಕೊಣಾಜೆ ಠಾಣಾ ವ್ಯಾಪ್ತಿಯ ನೆತ್ತಿಲಪದವು ಬಳಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರಿಂದ 3,50,000 ರೂ. ಮೌಲ್ಯದ 70 ಗ್ರಾಂ ನಿಷೇಧಿತ ಮಾದಕದ್ರವ್ಯ ಎಂಡಿಎಂಎ, 5 ಮೊಬೈಲ್ ಫೋನ್ಗಳು, 1,460 ರೂ. ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 4,25,500 ರೂ. ಆಗಬಹುದೆಂದು ಅಂದಾಜಿಸಲಾಗಿದೆ.
ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.







