Fraud Prevention

ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿ 89 ಲಕ್ಷ ರೂ ವಂಚನೆ ಪ್ರಕರಣ – ಆರೋಪಿ ಬಂಧನ

ಉಡುಪಿ : ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿ ಉಡುಪಿಯ ವ್ಯಕ್ತಿಯೊಬ್ಬರಿಗೆ 89 ಲಕ್ಷ ರೂ. ವಂಚಿಸಿರುವ ಪ್ರಕರಣದ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಧಾರವಾಡದಲ್ಲಿ ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ್ ನಿವಾಸಿ ಕಿರಣ್ (24) ಬಂಧಿತ ಆರೋಪಿ. ಈತನಿಂದ ಒಟ್ಟು ಏಳು…

Read more

ಹೂಡಿಕೆ ಹೆಸರಿನಲ್ಲಿ ವಂಚನೆ : ಓರ್ವನ‌ ಬಂಧನ

ಮಂಗಳೂರು : ವಾಟ್ಸಾಪ್‌ನಲ್ಲಿ ವ್ಯಕ್ತಿಯನ್ನು ಪರಿಚಯಿಸಿಕೊಂಡು ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂಬ ಆಮಿಷವೊಡ್ಡಿ 10 ಲಕ್ಷ ರೂ. ವಂಚನೆ ಎಸಗಿದ್ದ ಪ್ರಕರಣದಲ್ಲಿ ಕೇರಳ ಮೂಲದ ಯುವಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕೇರಳ ತ್ರಿಶೂರ್‌ನ ಮಟ್ಟೂರು ನೂಲುವ್ಯಾಲಿಯ…

Read more

ಸಿಬಿಐ ಅಧಿಕಾರಿ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

ಕಾರ್ಕಳ : ಸಿಬಿಐ ಹೆಸರಲ್ಲಿ ಬೆದರಿಸಿ ಕಾರ್ಕಳದ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ವರದಿಯಾಗಿದೆ. ಪ್ರೀಮ ಶರಿಲ್ ಡಿಸೋಜ (38) ಅವರಿಗೆ ಟೆಲಿಕಾಂ ಕಂಪೆನಿಯಿಂದ ಕರೆ ಮಾಡುವುದಾಗಿ ತಿಳಿಸಿದ ವ್ಯಕ್ತಿಯೊಬ್ಬ ನಿಮ್ಮ ಆಧಾರ್ ಕಾರ್ಡ್ ನಂಬರ್‌ನಿಂದ ಉತ್ತರ ಪ್ರದೇಶದಲ್ಲಿ ಬೇರೆ…

Read more

6 ಲಕ್ಷ RTGS ಮಾಡಿಸಿಕೊಂಡು, ಚಿನ್ನ ಖರೀದಿ ಸಂಸ್ಥೆಗೆ ವಂಚನೆ…!

ಉಡುಪಿ : ಚಿನ್ನ ಖರೀದಿ ಸಂಸ್ಥೆಗೆ ಆರು‌ ಲಕ್ಷ ರೂಪಾಯಿ ವಂಚಿಸಿದ ಕುರಿತು ಪ್ರಕರಣ ದಾಖಲಾಗಿದೆ. ದೂರುದಾರ ಕಾರ್ತಿಕ (32), ಮಂಡ್ಯ ಜಿಲ್ಲೆಯ ಇವರು ಮೈಸೂರಿನಲ್ಲಿ ಧನ ಗಣಪತಿ ಗೋಲ್ಡ್ & ಡೈಮಂಡ್‌ ಫೈನಾನ್ಸ್‌‌ನಲ್ಲಿ ಫೀಲ್ಡ್‌ ಆಫೀಸರ್‌ ಆಗಿ ಕೆಲಸ ಮಾಡಿಕೊಂಡಿದ್ದಾರೆ.…

Read more

ಎಂಆರ್‌ಪಿಎಲ್‌ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ; ಪ್ರಕರಣ ದಾಖಲು

ಕಾರ್ಕಳ : ಎಂಆರ್‌ಪಿಎಲ್‌ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಲ್ಲಡ್ಕ ಗ್ರಾಮದ ಸುಚಿತ್ (29) ಉದ್ಯೋಗ ಹುಡುಕುತ್ತಿದ್ದು, ಅವಿನಾಶ್ ಎಂಬಾತ ತನ್ನ ಮಂಗಳೂರು ಕದ್ರಿಯಲ್ಲಿರುವ ಸನ್ನಿಧಿ ಇಂಟಿರಿಯರ್ ಡಿಸೈನ್‌ನಲ್ಲಿ…

