ಬೈಂದೂರು : ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಬೆಂಗಳೂರು ಇದರ ವತಿಯಿಂದ ಬೈಂದೂರು ಯೆಡ್ತರೆ ಜೆ.ಎಸ್.ಆರ್. ಸಭಾಂಗಣದಲ್ಲಿ ಆಯೋಜಿಸಲಾದ ಉಡುಪಿ ಜಿಲ್ಲೆಯ 350 ಶಾಲೆಗಳ ವಿದ್ಯಾರ್ಥಿಗಳಿಗೆ 41,000 ಜೊತೆ ಉಚಿತ ಶಾಲಾ ಸಮವಸ್ತ್ರ ವಿತರಣೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇಂದು ನಡೆಯಿತು.

ಈ ಸಂದರ್ಭದಲ್ಲಿ ಸಮಾರಂಭದಲ್ಲಿ ಸಂಸ್ಥೆಯ ಪ್ರವರ್ತಕರಾದ ಡಾ. ಎಚ್. ಎಸ್. ಶೆಟ್ಟಿ, ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ ಶ್ರೀ ಯು. ಟಿ. ಖಾದರ್, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ಪಾಲ್ ಸುವರ್ಣ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ, ಗಣ್ಯರಾದ ಕಂದಾವರ ರಘುರಾಮ ಶೆಟ್ಟಿ, ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಗಣಪತಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.



