ಬೈಂದೂರು : ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಸರಕಾರಿ ಶಾಲೆಗಳನ್ನು ಉಳಿಸುವ ವಿಶೇಷ ಯೋಜನೆ ‘300 ಟ್ರೀಸ್’ ಇದರ ಸಮಾಲೋಚನ ಸಭೆ ನಡೆಸಿ, ಸರ್ಕಾರಿ ಶಾಲೆಗಳ ಉಳಿವಿಗೆ ಶ್ರಮಿಸುವಂತೆ ಮನವಿ ಮಾಡಿದರು.
300 ಟ್ರೀಸ್ ಸಮಿತಿ ರಚನೆ ಹಾಗೂ ಈ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅಳವಡಿಸುವ ಬಗ್ಗೆ ಶಿಕ್ಷಣ ಪ್ರೇಮಿಗಳು, ಅಧ್ಯಾಪಕರು, ದಾನಿಗಳು ಹಾಗೂ ಕಾರ್ಯಕರ್ತರಿಂದ ಸಲಹೆಗಳನ್ನು ಸ್ವೀಕರಿಸಿದರು.
ಸಭೆಯಲ್ಲಿ, ಬೆಂಗಳೂರಿನಲ್ಲಿ ನೆಲೆಸಿರುವ ಕಾರ್ಯಕರ್ತರ ಜೊತೆ ಸಮಾಲೋಚನೆ ಸಭೆಯನ್ನು ಬೆಂಗಳೂರಿನಲ್ಲಿ ನಡೆಸಲು ತೀರ್ಮಾನಿಸಿದ್ದು, ಸಂಘಟಿತವಾಗಿ ನಾವೆಲ್ಲರೂ ಜೊತೆಯಾಗಿ ಸರಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡಿದರೆ ಸರಕಾರಿ ಶಾಲೆಗಳು ಗತವೈಭವ ಕಾಣುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಗಂಟಿಹೊಳೆ ಅಭಿಪ್ರಾಯಪಟ್ಟರು.