Emergency Response

ಮನೆಯಲ್ಲಿ ಅಗ್ನಿ ಅವಘಡ – ಬಾರ್ ಮಾಲಕ ಸಾವು, ಪತ್ನಿ ಗಂಭೀರ

ಉಡುಪಿ : ನಗರದ ಬಾರ್‌ ಮಾಲಕರೊಬ್ಬರ ಮನೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಬಾರ್ ಮಾಲಕ ಸಾವನ್ನಪ್ಪಿ ಅವರ ಪತ್ನಿ ಗಂಭೀರ ಗಾಯಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ. ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲಕರ ಮನೆಯಲ್ಲಿ ಅಗ್ನಿ ಅವಘಡ…

Read more

ಸೆಝ್ ಕೈಗಾರಿಕಾ ವಲಯದಲ್ಲಿ ಬೆಂಕಿ‌ ಅವಘಡ – ಕೋಟ್ಯಾಂತರ ನಷ್ಟ

ಮಂಗಳೂರು : ಸೆಝ್ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿರುವ ಅಥೆಂಟಿಕ್ ಓಷನ್ ಟ್ರೆಷರ್‌ನಲ್ಲಿ ಆಕಸ್ಮಿಕ ಬೆಂಕಿ ಅವಘಡ ರವಿವಾರ ಮಧ್ಯಾಹ್ನ ಸಂಭವಿಸಿದೆ. ಕಂಪೆನಿಯಲ್ಲಿ ದುರಸ್ತಿ ಕಾರ್ಯನಡೆಯುತ್ತ ಕಾರಣ ನೌಕರರು ಯಾರು ಇರಲಿಲ್ಲ. ಹಾಗಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಅಥೆಂಟಿಕ್ ಓಷನ್…

Read more

ಆಗುಂಬೆ ಘಾಟಿಯ 5ನೇ ತಿರುವಿನಲ್ಲಿ ಗುಡ್ಡಜರಿತ; ರಸ್ತೆಗೆ ಮರ ಬಿದ್ದು ಸಂಚಾರ ಅಸ್ತವ್ಯಸ್ತ

ಹೆಬ್ರಿ : ಭಾರೀ ಮಳೆಗೆ ಆಗುಂಬೆ ಘಾಟಿಯ ಐದನೇ ತಿರುವಿನಲ್ಲಿ ಇಂದು ಗುಡ್ಡಜರಿದು ಮರವೊಂದು ರಸ್ತೆಗೆ ಬಿದ್ದ ಪರಿಣಾಮ ಘಾಟಿಯಲ್ಲಿ ವಾಹನ ಸಂಚಾರ ಕೆಲಹೊತ್ತು ಅಸ್ತವ್ಯಸ್ತಗೊಂಡಿತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹೆಬ್ರಿ ಪೊಲೀಸ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ರಸ್ತೆ…

Read more

ಕಾಪುವಿನಲ್ಲಿ ಮೋರಿಯ ದಂಡೆಗೆ ಡಿಕ್ಕಿಯಾಗಿ ಕಾರು ಪಲ್ಟಿ: ಅಪಾಯದಿಂದ ಪಾರಾದ ಚಾಲಕ

ಉಡುಪಿ : ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯ ಬದಿಯ ಮೋರಿಯ ದಂಡೆಗೆ ಡಿಕ್ಕಿ ಹೊಡೆದು ಮುಗುಚಿ ಬಿದ್ದ ಘಟನೆ ಕಾಪು ತಾಲೂಕಿನ ಬಡಾ ಎರ್ಮಾಳುವಿನ ಅಪೂರ್ವ ಲಾಡ್ಜ್ ಮುಂಭಾಗದಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಕಾರು ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ.…

Read more

ಉಡುಪಿ ಮಳೆ; ಅಗತ್ಯ ಕ್ರಮ ಕೈಗೊಳ್ಳಲಾಗಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: ತೀವ್ರ ಮಳೆಯ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಯಾವುದೇ ಅನಾಹುತಗಳು ಸಂಭವಿಸದಂತೆ ಜಿಲ್ಲಾಡಳಿತ ವತಿಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮುಂಚಿತವಾಗಿಯೇ ಉಡುಪಿಯಲ್ಲಿ ಪ್ರಗತಿ…

Read more

ಕುಮಾರಧಾರಾ ನದಿಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾ| ಕುಮಾರಧಾರಾ ನದಿಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ. ಕಡಬ ತಾಲೂಕಿನ ಪುಳಿಕುಕ್ಕು ಎಂಬಲ್ಲಿ ಘಟನೆ ನಡೆದಿದೆ. ಬೆಂಗಳೂರು ಮೂಲದ ರವಿಕುಮಾರ್ ಎಂಬ ವ್ಯಕ್ತಿ ತುಂಬಿ ಹರಿಯುತ್ತಿರುವ ಕುಮಾರಧಾರಾ ನದಿಯಲ್ಲಿ ಇಳಿದಿದ್ದರು, ಈ…

