Flood Safety

ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಭಾರೀ ಮಳೆ – ಉಕ್ಕಿ‌ಹರಿದ ದರ್ಪಣ ‌ತೀರ್ಥ ನದಿ

ಸುಳ್ಯ : ದ.ಕ.ಜಿಲ್ಲೆಯ ಕಡಬ ತಾಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಪರಿಸರ ಹಾಗೂ ಸುತ್ತಮುತ್ತಲು ಭಾರೀ ಮಳೆಯಾಗುತ್ತಿದೆ. ಪರಿಣಾಮ ಸುಬ್ರಹ್ಮಣ್ಯದ ದರ್ಪಣ ತೀರ್ಥ ನದಿಯು ಉಕ್ಕಿ ಹರಿಯುತ್ತಿದೆ. ದರ್ಪಣ ‌ತೀರ್ಥ ನದಿಯು ಪ್ರವಾಹದ ರೀತಿಯಲ್ಲಿ ಉಕ್ಕಿ‌ಹರಿದ ಪರಿಣಾಮ ಶ್ರೀ ಆದಿಸುಬ್ರಹ್ಮಣ್ಯ…

Read more

ಪಡೀಲ್ ಅಂಡರ್ ಪಾಸ್ ನೀರಿನಲ್ಲಿ ಸಿಕ್ಕಿಹಾಕಿಕೊಂಡ ಕೆಎಸ್ಆರ್‌ಟಿಸಿ ಬಸ್

ಮಂಗಳೂರು : ಮಂಗಳೂರಿನಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಭಾರೀ ಅವಾಂತರವನ್ನೇ ಸೃಷ್ಠಿಸಿದೆ. ಈ ನಡುವೆ ಅಂಡರ್ ಪಾಸ್‌ನಲ್ಲಿ ತುಂಬಿದ್ದ ನೀರಿನಲ್ಲಿ ಕೆಎಸ್ಆರ್‌ಟಿಸಿ ಬಸ್ ಸಿಕ್ಕಿಹಾಕಿಕೊಂಡ ಘಟನೆ ನಡೆದಿದೆ. ಮಂಗಳೂರಿನಲ್ಲಿ ನಿನ್ನೆ ಸಂಜೆಯಿಂದಲೇ ಎಡೆಬಿಡದೆ ಮಳೆಯಾಗುತ್ತಿದೆ. ಮಳೆ…

Read more

ನದಿಯಲ್ಲಿ ತೇಲಿ ಬರುತ್ತಿದ್ದ ದನದ ರಕ್ಷಣೆ; ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾದ ಪ್ರವಾಹ ರಕ್ಷಣಾ ತಂಡ

ಉಪ್ಪಿನಂಗಡಿ : ತುಂಬಿದ ನೇತ್ರಾವತಿ ನದಿಯಲ್ಲಿ ತೇಲಿ ಬರುತ್ತಿದ್ದ ದನವೊಂದನ್ನು ಉಪ್ಪಿನಂಗಡಿಯಲ್ಲಿರುವ ಗೃಹರಕ್ಷಕ ದಳದವರನ್ನೊಳಗೊಂಡ ಪ್ರವಾಹ ರಕ್ಷಣಾ ತಂಡ ದೋಣಿಯ ಮೂಲಕ ನದಿ ಮಧ್ಯಕ್ಕೆ ಹೋಗಿ ರಕ್ಷಣೆ ಮಾಡಿ ದಡಕ್ಕೆ ಕರೆದುಕೊಂಡು ಬಂದ ಘಟನೆ ಉಪ್ಪಿನಂಗಡಿಯಲ್ಲಿ ಶುಕ್ರವಾರ ನಡೆದಿದೆ. ನೇತ್ರಾವತಿ ನದಿಯ…

Read more

ನದಿ ನೀರಲ್ಲಿ ಕೊಚ್ಚಿಹೋಗಿದ್ದ ಆನಂದ ಎಂಬವರ ಮೃತದೇಹ ಪತ್ತೆ

ಉಡುಪಿ : ನಾಡ್ಪಾಲು ಗ್ರಾಮದ ಚೇರೋಳಿಯಲ್ಲಿ ಬುಧವಾರ ನೀರು ಪಾಲಾದ ಆನಂದ ಎಂಬವರ ಮೃತದೇಹ ಪತ್ತೆಯಾಗಿದೆ. ಮುಳುಗುತಜ್ಞ ಈಶ್ವರ ಮಲ್ಪೆ ತಂಡದ ಕಾರ್ಯಾಚರಣೆಯಿಂದ ಆನಂದ ಅವರ ಮೃತದೇಹವನ್ನು 4 ಕಿ.ಮೀ. ದೂರದಲ್ಲಿ ಪತ್ತೆಹಚ್ಚಲಾಯಿತು. ನಾಡ್ಪಾಲಿನಲ್ಲಿ ತೋಟವೊಂದರಲ್ಲಿ ಕೂಲಿ ಕೆಲಸಕ್ಕಾಗಿ ಬಂದಿದ್ದ ಆನಂದ,…

Read more

ಹೊಳೆ ದಾಟುತ್ತಿದ್ದ ವೇಳೆ ಹಗ್ಗ ತುಂಡಾಗಿ ನೀರಿನಲ್ಲಿ ಕೊಚ್ಚಿ ಹೋದ ಕಾರ್ಮಿಕ

ಉಡುಪಿ : ಕೂಲಿ ಕಾರ್ಮಿಕನೋರ್ವ ಹೊಳೆನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಚೀರೊಳ್ಳಿ ಎಂಬಲ್ಲಿ ನಡೆದಿದೆ. ಕೂಲಿ ಕಾರ್ಮಿಕನ್ನು ತುಮಕೂರು ಮೂಲದ ಆನಂದ್ (45) ಎಂದು ಗುರುತಿಸಲಾಗಿದೆ. ಇವರು ಕೆಲಸ ಮಾಡುವ ಮನೆಗೆ ತೆರಳಲು ಸೀತಾನದಿಯ ಉಪನದಿಯನ್ನು ದಾಟಿ…

Read more

ಐದು ದಿನಗಳಿಂದ ಭಾರೀ ವರ್ಷಾಧಾರೆ; ನದಿ ತೀರದ ನಿವಾಸಿಗಳಲ್ಲಿ ನೆರೆ ಭೀತಿ

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಕಳೆದ ಐದು ದಿನಗಳಿಂದ ಭಾರೀ ವರ್ಷಾಧಾರೆಯಾಗುತ್ತಿದ್ದು, ಇದರಿಂದ ನದಿ ಪಾತ್ರದ ಜನರಲ್ಲಿ ಆತಂಕ ಮನೆಮಾಡಿದೆ. ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಪಾಪನಾಶಿನಿ ನದಿ ಉಕ್ಕಿ ಹರಿಯುತ್ತಿದ್ದು, ನದಿ ತೀರದ ನಿವಾಸಿಗಳಲ್ಲಿ ನೆರೆ ಭೀತಿ ಎದುರಾಗಿದೆ. ಪಾಪನಾಶಿನಿ ನದಿಗೆ…

Read more