Read more

ಸಿಬಿಐ ಅಧಿಕಾರಿಗಳ ಹೆಸರಿನಲ್ಲಿ ವ್ಯಕ್ತಿಗೆ 3.8 ಲಕ್ಷ ರೂ. ವಂಚನೆ

ಕುಂದಾಪುರ : ಸಿಬಿಐ ಅಧಿಕಾರಿಗಳ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ 3.8 ಲಕ್ಷ ರೂ. ವಂಚನೆ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದೆ. ಪ್ರವೀಣ ಕುಮಾರ್ ವಂಚನೆಗೆ ಒಳಗಾದವರು. ಇವರ ಮೊಬೈಲ್‌ಗೆ ಕಾಲ್ ಮಾಡಿದ ಅಪರಿಚಿತ ವ್ಯಕ್ತಿ 2 ಗಂಟೆಯೊಳಗೆ ನಿಮ್ಮ ಮೊಬೈಲ್ ಸ್ಥಗಿತಗೊಳ್ಳುತ್ತದೆ. ಹೆಚ್ಚಿನ…

Read more

ನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ಪಡೆದು ಅಂಗಡಿ ಮಾಲೀಕನಿಗೆ ವಂಚನೆ

ಕುಂದಾಪುರ : ಕುಂದಾಪುರದ ಅಪೂರ್ವ ಚಿನ್ನದ ಅಂಗಡಿಗೆ ಮಹಿಳೆಯರಿಬ್ಬರು ಗ್ರಾಹಕರಂತೆ ಬಂದು ಹಳೆಯ ಚಿನ್ನ ಇದೆ ಎಂದು ಅದನ್ನು ಕೊಟ್ಟು ಹೊಸ ಚಿನ್ನ ಖರೀದಿ ಮಾಡಲು ಇದೆ ಎಂದು ಹೇಳಿ ಸುಮಾರು 2,50,000 ಲಕ್ಷ ರೂ. ವಂಚಿಸಿ ಪರಾರಿಯಾದ ಘಟನೆ ಕುಂದಾಪುರದಲ್ಲಿ…

Read more

ಚೆಕ್ ಅಮಾನ್ಯ ಪ್ರಕರಣ : ಆರೋಪಿಗೆ 2.50 ಲಕ್ಷ ರೂ. ದಂಡ, ಒಂದು ವರ್ಷ ಜೈಲು ಶಿಕ್ಷೆ

ಬಂಟ್ವಾಳ : ಚೆಕ್ ಅಮಾನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪುದು ಗ್ರಾಮದ ಹಸನಬ್ಬ ಅವರಿಗೆ ಶಿಕ್ಷೆ ಪ್ರಕಟಿಸಿ ಬಂಟ್ವಾಳದ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಮಾನ್ಯ ನ್ಯಾಯಾಲಯದ ನ್ಯಾಯಾಧೀಶರಾದ ಭಾಗ್ಯಮ್ಮ ಅವರಿದ್ದ ನ್ಯಾಯಪೀಠ ಈ ತೀರ್ಪು ಪ್ರಕಟಿಸಿದೆ.…

Read more

ಟ್ರೇಡಿಂಗ್ ಹೆಸರಿನಲ್ಲಿ 16.78 ಲಕ್ಷ ರೂ. ಆನ್‌ಲೈನ್ ವಂಚನೆ – ಪ್ರಕರಣ ದಾಖಲು

ಉಡುಪಿ : ಷೇರು ಮಾರುಕಟ್ಟೆ ಟ್ರೇಡಿಂಗ್‌ ಹೆಸರಿನಲ್ಲಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಬ್ದುಲ್ ರಫಿಯತ್ ಎಂಬವರಿಗೆ ದುಷ್ಕರ್ಮಿಗಳು ಷೇರು ಮಾರುಕಟ್ಟೆ ಟ್ರೇಡಿಂಗ್ ಬಗ್ಗೆ ವಾಟ್ಸಾಪ್‌ನಲ್ಲಿ ಮಾಹಿತಿಯನ್ನು ನೀಡುತ್ತಿದ್ದು, ಇದರಲ್ಲಿ ಹಣ…

Read more