Read more

ಉಡುಪಿಯಲ್ಲಿ ಧಾರಾಕಾರ ಮಳೆ : ಹಲವು ಮನೆಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

ಉಡುಪಿ : ಎರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಹಲವೆಡೆ ಮನೆಗಳು ಜಲಾವೃತಗೊಂಡಿದೆ. ಉಡುಪಿಯ ಕರಂಬಳ್ಳಿ, ಮೂಡುನಿಡಂಬೂರು, ಕೊಡವೂರು ಭಾಗದಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಕರಂಬಳ್ಳಿ ಭಾಗದಲ್ಲಿ, ಬನ್ನಂಜೆ ಮೂಡನಿಡಂಬೂರು ಕೆಲವು ಮನೆಗಳು ಜಲಾವೃತಗೊಂಡಿವೆ. ಇಂದ್ರಾಣಿ‌ ನದಿ…

Read more

ಭಾರಿ ಮಳೆಗೆ ಬೈಂದೂರಿನ ಹಲವೆಡೆ ನೆರೆ; ನಾವುಂದ, ಸಾಲ್ಬುಡ, ಬಡಾಕೆರೆ ಭಾಗದ ಜನರಿಗೆ ಜಲ ದಿಗ್ಭಂಧನ

ಕುಂದಾಪುರ : ಪ್ರತಿ ವರ್ಷ ಮಳೆಗಾಲ ಬಂದರೆ ನಮಗೆ ಸಮಸ್ಯೆ ತಪ್ಪಿದ್ದಲ್ಲ. ಮಳೆಗಾಲದಲ್ಲಿ ಇಲ್ಲಿನ ನೂರಕ್ಕೂ ಅಧಿಕ‌ ಮನೆಯವರಿಗೆ ತಲೆನೋವು ಕಟ್ಟಿಟ್ಟಬುತ್ತಿ. ಹೆಚ್ಚುಕಮ್ಮಿ ನಾಲ್ಕೈದು ದಿನವಾದರೂ ಮನೆ ಬಿಟ್ಟು ಹೊರಬಾರಲಾಗದ ದುಸ್ಥಿತಿ. ಹಿಡಿ ಉಪ್ಪು, ದಿನಸಿ, ತರಕಾರಿ ತರಬೇಕಾದರೂ ಕೂಡ ದೋಣಿ…

Read more

ಜಿಲ್ಲೆಯಲ್ಲಿ ಗಾಳಿ, ಮಳೆ ಹಾನಿ – ಮಾಹಿತಿ ಪಡೆದು ಕ್ರಮಕ್ಕೆ ಸೂಚಿಸಿದ ಉಸ್ತುವಾರಿ ಸಚಿವೆ ಹೆಬ್ಬಾಳಕರ್

ಉಡುಪಿ : ಉಡುಪಿ ಜಿಲ್ಲೆಯ ಕೆಲವೆಡೆ ಗಾಳಿ ಮತ್ತು ಮಳೆಯಿಂದ ಹಾನಿಯಾಗಿರುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ ಪಡೆದಿದ್ದು, ಸೂಕ್ತ ಕ್ರಮಕ್ಕೆ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿರುವ ಸಚಿವರು ಸಚಿವ ಸಂಪುಟ ಸಭೆಗೆ ಹೊರಡುವ ಮುನ್ನ ಉಡುಪಿಯ ಸದ್ಯದ ಪರಿಸ್ಥಿತಿಯ…

Read more

ಗಾಳಿಮಳೆಗೆ ಹಲವು ಮನೆಗಳಿಗೆ ಹಾನಿ, ಲಕ್ಷಾಂತರ ರೂ.ನಷ್ಟ; ಗ್ರಾಮೀಣ ಭಾಗದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ

ಉಡುಪಿ : ಒಂದು ವಾರದ ಮಳೆ ಉಡುಪಿಯಲ್ಲಿ ಭಾರೀ ಹಾನಿಯನ್ನುಂಟು ಮಾಡಿದೆ. ಮುಖ್ಯವಾಗಿ ಎರಡು ದಿನಗಳ ಗಾಳಿಮಳೆಗೆ ಮರಗಳು, ವಿದ್ಯುತ್ ಕಂಬಗಳು ನೆಲಕ್ಕುರುಳಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇಂದು ಬಂದ ಭಾರೀ ಗಾಳಿ ಮಳೆಗೆ ಉಡುಪಿ ತಾಲೂಕಿನ ಕರ್ಜೆ ಗ್ರಾಮದ ಕುರ್ಪಾಡಿ…

Read more